ಸೊರಕಾಯಲಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ
ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಏ.15: ತಾಲ್ಲೂಕಿನ ತುಮ್ಮನಹಳ್ಳಿ ಗ್ರಾ.ಪಂ.ವ್ಯಾಪ್ತಿಗೆ ಬರುವ ಸೊರಕಾಯಲಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಹಾಗೂ ಗ್ರಾಮಸ್ಥರಿಂದ ಡಾ ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಅಂಗವಾಗಿ ಕೇಕ್ ಕತ್ತರಿಸಿ ಹಾಗೂ ಸಿಹಿ ಹಂಚಿ ಅನ್ನ ಸಂತರ್ಪಣೆ ಮಾಡಲಾಯಿತು.
ಡಾ.ಬಿ.ಆರ್ ಅಂಬೇಡ್ಕರ್ 132ನೇ ಜಯಂತಿ ಅಂಗವಾಗಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಡಾ. ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಹಾಗೂ ಗ್ರಾಮಸ್ಥರಿಂದ ಪುಷ್ಪ ನಮನವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ಮದ್ದೂರಮ್ಮ ಮುನಿರಾಜು, ಮುಖಂಡರಾದ ಸಂಜೀವಯ್ಯ, ಎಸ್ ಎಂ ದಾಸ್,ಮನಿನಾರಾಯಣಪ್ಪ, ನಾರಾಯಣಸ್ವಾಮಿ, ಎಸ್.ಎಂ. ದೇವರಾಜ್, ಡಾ.ಬಿ.ಆರ್. ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷ ಎಸ್.ಆರ್ ವೆಂಕಟೇಶ್, ಉಪಾಧ್ಯಕ್ಷ ಅರುಣ್ ಕುಮಾರ್, ಕಾರ್ಯದರ್ಶಿ ವಿಜಯಕುಮಾರ್, ಖಜಾಂಚಿ ಪ್ರಸನ್ನ ಕುಮಾರ್, ಸದಸ್ಯರಾದ ಅಜಯ್ ಕುಮಾರ್, ರಾಜು, ಚಿನ್ನಿ, ಶಿವಾನಂದ, ಕಲ್ಯಾಣ್,ಮಣಿ ಕುಮಾರ್,ಹಾಗೂ ಪತ್ರಕರ್ತರಾದ ನವೀನ್ ಕುಮಾರ್ ಎಸ್ ಎಲ್ ಇನ್ನು ಮುಂತಾದವರು ಹಾಗೂ ಗ್ರಾಮಸ್ಥರು ಹಾಜರಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.