Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

100 ಎಂಜನಿಯರಿಂಗ್‌ ಕಾಲೇಜುಗಳ ದತ್ತು: ಪ್ರಿಯಾಂಕ್‌ ಖರ್ಗೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.10: ರಾಜ್ಯದ 100 ವಿವಿಧ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳೊಂದಿಗೆ ವಿವಿಧ 100 ಎಂಜನಿಯರಿಂಗ್‌ ಕಾಲೇಜುಗಳನ್ನು ಜೋಡಿಸಿ ಕೌಶಲ್ಯ ಅಭಿವೃದ್ಧಿಯಲ್ಲಿ ತರಬೇತಿ ನೀಡುವ ಮೂಲಕ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಲ್ಲಿ ಬೇಡಿಕೆಯಿರುವ ಉದ್ಯೋಗಗಳಿಗೆ ಸೂಕ್ತ ರೀತಿಯಲ್ಲಿ ಯುವ ಜನಾಂಗವನ್ನು ಸಜ್ಜುಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರೊಂದಿಗೆ ಇಂದು ನಡೆದ ಮಾಹಿತಿ ತಂತ್ರಜ್ಞಾನ ಕೌಶಲ್ಯ ಸಲಹಾ ಸಮಿತಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ, ಬೆಂಗಳೂರಿನಲ್ಲಿರುವ ಮಾಹಿತಿ ತಂತ್ರಜ್ಞಾನ ಕಂಪೆನಿಗಳಲ್ಲಿ ಲಭ್ಯವಿರುವ ವಿಫುಲ ಹುದ್ದೆಗಳಿಗೆ ಕೌಶಲ್ಯ ನಿಪುಣತೆಯಿರುವ ಅಭ್ಯರ್ಥಿಗಳ ಅವಶ್ಯಕತೆಯಿದೆ, ಅನಿಮೇಷನ್‌, ಗೇಮಿಂಗ್‌, ಕೃತಕ ಬುದ್ಧಿಮತ್ತೆ, ರೊಬೋಟ್ಸ್‌, ಆಟೋಮೆಷಿನ್‌, ದ್ರೋಣ್‌ ಮುಂತಾದ ಕ್ಷೇತ್ರಗಳಲ್ಲಿ ಈಗ ಉದ್ಯೋಗಾವಕಾಶಗಳು ಹೇರಳವಾಗಿದ್ದು ಅಂತಹ ಹುದ್ದೆಗಳಿಗೆ ಯುವಕ ಯುವತಿಯರನ್ನು ಕುಶಲಿಗಳನ್ನಾಗಿ ಸಿದ್ಧ ಮಾಡಲು ತರಬೇತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಸರ್ಕಾರದ ಐಟಿಐ ತರಬೇತಿ ಸಂಸ್ಥೆಗಳು ಸ್ಥಳೀಯ ಉದ್ಯೋಗಕ್ಕೆ ಅನುಗುಣವಾಗಿ ವೃತ್ತಿ ತರಬೇತಿ ನೀಡುವಂತೆ ಮಾರ್ಪಾಟು ಮಾಡಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಸಭೆಯಲ್ಲಿ ಭಾಗಿಗಳಾಗಿದ್ದ ಪ್ರತಿಷ್ಠಿತ ಕಂಪೆನಿಗಳ ಉನ್ನತ ಅಧಿಕಾರಿಗಳು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಹುದ್ದೆಗಳ ಬೇಡಿಕೆಯಿದೆಯಾದರೂ, ಅಭ್ಯರ್ಥಿಗಳಲ್ಲಿ ಕೌಶಲ್ಯ ಪರಿಣತಿ ಇಲ್ಲದಿರುವುದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗುತ್ತಿಲ್ಲ, ಸರ್ಕಾರದಿಂದ ತಾಂತ್ರಿಕ ವಿದ್ಯಾರ್ಹತೆ ಇರುವ ಯುವಕ, ಯುವತಿಯರಿಗೆ ವಿವಿಧ ಕೌಶಲ್ಯ ತರಬೇತಿ ನೀಡಿ ಸಜ್ಜುಗೊಳಿಸಿದಲ್ಲಿ ಐಟಿ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳಿಗೆ ಪೂರಕವಾಗಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಕೌಶಲ್ಯ ಅಭಿವೃದ್ಧಿ ಮಂಡಳಿ ಪ್ರಾಧಿಕಾರದ ಅಧ್ಯಕ್ಷರಾದ ಸರಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕರೂಪ್‌ ಕೌರ್‌ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ