Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಜನಾಂಗ ರಂಗಭೂಮಿಯಲ್ಲಿ ತೊಡಗಿಸಿಕೊಳ್ಳಬೇಕು : ಅಂಬರೀಶ್ ಗೌಡ

ಸುದ್ದಿಮೂಲ ವಾರ್ತೆ

ದೇವನಹಳ್ಳಿ,ಆ.21: ತಾಲೂಕಿನ ಇಬ್ಬರು ಕಲಾವಿದರು ತಮ್ಮದೇ ಆದ ರೀತಿಯಲ್ಲಿ ರಂಗಭೂಮಿ ಕ್ಷೇತ್ರದಲ್ಲಿ ಸಾಕಷ್ಟು ಪ್ರಶಸ್ತಿಗಳನ್ನು ಪಡೆದುಕೊಳ್ಳುವುದರ ಮೂಲಕ ತಾಲೂಕಿನ ಹಿರಿಮೆಯನ್ನು ಹೆಚ್ಚಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಸಂಚಾಲಕ ನಿಲೇರಿ ಅಂಬರೀಶ್‌ಗೌಡ ಶ್ಲಾಘಿಸಿದರು.

ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಜಿಲ್ಲಾ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ರಂಗಭೂಮಿ ಕಲಾವಿದರಾದ ರಬ್ಬನಹಳ್ಳಿ ಡಾ.ಡಿ.ಕೆಂಪಣ್ಣ ಮತ್ತು ಹೊಸಹಳ್ಳಿ ವಾಸುದೇವ್ ಅವರುಗಳನ್ನು ಅಭಿನಂದಿಸಲಾಯಿತು.

ಬಳಿಕ ಮಾತನಾಡಿದ ಅವರು, ತಾಲೂಕು ಎಲ್ಲಾ ಕ್ಷೇತ್ರದಲ್ಲಿಯೂ ಮುಂದಿದೆ. ಅನೇಕ ಸಾಮಾಜಿಕ ಕೆಲಸಗಳನ್ನು ಗುರುತಿಸಿ ನಮ್ಮ ತಾಲ್ಲೂಕಿನವರಿಗೆ ಕರ್ನಾಟಕ ರತ್ನ ಶ್ರೀ ಲೋಕೇಶ್ ಸ್ಮರಣಾರ್ಥ ಪ್ರಶಸ್ತಿಯನ್ನು ದೊಡ್ಡ ಹೊಸಹಳ್ಳಿ ವಾಸುದೇವ್ ಅವರಿಗೆ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಕೆಂಪಣ್ಣ ರವರಿಗೆ ನೀಡಿರುವುದು ಸಂತಸದ ವಿಷಯವಾಗಿದೆ. ರಂಗಭೂಮಿಯಲ್ಲಿ ಬಂದಿರುವ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಇಂತಹ ಕಾರ್ಯಕ್ರಮಗಳಿಂದ ಯುವಜನಾಂಗ ಮತ್ತಷ್ಟು ಕಲಾ ಭೂಮಿಯಲ್ಲಿ ತೊಡಗಿಸಿಕೊಳ್ಳಲು ಆದರ್ಶವಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಪ್ರತಾಪ್, ಪುನಿತಾ, ರೂಪೇಶ್, ಮಧು, ಗಣೇಶ್, ಸುರೇಶಾಚಾರ್, ರಾಜೇಶ್, ಮಂಜುನಾಥ್ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ