Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಮತ' ಅಭಿಯಾನಕ್ಕೆ ಏಐಸಿಸಿ ಕಾರ್ಯದರ್ಶಿ ಅಭಿಶೇಖ್ ದತ್ತ್ ಚಾಲನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮಾ.30: ವಿಧಾನಸಭಾ ಚುನಾವಣೆಯಲ್ಲಿ 18 ರಿಂದ 23 ವರ್ಷ ವಯಸ್ಸಿನ, ಅದರಲ್ಲೂ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಮತದಾರರನ್ನು ಸೆಳೆಯಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ 'ಯುವ ಮತ' - ನಿಮ್ಮ ಮೊದಲ ಮತವನ್ನು ಸಂಭ್ರಮಿಸಿ ಅಭಿಯಾನ ಆರಂಭಿಸಲಾಗಿದೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಏಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಶೇಖ್ ದತ್ತ್ ಹಾಗೂ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರನ್ನು ಸೆಳೆಯಲು ರಾಜ್ಯದ ಉಸ್ತುವಾರಿಯಾಗಿ ನೇಮಕಗೊಂಡಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರು 'ಯುವ ಮತ' ಜಾಲತಾಣ ಲೋಕಾರ್ಪಣೆ ಮಾಡಿದರು. ಈ ಮೂಲಕ ರಾಜ್ಯಾದ್ಯಂತ ಯುವ ಮತದಾರರಿಗೆ ಧ್ವನಿಯಾಗಲು ಯುವ ಕಾಂಗ್ರೆಸ್ ನಿಂದ ಎಲ್ಲಾ ಶಾಲಾ, ಕಾಲೇಜು, ವಿಶ್ವವಿದ್ಯಾಲಯಗಳು, ಸಾಮಾಜಿಕ, ಸಾಂಸ್ಕೃತಿ ಕಾರ್ಯಕ್ರಮಗಳು, ಮತ್ತಿತರ ಭಾಗಗಳಲ್ಲಿ ವ್ಯಾಪಕ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಿದೆ.

ಈ ಸಂದರ್ಭದಲ್ಲಿ ಅಭಿಶೇಖ್ ದತ್ತ್ ಮಾತನಾಡಿ, ಯುವ ಸಮೂಹಕ್ಕೆ ಕಾಂಗ್ರೆಸ್ ಹೆಚ್ಚಿನ ಒತ್ತು ನೀಡಿದ್ದು, ಇದಕ್ಕಾಗಿ ಯುವ ನಿಧಿ ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿದ್ದು, ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂ ಹಾಗೂ ಡಿಪ್ಲೊಮೋ ಪಡೆದವರಿಗೆ 1,500 ರೂ ನೀಡುತ್ತಿದ್ದು, ಈ ಕಾರ್ಯಕ್ರಮದ ನೋಂದಣಿ ಸಹ 'ಯುವ ಮತ' ಅಭಿಯಾನದ ಸಂದರ್ಭದಲ್ಲಿ ಮಾಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ಪ್ರಮುಖ ಗ್ಯಾರೆಂಟಿ ಯೋಜನೆಯಾಗಿದ್ದು, ಶಿಕ್ಷಣ ಪಡೆದು ಉದ್ಯೋಗವಿಲ್ಲದವರ ತಂದೆ, ತಾಯಿ ಮೇಲೆ ಹೆಚ್ಚಿನ ಒತ್ತಡವಿರುತ್ತದೆ. ಹೀಗಾಗಿ ಅವರು ಯಾರ ಮೇಲೂ ಅವಲಂಬಿತರಾಗದೇ ಸ್ವಾವಲಂಬಿ ಬದುಕು ಸಾಗಿಸಲು ನೆರವು ನೀಡಲಾಗುವುದು. ಜೊತೆಗೆ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರನ್ನು ಪತ್ತೆ ಮಾಡಿ ತಮ್ಮ ಅಮೂಲ್ಯ ಮತವನ್ನು ಸಮರ್ಥವಾಗಿ ಬಳಸುವಂತೆ ಅರಿವು ಮೂಡಿಸಲಾಗುವುದು ಎಂದರು.

ರಕ್ಷಾ ರಾಮಯ್ಯ ಮಾತನಾಡಿ, ಯುವ ಮತದಾರರನ್ನು ಸೆಳೆಯಲು ರಾಜ್ಯಾದ್ಯಂತ ವಿಶೇಷ ಅಭಿಯಾನವನ್ನು ಇಂದಿನಿಂದ ಆರಂಭಿಸಿದ್ದು, 18 ರಿಂದ 23 ವಯೋಮಿತಿಯ ಯುವ ಜನಾಂಗದ ಆಕಾಂಕ್ಷೆ, ನಿರೀಕ್ಷೆಗಳನ್ನು ಸಾಕಾರಗೊಳಿಸಲು ಯುವ ಮತ ಅಭಿಯಾನ ಯುವ ಸಮೂಹಕ್ಕೆ ವೇದಿಕೆಯೂ ಆಗಿದೆ. ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಇತರೆ ಸಮಾನ ಮನಸ್ಕ ಜನ ಸಮೂಹವನ್ನು ಸಹ ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಾಗುವುದು ಎಂದರು.

ಯುವ ಜನರಿಗೆ ಉದ್ಯೋಗ, ಅವರ ಸಾಮಾಜಿಕ ಕಳಕಳಿ, ಪರಿಸರ ಸಂರಕ್ಷಣೆ, ಹವಾಮಾನ ಬದಲಾವಣೆ ಸೇರಿದಂತೆ ಎಲ್ಲಾ ಅಭಿಪ್ರಾಯಗಳನ್ನು ರಾಜ್ಯದ ಉದ್ದಗಲಕ್ಕೂ ಸಂಗ್ರಹಿಸಲಾಗುವುದು. ಜೊತೆಗೆ ಯೂತ್ ಜೋಡೋ – ಬೂತ್ ಜೋಡೋ ಕಾರ್ಯಕ್ರಮವನ್ನು ಸಹ ಜಾರಿಗೊಳಿಸಲಾಗುವುದು. ಎಲ್ಲಾ ಶಿಕ್ಷಣ ಸಂಸ್ಥೆಗಳು, ಕಾರ್ಯಾಗಾರಗಳು, ಪಕ್ಷದ ರಾಷ್ಟ್ರೀಯ ನಾಯಕರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಅಭಿಯಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಮಾಜದ ವಿವಿಧ ವರ್ಗಗಳು, ಚಲನಚಿತ್ರೋದ್ಯಮ, ಕಲೆ, ಸಂಗೀತ ವಲಯದ ಪ್ರಮುಖರನ್ನು ಒಳಗೊಂಡು ಯುವಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ. ಇಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಮುಂದೆ ಕಾಂಗ್ರೆಸ್ ಸರ್ಕಾರದಲ್ಲಿ ಅನುಷ್ಠಾನಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ