Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ್ಳೆಯದನ್ನೇ ಬಿತ್ತಿ ಒಳ್ಳೆಯದನ್ನೇ ಬೆಳೆಯಬೇಕು : ಆಂಧ್ರ ರಾಜ್ಯಪಾಲ ಜಸ್ಟಿಸ್ ಅಬ್ದುಲ್ ನಜೀರ್

ಬೆಂಗಳೂರು, ಜೂ, 6; ಸಮಾಜದಲ್ಲಿ ನಿಸ್ವಾರ್ಥ ಸೇವೆ ಅಗತ್ಯವಿದ್ದು, ಸೇವಾ ಮನೋಭಾವದ ಸಾಧಕರನ್ನು ಗುರುತಿಸು ಪ್ರೋತ್ಸಾಹಿಸುವುದು ಇಂದಿನ ಅಗತ್ಯ ಎಂದು ಆಂಧ್ರಪ್ರದೇಶ ರಾಜ್ಯಪಾಲ ಜಸ್ಟಿಸ್ ಅಬ್ದುಲ್ ನಜೀರ್ ಹೇಳಿದ್ದಾರೆ.

ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ದಾದಿಯರಿಗೆ ನ್ಯಾಷನಲ್ ಫ್ಲೋರೆನ್ಸ್ ನೈಟಿಂಗೆಲ್ ನರ್ಸ್ ಪ್ರಶಸ್ತಿ ಮತ್ತು ಸಾಮಾಜಿಕ ನ್ಯಾಯ ವಲಯದಲ್ಲಿ ಮದರ್ ಥೆರೆಸಾ ಸ್ಮಾರಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಸಮಾಜದಲ್ಲಿ ಸೇವಾ ಮನೋಭಾವನೆ ಇನ್ನಷ್ಟು ಹೆಚ್ಚಾಗಬೇಕು. ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದು, ಇದರೊಂದಿಗೆ ಮಾನವೀಯ ಗುಣಗಳು ಸಹ ಹೆಚ್ಚಾಗಬೇಕು. ಸಂಕಷ್ಟ ಮತ್ತು ಅಗತ್ಯವಿರುವವರಿಗೆ ಸಮಾಜ ಬೆಂಬಲವಾಗಿ ನಿಲ್ಲಬೇಕು ಎಂದರು.

ಮಾನವೀಯ ಸೇವೆಗೆ ಫ್ಲಾರೆನ್ಸ್ ನೈಟಿಂಗೇಲ್ ಮತ್ತು ಮದರ್ ಥೆರಾಸಾ ಮಾದರಿಯಾಗಿದ್ದು, ಸಾಧಕರು ಇವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಕೂಡ ವಿಶೇಷವಾಗಿದ್ದು, ಸಮಾಜದಲ್ಲಿ ಒಳ್ಳೆಯತವನ್ನು ಬಿತ್ತಿ ಒಳ್ಳೆಯದನ್ನೇ ಬೆಳೆಯಬೇಕು ಎಂದು ರಾಜ್ಯಪಾಲ ಜಸ್ಟಿಸ್ ಅಬ್ದುಲ್ ನಜೀರ್ ಹೇಳಿದರು.

ಹಿರಿಯ ಸಹಕಾರಿ ಧುರೀಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರೀಯ ಸಹಕಾರ ಒಕ್ಕೂಟದ ಗೌರವಾನ್ವಿತ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್ ಸೇರಿದಂತೆ ಹಲವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಸ್. ಚಂದ್ರಶೇಖರ ಶೆಟ್ಟಿ, ಸಿಸ್ಟರ್ ಮೇರಿ ಅಗ್ಮೀಸ್, ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ