Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ 5 ವರ್ಷದಲ್ಲಿ ಅನಿಮಿಯ ಮುಕ್ತ ಕರ್ನಾಟಕ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.22: ರಾಜ್ಯದಲ್ಲಿ ರಕ್ತಹೀನತೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅನಿಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಹಿಳೆ ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಈಗಾಗಲೇ ಅದಕ್ಕೆ ಪೂರಕವಾದಂತಹ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಕ್ತ ಹೀನತೆ ಮಹಿಳೆ ಮತ್ತು ಮಕ್ಕಳನ್ನು ಕಾಡುತ್ತಿರವ ಬಹುದೊಡ್ಡ ಸಮಸ್ಯೆಯಾಗಿದ್ದು, ಇದರ ನಿವಾರಣೆಗಾಗಿ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸುವುದರ ಜೊತೆಗೆ ಯೋಜನೆಯ ಯಶಸ್ಸಿಗೆ ಪರಿಣಾಮಕಾರಿಯಾಗಿ ಕೆಲಸ ಮಾಡಲಿದ್ದೇವೆ ಎಂದು ಸಚಿವರು ತಿಳಿಸಿದರು.

ಈ ಮೂಲಕ ಮುಂದಿನ ಐದು ವರ್ಷದಲ್ಲಿ ರಾಜ್ಯವನ್ನು ಅನಿಮಿಯ ಮುಕ್ತವಾಗಿಸಲು ಶ್ರಮಿಸುತ್ತೇವೆ ಎಂದರು. ಮಹಿಳೆಯರಿಗೆ ಆಹಾರದ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಸಿರಿ ಧಾನ್ಯಗಳ ಬಳಕೆ ಹಾಗೂ ಅದರ ಉಪಯೋಗದ ಬಗ್ಗೆಯೂ ತಿಳಿಸಬೇಕಿದೆ. ಈ ನಿಟ್ಟಿನಲ್ಲಿ ಇದೊಂದು ಮಹತ್ವಪೂರ್ಣ ಯೋಜನೆಯಾಗಿದೆ ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ಅನೀಮಿಯಾ ಕಡಿಮೆ ಮಾಡುವುದರ ಮೂಲಕ ತಾಯಂದಿರು ಮತ್ತು ಮಕ್ಕಳ ಪೌಷ್ಟಿಕಾಂಶದ ಸ್ಥಿತಿಯನ್ನು ಸುಧಾರಣೆ ಮಾಡಬೇಕಾಗಿರುವುದು ನಮ್ಮೆಲ್ಲರ ಹೊಣೆಯಾಗಿದೆ. ಈ ಕಾರ್ಯಕ್ರಮವು, ರಾಜ್ಯದಲ್ಲಿ ಪೌಷ್ಠಿಕಾಂಶದ ಸ್ಥಿತಿಯನ್ನು ಸುಧಾರಿಸಲು ಅಸ್ತಿತ್ವದಲ್ಲಿರುವ ಕಾರ್ಯಕ್ರಮಗಳನ್ನು ಒಟ್ಟುಗೂಡಿಸಲಿದೆ ಎಂದು ಸಚಿವರು ಹೇಳಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ