Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂನ್ 17 : ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆಸಕ್ತ ರೈತ, ರೈತ ಮಹಿಳೆ ಮತ್ತು ವಿಸ್ತರಣಾ ಕಾರ್ಯಕರ್ತರಿಂದ ವಿವಿಧ ಪ್ರಶಸ್ತಿಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಾಜ್ಯ ಮಟ್ಟದ ಪ್ರಶಸ್ತಿಗಳು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ, ರೈತ ಮಹಿಳೆ ಪ್ರಶಸ್ತಿ ಹಾಗೂ ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ , ರೈತ ಮಹಿಳೆ ಪ್ರಶಸ್ತಿ

ರಾಜ್ಯ ಮಟ್ಟದ ಪ್ರಶಸ್ತಿಗಳು (ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 10 ಜಿಲ್ಲೆಗಳು) - ಕೆನರಾ ಬ್ಯಾಂಕ್ ಪ್ರಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ, ರೈತಮಹಿಳೆ ಪ್ರಶಸ್ತಿ ಹಾಗೂ ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ

ಜಿಲ್ಲಾ ಮಟ್ಟದ ಪ್ರಶಸ್ತಿಗಳು (ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 10 ಜಿಲ್ಲೆಗಳು) - ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ

ತಾಲ್ಲೂಕು ಮಟ್ಟದ ಪ್ರಶಸ್ತಿಗಳು (ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 61 ತಾಲ್ಲೂಕುಗಳು) - ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಪ್ರಶಸ್ತಿ ಮತ್ತು ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ

ಈ ಪ್ರಶಸ್ತಿಗಳನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಅಕ್ಟೋಬರ್ ತಿಂಗಳಲ್ಲಿ ಆಯೋಜಿಸಲಿರುವ ಕೃಷಿ ಮೇಳ-2023ರ ಸಂದರ್ಭದಲ್ಲಿ ನೀಡಲಾಗುತ್ತದೆ. ಈ ಸಂಬಂಧ ನಿಗದಿತ ಅರ್ಜಿ ನಮೂನೆಯು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರವರ ಕಛೇರಿ, ವಿಸ್ತರಣಾ ನಿರ್ದೇಶಕರ ಕಛೇರಿ, ಜಿಕೆವಿಕೆ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರಗಳಾದ ಹಾಡೋನಹಳ್ಳಿ -ದೊಡ್ಡಬಳ್ಳಾಪುರ, ಚಂದುರಾಯನಹಳ್ಳಿ-ಮಾಗಡಿ, ಕಂದಲಿ-ಹಾಸನ, ಕೊನೇಹಳ್ಳಿ-ತಿಪಟೂರು, ವಿ.ಸಿ.ಫಾರಂ-ಮಂಡ್ಯ, ಕುರುಬೂರು ಫಾರಂ-ಚಿಂತಾಮಣಿ ಮತ್ತು ಹರದನಹಳ್ಳಿ-ಚಾಮರಾಜನಗರ, ವಿಸ್ತರಣಾ ಶಿಕ್ಷಣ ಘಟಕಗಳಾದ ನಾಗನಹಳ್ಳಿ-ಮೈಸೂರಿನಲ್ಲಿ ದೊರೆಯುತ್ತದೆ. ಅರ್ಜಿ ನಮೂನೆಯು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಜಾಲತಾಣ www.uasbangalore.edu.in ನಲ್ಲಿ ಸಹ ಲಭ್ಯವಿರುತ್ತದೆ.

ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರಗಳಿಗೆ ವಿಸ್ತರಣಾ ನಿರ್ದೇಶಕರ ಕಛೇರಿ, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು ಹಾಗೂ ದೂರವಾಣಿ ಸಂಖ್ಯೆ. 080-23330153 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ