Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಡಿಕೇರಿಯಲ್ಲಿ ಅಮಿತ್ ಶಾ ರೋಡ್ ಶೋ

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ. 30: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಡಿಕೇರಿ ನಗರದಲ್ಲಿ ರೋಡ್ ಶೋ ನಡೆಸಿದರು.

ನಗರದ ಚೌಡೇಶ್ವರಿ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿದ ಅಮಿತ್ ಶಾ ಸುಮಾರು ಎರಡು ಕಿಲೋಮೀಟರ್ ರೋಡ್ ಶೋನಲ್ಲಿ ಪಾಲ್ಗೊಂಡರು. ಅವರೊಂದಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ, ವಿರಾಜಪೇಟೆ ಕ್ಷೇತ್ರದ ಹಾಲಿ ಶಾಸಕರಾದ ಕೆ.ಜಿ.ಬೋಪಯ್ಯ, ಮಡಿಕೇರಿ ಕ್ಷೇತ್ರದ ಅಪ್ಪಚ್ಚು ರಂಜನ್ ಭಾಗಿಯಾಗಿದ್ದರು.

ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆಂದು ನಗರಕ್ಕೆ ಭೇಟಿ ನೀಡಿದ ಶಾ ಅವರು ರೋಡ್ ಶೋನಲ್ಲಿ ಮಾತ್ರ ಭಾಗವಹಿಸಿದ್ದರು. ಸುಮಾರು ಎರಡು ಗಂಟೆಗಳ ತಡವಾಗಿ ಆಗಮಿಸಿದ ಅವರು ರೋಡ್ ಶೋವನ್ನು ಅರ್ಧಕ್ಕೆ ನಿಲ್ಲಿಸಿದರು. ನಂತರ ಕೆಲ ಮಾಧ್ಯಮಗಳೊಂದಿಗೆ ಮಾತನಾಡಿದ ಅಮಿತ್ ಶಾ, ಕೊಡಗು ಅಥವಾ ಕರಾವಳಿ ಕರ್ನಾಟಕದಲ್ಲಿ ಬಿಜೆಪಿಗೆ ಯಾವುದೇ ಪ್ರತಿಸ್ಪರ್ಧಿಯಿಲ್ಲ. ಬಿಜೆಪಿ ಬಹುಮತದಿಂದ ಗೆದ್ದು ಡಬಲ್ ಇಂಜಿನ್ ಸರ್ಕಾರ ರಚಿಸಲಿದೆ. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕರ್ನಾಟಕ ಅಭಿವೃದ್ಧಿಯತ್ತ ಸಾಗಲಿದೆ ಎಂದರು.

ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಮಾಡಿರುವ ಹಲವಾರು ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಶಾ, ಕಾಂಗ್ರೆಸ್ ಎಷ್ಟು ಕೆಟ್ಟ ಪದಗಳನ್ನು ಬಳಸುತ್ತದೆಯೋ, ಅದು ಬಿಜೆಪಿಗೆ ಹೆಚ್ಚಿನ ಬಲವನ್ನು ನೀಡುತ್ತದೆ. ರೋಡ್ ಶೋನಲ್ಲಿ ಪಾಲ್ಗೊಳ್ಳಲು ಜಿಲ್ಲೆಯ ಗ್ರಾಮೀಣ ಭಾಗಗಳಿಂದ ಸಾವಿರಾರು ಮಂದಿ ಆಗಮಿಸಿದ್ದರು.

ಏತನ್ಮಧ್ಯೆ, ಹೆಚ್ಚುವರಿ ಪೊಲೀಸ್ ಪಡೆಯನ್ನು ನಗರದಾದ್ಯಂತ ನಿಯೋಜಿಸಲಾಗಿತ್ತು. ಬೆಂಗಾವಲು ಪಡೆಗೆ ದಾರಿ ಮಾಡಿಕೊಡಲು ಬೆಳಿಗ್ಗೆಯಿಂದಲೇ ನಗರದ ರಸ್ತೆಗಳನ್ನು ನಿರ್ಬಂಧಿಸಲಾಗಿತ್ತು. ಬೆಳಗ್ಗೆ 7 ಗಂಟೆಯಿಂದಲೇ ರಾಜಾ ಸೀಟ್‌ಗೆ ಪ್ರವಾಸಿಗರ ಪ್ರವೇಶವನ್ನು ಪೊಲೀಸರು ನಿಷೇಧಿಸಿದ್ದರು. ಹಲವರು ಪ್ರವಾಸಿ ತಾಣದ ಹೊರಗೆ ಕಾದು ನಿರಾಶರಾಗಿ ಹಿಂತಿರುಗಿದರು. ರೋಡ್ ಶೋ ವೇಳೆ ನಗರದಾದ್ಯಂತ ವಿಶೇಷ ಪಡೆಗಳು ಸೇರಿದಂತೆ 600ಕ್ಕೂ ಹೆಚ್ಚು ಪೊಲೀಸ್ ಪಡೆಗಳು ಭದ್ರತೆ ಒದಗಿಸಿದ್ದವು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ