Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುಲಿಕೇಶಿನಗರದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಚುನಾವಣಾ ಕಚೇರಿ ಆರಂಭ

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.26: ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಿಂದ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಫ್ರೇಜರ್‌ಟೌನ್‌ನಲ್ಲಿ  ತಮ್ಮ ಚುನಾವಣಾ ಕಚೇರಿ ಪ್ರಾರಂಭ ಮಾಡಿದರು.

ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 60,61 ಮತ್ತು 78 ವಾರ್ಡ್‌ಗಳಿಗೆ ಸಂಬಂಧಿಸಿದಂತೆ ಚುನಾವಣಾ ಕಚೇರಿಯನ್ನು ಪ್ರಾರಂಭಿಸಲಾಗಿದೆ. ಕಚೇರಿ ಉದ್ಘಾಟನೆ ವೇಳೆ ಕ್ಷೇತ್ರದ ನೂರಾರು ಜನರು ಜಮಾಯಿಸಿದ್ದರು. ಜೈಭೀಮ್ ಘೋಷಣೆಗಳನ್ನು ಕೂಗಿದರು.

ಆರಂಭದಲ್ಲಿ ಸಾಂಪ್ರದಾಯಿಕ ಪೂಜೆಗಗಳನ್ನು ನೆರವೇರಿಸುವುದರೊಂದಿಗೆ ಕಚೇರಿ ಉದ್ಘಾಟನೆ ಮಾಡಲಾಯಿತು. ಬಳಿಕ ಮೌಲ್ವಿಗಳು ಪ್ರಾರ್ಥನೆ ಸಲ್ಲಿಸಿ ಅಖಂಡ ಶ್ರೀನಿವಾಸಮೂರ್ತಿ ಅವರ ಗೆಲುವಿಗೆ ಹಾರೈಸಿದರು.

ಕಚೇರಿ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಖಂಡ ಶ್ರೀನಿವಾಸಮೂರ್ತಿ ಅವರು, ಪುಲಿಕೇಶಿನಗರದಲ್ಲಿ 60,61 ಮತ್ತು 78 ಮೂರು ವಾರ್ಡ್‌ ಸೇರಿ ಒಂದು ಮುಖ್ಯ ಕಚೇರಿ ಆರಂಭ ಮಾಡಿದ್ದೇವೆ. ಕ್ಷೇತ್ರದ ಜನರು ಯಾವುದೇ ಸಂದರ್ಭದಲ್ಲಿ ಇಲ್ಲಿಗೆ ಬಂದು ತಮ್ಮ ಕಷ್ಟಸುಖಗಳನ್ನು ಹೇಳಿಕೊಳ್ಳಬಹುದು ಎಂದು ಹೇಳಿದರು.

ನಾನು ಇಲ್ಲಿ ಸ್ಥಳೀಯ ವ್ಯಕ್ತಿ. ಇದೇ ಕ್ಷೇತ್ರದಲ್ಲಿಯೇ ನಾನು ಇಲ್ಲಿ ಹುಟ್ಟಿ ಬೆಳೆದಿದ್ದೇನೆ. ಎಲ್ಲಿಂದಲೋ ಹೊರಗಡೆಯಿಂದ ಬಂದವನಲ್ಲ. ಇಲ್ಲಿ 10 ವರ್ಷಗಳಿಂದ ಇಲ್ಲಿ ಶಾಸಕನಾಗಿ ಸಹ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಹೀಗಾಗಿ ಸಹಜವಾಗಿ ನನಗೆ ಜನರ ಬೆಂಬಲ ಇದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡುವುದರಿಂದ ವಂಚನೆ ಮಾಡಿತು. ಆದರೆ, ಕ್ಷೇತ್ರದ ಜನ ನನ್ನನ್ನು ಬೆಂಬಲಿಸಿ ಚುನಾವಣೆಗೆ ಸ್ಪರ್ಧಿಸುವಂತೆ ಆಗ್ರಹಿಸಿದರು. ಈಗ ಬಿಎಸ್‌ಪಿಯಿಂದ ಸ್ಪರ್ಧಿಸಿದ್ದೇನೆ. ಖಂಡಿತವಾಗಿ ಕಳೆದ ಬಾರಿಯಿಂತ ಈ ಸಲವೂ ಸಹ ಅತಿ ಹೆಚ್ಚಿನ ಮತಗಳ ಅಂತರದಿಂದಲೇ ಗೆಲ್ಲುತ್ತೇನೆ ಎಂದು ಅಖಂಡ ಶ್ರೀನಿವಾಸಮೂರ್ತಿ ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ