Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನ್ನದಾನಕ್ಕಿಂತಲೂ ಶ್ರೇಷ್ಠ ಅಕ್ಷರ ದಾನ : ತೆಲಗರಹಳ್ಳಿ ಗಣೇಶ್ ಅಭಿಮತ

ಸುದ್ದಿಮೂಲ

ಆನೇಕಲ್‌, ಜೂ 14 : ರಾಜಲಾಂಛನ ಸಂಸ್ಥೆ ತೆಲಗರಹಳ್ಳಿ ಗಣೇಶ್ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಎಲ್ .ವೈ.ರಾಜೇಶ್ ಮಾರ್ಗದರ್ಶನದಲ್ಲಿ 21ದಿನಗಳ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ತರಬೇತಿ ಕಾರ್ಯಗಾರ ನಡೆಯಿತು.

ಆನೇಕಲ್ ತಾಲ್ಲೂಕಿನಾದ್ಯಂತ ಹಲವಾರು ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಒಂದು ಕಡೆ ಸೇರಿಸಿ ಉಚಿತವಾಗಿ ಟ್ಯುಷನ್ ಸೌಲಭ್ಯ ನೀಡಲಾಯಿತು. ಮಕ್ಕಳ ಭವಿಷ್ಯದ ಹಿತ ದೃಷ್ಟಿಯಿಂದ ನುರಿತ ಶಿಕ್ಷಕರಿಂದ ಉತ್ತಮ ತರಬೇತಿ ನೀಡಲಾಯಿತು.

ಬಂಡೆಪಾಳ್ಯ ಪೋಲಿಸ್ ಇನ್ಸ್‌ಪೆಕ್ಟರ್ ಎಲ್.ವೈ.ರಾಜೇಶ್, ಪಾಸಾದ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದು ಎಷ್ಟು ಮುಖ್ಯವೋ, ಫೇಲಾದ ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದು ಅಷ್ಟೇ ಮುಖ್ಯ. ಸಂಘ ಸಂಸ್ಥೆಗಳು ಸ್ವಲ್ಪ ಜವಾಬ್ದಾರಿ ತೆಗೆದುಕೊಂಡು ತರಬೇತಿ ನೀಡಿದರೆ ಮಕ್ಕಳು ಉತ್ತಮ ಭವಿಷ್ಯ ಕಂಡುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಉಚಿತ ತರಬೇತಿಗೆ ಸಹಕರಿಸಿದ ನುರಿತ ಶಿಕ್ಷಕರಾದ ನಿವೃತ್ತ ಶಿಕ್ಷಕರಾದ ಶ್ರೀನಿವಾಸ್, ಮಾಯಸಂದ್ರ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ್, ಸರಸ್ವತಿ ವಿದ್ಯಾ ಮಂದಿರ ಶಾಲೆಯ ಲಲಿತ, ರವಿಚಂದ್ರ., ಸಬ್ಮಂಗಲ ಶಾಲೆಯ ಮಹದೇವಪ್ಪ, ಆನೇಕಲ್ ಪಬ್ಲಿಕ್ ಶಾಲೆಯ ನಾಗವೇಣಿ ಅವರುಗಳಿಗೆ ರಾಜಲಾಂಛನ ಸಂಸ್ಥೆಯ ಪರವಾಗಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜಲಾಂಛನ ಕೇಂದ್ರ ಘಟಕದ ಖಜಾಂಚಿ ದಿವ್ಯ ಗೋಪಾಲಕೃಷ್ಣ, ಮಹೇಶ್, ಹೇಮ ನಿರಂಜನ್, ಚೇತನ್, ಯುವ ತಂಡ ಶೀತಲ್‌, ರಾಜಲಾಂಛನ ಆನೇಕಲ್ ಘಟಕದ ಅಧ್ಯಕ್ಷರಾದ ಜಿ.ಸೋಮಶೇಖರ್, ಜಿಗಣಿ ಘಟಕದ ಅಧ್ಯಕ್ಷರಾದ ತೆಲಗರಹಳ್ಳಿ ಗಣೇಶ್ ಸೇರಿದಂತೆ ಹಲವು ಉಪಸ್ಥಿತರಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ