Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

'ಭಾರತ್‌ಜೋಡೊ'ಗೆ ವರ್ಷ: ಸಿಎಂ, ಡಿಸಿಎಂ 5 ಕಿ.ಮೀ. ಪಾದಯಾತ್ರೆ





ಸುದ್ದಿಮೂಲ ವಾರ್ತೆ
ರಾಮನಗರ, ಸೆ.7: ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರು ರಾಮನಗರದಲ್ಲಿ ಗುರುವಾರ 5 ಕಿ.ಮೀ. ಪಾದಯಾತ್ರೆ ನಡೆಸಿದರು.ಭಾರತದ ಸೌಹಾರ್ದ ಮತ್ತು ಮಾನವೀಯ ಪರಂಪರೆಯನ್ನು ಮರು ಜೋಡಣೆ ಮಾಡುವ ಸಲುವಾಗಿ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರ ನೇತೃತ್ವದಲ್ಲಿ ಭಾರತ್ ಜೋಡೊ ಪಾದಯಾತ್ರೆ ನಡೆಸಲಾಗಿತ್ತು.

ಈ ವೇಳೆ ಸಂಸದ ಡಿ.ಕೆ.ಸುರೇಶ್, ಸಚಿವ ಮಂಕಾಳ ವೈದ್ಯ ಸೇರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳು ಸಾವಿರಾರು ಕಾರ್ಯಕರ್ತ ಸಮೂಹದ ಜತೆಗೆ ಹೆಜ್ಜೆ ಹಾಕಿದರು. ಬಳಿಕ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದರು.

ಬಳಿಕ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವತ್ತೂ ಭಾಗವಹಿಸದ ಬಿಜೆಪಿ ಪರಿವಾರ ಸ್ವಾತಂತ್ರ್ಯ ಸೇನಾನಿ ಮಹಾತ್ಮಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು. ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ ಪುಣ್ಯಾತ್ಮ ಮಹಾತ್ಮಗಾಂಧಿಯನ್ನು ಗುಂಡಿಟ್ಟು ಕೊಲ್ಲುವಂಥಾದ್ದು ಏನಾಗಿತ್ತು ? ಗಾಂಧಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದೇ ತಪ್ಪಾಯ್ತಾ ? ಗಾಂಧಿ ಬ್ರಿಟಿಷರನ್ನು ವಿರೋಧಿಸಿದರು ಎನ್ನುವ ಕಾರಣಕ್ಕೆ ಗಾಂಧಿಯನ್ನು ಕೊಂದಿದ್ದಾ ? ಎಂದು ಬಿಜೆಪಿ ಪರಿವಾರವನ್ನು ಪ್ರಶ್ನಿಸಿದರು.

ಮೋದಿ ಅವರು ಪ್ರಧಾನಿ ಆದ ಬಳಿಕ ಭಾರತೀಯರ ಭಾವನೆಗಳನ್ನು ಕೆರಳಿಸಿ, ಭಾರತೀಯ ಸಮಾಜವನ್ನು ವಿಭಜಿಸಿ, ಭಾರತೀಯರ ಹೃದಯಗಳನ್ನು ಒಡೆಯುವ ಮೂಲಕ ಎಷ್ಟಾಗುತ್ತೋ ಅಷ್ಟು ಮತ ಗಿಟ್ಟಿಸಲು ಯತ್ನಿಸುತ್ತಿದ್ದಾರೆ. ಭಾರತೀಯರನ್ನು ವಿಭಜಿಸಿ, ಹಿಂಸಿಸಿ ಮತಗಳಿಸುವ ದುರ್ಗತಿ ಬಿಜೆಪಿಗೆ ಬಂದಿದೆ ಎಂದು ಟೀಕಿಸಿದರು.

ದಲಿತರು, ಹಿಂದುಳಿದವರು, ಅಲ್ಪ ಸಂಖ್ಯಾತರು, ಮಹಿಳೆಯರು, ದುಡಿಯುವ ವರ್ಗಗಳು, ಶ್ರಮಿಕರು ಆತಂಕ ಅಭದ್ರತೆಯಲ್ಲಿ ಬದುಕುವಂಥಾ ಹೀನಾಯ ಸ್ಥಿತಿಗೆ ದೇಶವನ್ನು ದೂಡಿದ್ದರು. ಭಾರತವನ್ನು ಕಟ್ಟಿದ ಸಮುದಾಯಗಳನ್ನು ಛಿದ್ರಗೊಳಿಸುವುದನ್ನು ವಿರೋಧಿಸಿ ಬೆವರಿನ ಸಂಸ್ಕೃತಿಯ ಎಲ್ಲರನ್ನೂ ಒಟ್ಟುಗೂಡಿಸುವ ಸಲುವಾಗಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯಿತು ಎಂದರು.

ರಾಮನಗರಕ್ಕೆ ವಿಶೇಷ ಅನುದಾನ:
ರಾಮನಗರ ಜಿಲ್ಲೆಯ ಇವತ್ತಿನ ದುಸ್ಥಿತಿಗೆ ಯಾರು ಕಾರಣ ? ಇಷ್ಟು ವರ್ಷ ರಾಮನಗರ ಜಿಲ್ಲೆ ಯಾರ ಹಿಡಿತದಲ್ಲಿತ್ತು  ಎಂದು ಸಾರ್ವಜನಿಕರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಸಾರ್ವಜನಿಕರು ಜೆಡಿಎಸ್ ಎಂದು ಕೂಗಿದರು.

ಈಗ ನಾವು ಅಧಿಕಾರಕ್ಕೆ ಬಂದಿದ್ದೇವೆ. ರಾಮನಗರ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವಕ್ಕೆ ಜಿಲ್ಲೆಯ ಜನ ಸಾಕ್ಷಿಯಾಗುತ್ತಾರೆ. ಸಂಸದ ಡಿ.ಕೆ.ಸುರೇಶ್ ಅವರು ಬಹಳ ಕೆಲಸ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ ಒಟ್ಟಾದರೂ ಡಿ.ಕೆ.ಸುರೇಶ್ ಅವರನ್ನು ಸೋಲಿಸಲು ಸಾಧ್ಯವಿಲ್ಲ. ರಾಮನಗರದ ಅಭಿವೃದ್ಧಿ ಪರ್ವವನ್ನು ವೇಗಗೊಳಿಸುವ ಜವಾಬ್ದಾರಿ ನಮ್ಮ ಸರ್ಕಾರದ ಜವಾಬ್ದಾರಿ. ನಾವು ಮಾಡಿ ತೋರಿಸ್ತೀವಿ. ಜನವರಿ ವೇಳೆಗೆ ರಾಮನಗರಕ್ಕೆ ವಿಶೇಷ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದರು.

ಹಿಂದಿನ ಸರ್ಕಾರದ ಸಚಿವ ಅಶ್ವಥ್ ನಾರಾಯಣ್ ಜಿಲ್ಲೆಗೆ ಏಕೆ ಮೆಡಿಕಲ್ ಕಾಲೇಜು ಕೊಡಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಜಿಲ್ಲೆಗೆ ಬಂದಿದ್ದ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ತಗೊಂಡು ಹೋಗಿದ್ದು ಸಚಿವ ಸುಧಾಕರ್. ಇಬ್ಬರೂ ಬಿಜೆಪಿಯವರೇ. ಜಿಲ್ಲೆಗೆ ಅನ್ಯಾಯ ಆಗಿದ್ದು ಇದೇ ಬಿಜೆಪಿಯವರಿಂದ. ಇವರ ಜತೆ ಕೈ ಜೋಡಿಸಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ. ಇಬ್ಬರಿಗೂ ನೈತಿಕತೆ ಇಲ್ಲ

ರಾಮನಗರದಲ್ಲಿ, ಕನಕಪುರದಲ್ಲಿ ಎರಡೂ ಕಡೆ ಮೆಡಿಕಲ್ ಕಾಲೇಜು ಬೇಕು ಎಂದರೆ ಎರಡೂ ಕಡೆ ಮಾಡಲು ನಾವು ಸಿದ್ದ ಎಂದು ಹೇಳಿದರು.





Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ