Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಯಿ ಇಂಟರ್ನ್ಯಾಷನಲ್ ರೆಸಿಡೆನ್ಸಿಯಲ್ ಶಾಲೆಯಲ್ಲಿ ಅಕ್ಷರ ಅಭ್ಯಾಸ ಮತ್ತು ಸಂಸ್ಥಾಪಕರ ದಿನಾಚರಣೆ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಜೂ.೮: ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿಯ ಬಶಟ್ಟಹಳ್ಳಿ ಗೇಟ್ ಬಳಿ ಇರುವ ಸಾಯಿ ಇಂಟರ್ನ್ಯಾಷನಲ್ ರೆಸಿಡೆನ್ಸಿಯಲ್ ಶಾಲೆಯಲ್ಲಿ ಅಕ್ಷರ ಅಭ್ಯಾಸ ಮತ್ತು ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.



ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಕಾರ್ಯದರ್ಶಿ ಎಂ. ಮಂಜುನಾಥ್ ರವರು ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆಯಾಗಿದ್ದು, ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿ ಸಮಾಜದ ಮೇರು ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ತರವಾದದ್ದು ವ್ಯಕ್ತಿತ್ವ ವಿಕಸನಕ್ಕೆ ಪೂರಕ ಅಂಶಗಳನ್ನು,ಗುಣಾತ್ಮಕ ಭಾವನೆ ಮೈಗೂಡಿಸಿ ವಿಶಿಷ್ಟ ಸಾಧನೆ ಮಾಡಬಲ್ಲ ಮನೋಬಲ ಹಾಗೂ ಸಹಕಾರವನ್ನು ಮಕ್ಕಳಿಗೆ ಒದಗಿಸಬೇಕೆಂದು ಪೋಷಕರಿಗೆ ಸಲಹೆ ನೀಡಿದರು.ಶಾಲೆಯಲ್ಲಿ ನೀಡುವ ಶಿಕ್ಷಣ ಮಕ್ಕಳಲ್ಲಿಯೇ ಜೀವನ ನಿರ್ವಹಿಸುವ ಪಾಠವನ್ನು ಹೇಳಿಕೊಟ್ಟರೆ,ಮನೆಗಳಲ್ಲಿ ನೀಡುವ ಶಿಕ್ಷಣವು ಮಕ್ಕಳ ಜೀವನವನ್ನೇ ಬದಲಾಯಿಸುವ ಶಕ್ತಿ ಹೊಂದಿರುತ್ತದೆ. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಸಮಾಜದ ಒಳಿತಿಗಾಗಿ ಉಪಯೋಗಿಸುವ ವ್ಯಕ್ತಿಗಳನ್ನಾಗಿ ರೂಪಿಸಬೇಕೆಂದು ತಿಳಿಸಿದರು.

ಈ ಕಾರ್ಯಕ್ರಮದ ಅಂಗವಾಗಿ ಶಾಲೆಯಲ್ಲಿ ವಿಶೇಷ ಪೂಜೆ, ಹೋಮಗಳನ್ನು ಹಮ್ಮಿಕೊಳ್ಳಲಾಗಿತ್ತು



ಅಕ್ಷರಾಭ್ಯಾಸದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದ ಇನ್ನೂರಕ್ಕೂ ಹೆಚ್ಚಿನ ಪೋಷಕರು ತಮ್ಮ ನರ್ಸರಿ ಹಾಗೂ ೧ನೇ ತರಗತಿಯ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಎತ್ತಿಹಿಡಿಯುವ ಇಂತಹ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಲು ಪೋಷಕರು ತಮ್ಮ ಅಭಿಲಾಷೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷೆ ಜೆ.ದೀಪ,ಮುಖ್ಯ ಶಿಕ್ಷಕಿ ಅನುಷ,ಶಿಕ್ಷಕರಾದ ಶ್ರೀಕಾಂತ್, ಚಿಕ್ಕಣ್ಣ,ಶಶಿಕಲಾ,ಸತೀಶ್,ಕಿರಿಜಾ,ವೆನ್ನಲಾ,ಸೌಮ್ಯ,ಅಕೊನೊ ನಾಗಿ,ಅಮರಾವತಿ,ಪ್ರೀತಿ,ರುತ ಕಿಯೋ,ಲವಿಕಲಿ,
ಮಂಜುವಾಣಿ,ಸಿಬ್ಬಂದಿಯಾದ ಸೌಮ್ಯ, ನಾಗಮಣಿ ಇನ್ನು ಮುಂತಾದವರು ಹಾಜರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ