Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿವೃದ್ದಿಗೆ ಸಹಕಾರ ನೀಡಲು ಜಿಲ್ಲಾಧಿಕಾರಿಗೆ ಮನವಿ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಸೆ. 16 : ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಅಭಿವೃದ್ದಿ ಕಾಮಗಾರಿಗೆ ಬಿಡುಗಡೆಗೆ ಮಾಡಿದ್ದ ಅನುದಾನವನ್ನು ಸರ್ಕಾರ ತಡೆ ಹಿಡಿದಿದ್ದು ತ್ವರಿತವಾಗಿ ಬಿಡುಗಡೆ ಮಾಡಿ ಅಭಿವೃದ್ದಿಗೆ ಸಹಕಾರ ನೀಡಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷ ಡಿ.ಕೆ.ನಾಗರಾಜ್ ಮನವಿ ಮಾಡಿದರು.

ಹೊಸಕೋಟೆ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ನಗರೋತ್ಥಾನ ನಾಲ್ಕನೇ ಹಂತದಲ್ಲಿ 25 ಕೋಟಿ ಹಾಗೂ ಸಚಿವರ ವಿವೇಚನಾ ಅಡಿಯಲ್ಲಿ 30 ಕೋಟಿ ಹಣದಲ್ಲಿ ಟೆಂಡರ್ ಆಗಿ ಕಾಮಗಾರಿ ನಡೆಯುತ್ತಿದ್ದವು.

ನಗರೋತ್ಥಾನ ಯೋಜನೆಯ 25 ಕೋಟಿಯಲ್ಲಿ 20 ಕೋಟಿ ಟೆಂಡರ್ ಕರೆದು ಕಾಮಗಾರಿ ಪ್ರಾರಂಭ ಮಾಡಿ 10 ಕೋಟಿ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಇನ್ನೂ 10 ಕೋಟಿ ಹಣ ಬಾಕಿ ಇದೆ ಎಂದರು.

ಸಚಿವರ ವಿವೇಚನಾ ಅಡಿಯಲ್ಲಿ ಬಂದಿದ್ದ 30 ಕೋಟಿ ಅನುದಾನದಲ್ಲಿ 1 ಕೋಟಿ ಸರ್ಕಾರಕ್ಕೆ ವಾಪಸ್ ಹೋಗಿದ್ದು ಉಳಿದ 29 ಕೋಟಿಯಲ್ಲಿ 4 ಕೋಟಿ ಕೆಲಸ ಆಗಿದೆ. ಬಾಕಿ 25ಕೋಟಿ ಇದೆ. ಆದರೆ, ನಂತರ ಬಂದ ಕಾಂಗ್ರೆಸ್ ಸರ್ಕಾರ ಕಾಮಗಾರಿ ಬಿಲ್‌ಗಳನ್ನು ತಡೆಹಿಡಿದಿದ್ದು ರಸ್ತೆ, ಬೀದಿ ದೀಪ, ಚರಂಡಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ.

ಈಗ ನಗರಸಭೆಗೆ ಆಡಳಿತ ಅಧಿಕಾರಿ ಜಿಲ್ಲಾಧಿಕಾರಿಗಳೇ ಆಗಿದ್ದು, ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಬಾಕಿ ಅನುದಾನ ಇದೆ. ಆದ್ದರಿಂದ ಇತ್ತ ಗಮನಹರಿಸಿ ಕಾಮಗಾರಿಗೆ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ನಗರಸಭೆ ಸದಸ್ಯ ಗುಲ್ಜಾರ್, ನಗರಸಭೆ ಸದಸ್ಯರಾದ ಗುಳ್ಳು ನಾಗರಾಜ್, ಸೋಮಶೇಖರ್, ರಾಮಾಂಜಿನಿ, ಬಸವರಾಜ್, ವೆಂಕಟೇಶ್, ಶೋಭಾ ಶಿವಾನಂದ್, ಆಶಾ ರಾಜಶೇಖರ್, ರತ್ನಮ್ಮ ರಾಜಣ್ಣ, ಶೋಭಾ ಜುಂಜಪ್ಪ, ಬಿಜೆಪಿ ಮುಖಂಡ ಶೌರತ್ ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ