Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಲಕ್ಷ್ಮಣ ಸವದಿ ಜೊತೆ ಇನ್ನು ಅನೇಕರು ಕಾಂಗ್ರೆಸ್ ಸೇರ್ಪಡೆ; ಡಿ.ಕೆ. ಶಿವಕುಮಾರ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.14: ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಅವರ ನಂತರ ಇನ್ನು ಅನೇಕ ನಾಯಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.



ಸಿದ್ದರಾಮಯ್ಯ ಅವರ ನಿವಾಸದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಲಕ್ಷ್ಮಣ ಸವದಿ ಅವರ ಜತೆ ಶುಕ್ರವಾರ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಶಿವಕುಮಾರ್ ಅವರು ಮಾತನಾಡಿದರು.

‘ಲಕ್ಷ್ಮಣ್ ಸವದಿ ಹಿರಿಯ ನಾಯಕರು. ಅವರು ಯಾವುದೇ ಷರತ್ತು ಇಲ್ಲದೇ ಪಕ್ಷಕ್ಕೆ ಸೇರುತ್ತಿದ್ದು, ನಮ್ಮ ಕುಟುಂಬದ ಸದಸ್ಯರಾಗುತ್ತಿದ್ದಾರೆ. ಅವರು ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದು ಅವರಿಗೆ ಶಕ್ತಿ ತುಂಬುವುದು ನಮ್ಮ ಜವಾಬ್ದಾರಿ. ಇಂದು ಪಕ್ಷದ ನಾಯಕರೆಲ್ಲರೂ ಲಕ್ಷ್ಮಣ ಸವದಿ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರನ್ನು ಪಕ್ಷದ ಎಲ್ಲಾ ನಾಯಕರು ತುಂಬು ಹೃದಯದ ಸ್ವಾಗತ ಕೋರುತ್ತೇವೆ.

ಲಕ್ಷ್ಮಣ ಸವದಿ ಅವರ ಜತೆಗೆ ಇನ್ನು ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಎಲ್ಲರನ್ನೂ ನಾವು ಒಮ್ಮತದಿಂದ ಪಕ್ಷಕ್ಕೆ ಸ್ವಾಗತಿಸುತ್ತೇವೆ. ಸವದಿ ಅವರು ಇಂದು ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸಭಾಪತಿಗಳನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ 4.30ಕ್ಕೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ’ ಎಂದು ಅವರು ತಿಳಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ