Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಪೀಳಿಗೆಗೆ ಅಂಬೇಡ್ಕರ್‌ ಜ್ಞಾನ ಆದರ್ಶ

ಸುದ್ದಿಮೂಲ ವಾರ್ತೆ

ತುಮಕೂರು ನ.09 : ಇಂದಿನ ಯುವ ಪೀಳಿಗೆಗೆ ಅಂಬೇಡ್ಕರ್ ಜ್ಞಾನ ಆದರ್ಶವಾಗಬೇಕು. ಅವರ ಸಮಗ್ರ ಕೃತಿಗಳನ್ನು ಓದುವುದರ ಮೂಲಕ ಜ್ಞಾನವನ್ನು, ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಸಚಿವರಾದ ನಹೀದಾ ಜಮ್ ಜಮ್ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಮಕೂರು ವಿಶ್ವವಿದ್ಯಾನಿಲಯ, ಡಾ:ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ, ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ “ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಿರಂತರ ಅಧ್ಯಯನ, ಏಕಾಗ್ರತೆ, ಸ್ವಅರಿವು, ಶಿಸ್ತು, ದೃಢಸಂಕಲ್ಪ ಇವೆಲ್ಲವನ್ನು ಮೈಗೂಡಿಸಿಕೊಂಡ ಕಾರಣದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಜಗತ್ ಪ್ರಸಿದ್ಧಿ ಪಡೆದು ಈ ದೇಶದ ಶೋಷಿತರ ಮತ್ತು ಮಹಿಳೆಯರ ಬೆಳಕಾಗಿ ಇಂದಿಗೂ ಸಾಧನೆಯ ಶಿಖರವಾಗಿದ್ದಾರೆ. ಇಂದಿನ ವಿದ್ಯಾರ್ಥಿಗಳು ಮೌಢ್ಯತೆಗಳಿಗೆ ಮಾರು ಹೋಗದೆ ವೈಚಾರಿಕ ಮನೋಭಾವದಿಂದ ದೇಶವನ್ನು ಕಟ್ಟಲು ಅನೇಕ ರೀತಿಯ ಬರಹ ಭಾಷಣಗಳನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ತಿಳಿಸಿದರು.

ತುಮಕೂರು ವಿಶ್ವವಿದ್ಯಾನಿಲಯದ ಐಕ್ಯೂಎಸಿ ನಿರ್ದೇಶಕ ಪ್ರೊ. ಬಿ. ರಮೇಶ್ ಮಾತನಾಡಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಗಳು ಇಂದಿಗೆ ಅತ್ಯಗತ್ಯವಾಗಿ ಬೇಕಾಗಿದೆ. ಇಂದಿನ ಸಮಾಜವು ಆಧುನಿಕತೆಯ ಮಾರ್ಗದಲ್ಲಿ ಸಾಗುತ್ತಿದ್ದರೂ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ, ಕೋಮುವಾದ, ಅಸಮಾನತೆ, ಬಂಡವಾಳ ಶಾಹಿ ವ್ಯವಸ್ಥೆ ಇವೆಲ್ಲವು ಸಂವಿಧಾನದ ಆಶಯಗಳನ್ನು ನಾಶ ಮಾಡುತ್ತಿವೆ. ಡಾ. ಬಿ.ಆರ್.ಅಂಬೇಡ್ಕರ್ ರವರ ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆ ಸರಿಯಾದ ರೀತಿಯಲ್ಲಿ ಅರ್ಥೈಸಿಕೊಂಡಾಗ ಸಂವಿಧಾನದ ನೈಜ ಆಶಯಗಳು ಅರ್ಥವಾಗುತ್ತವೆ. ಸಮಾಜವು ಸುಧಾರಣೆಯಾಗುತ್ತದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೇಲ್ವಿಚಾರಕ ಸುರೇಶ್ ಕುಮಾರ್ ಅವರು ಮಾತನಾಡುತ್ತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖೇನ ಪ್ರತಿವರ್ಷವು ಕಾಲೇಜು ಮಕ್ಕಳಿಗೆ ಡಾ ಬಿ. ಆರ್. ಅಂಬೇಡ್ಕರ್ ಜೀವನ, ಸಾಧನೆ, ಬರಹ, ಭಾಷಣಗಳನ್ನು ಕುರಿತಂತೆ ಪ್ರಬಂಧ, ಆಶುಭಾಷಣ, ಚರ್ಚಾ ಸ್ಪರ್ಧೆ, ಕವನ ವಾಚನ ಮೊದಲಾದ ವಿಷಯಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ಅದರಲ್ಲಿ ವಿಜೇತ ಮಕ್ಕಳಿಗೆ ಪುಸ್ತಕ ರೂಪದಲ್ಲಿ ಬಹುಮಾನಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ತರನಮ್ ನಿಖತ್.ಎಸ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಉಪನ್ಯಾಸಕರಾದ ಪ್ರೊ. ದೊಡ್ಡ ದುರ್ಗಪ್ಪ , ಉಪನ್ಯಾಸಕ ಸಿ. ಆರ್. ಮನೋಜ್ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ