Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಮಟ್ಟದ ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಸುದ್ದಿಮೂಲ ವಾರ್ತೆ

ಚಿಕ್ಕಬಳ್ಳಾಪುರ, ಆ. 17 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2023ನೇ ಸಾಲಿನ ಮಕ್ಕಳ ದಿನಾಚರಣೆಯ ಪ್ರಯುಕ್ತ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ-ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ಈ ಪ್ರಶಸ್ತಿಗೆ ಅರ್ಹ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರಕರಣವು 2022 ರ ಆ.1 ರಿಂದ 2023 ರ ಜುಲೈ 1 ರೊಳಗೆ ನಡೆದಿರಬೇಕು. 2005ರ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ 2023ರ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ರೂ. 10 ಸಾವಿರ ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಪ್ರದಾನ ಮಾಡಲಾಗುವುದು.

ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ. 25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. 1 ಲಕ್ಷ ರೂ. ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.

ಸದರಿ ಪ್ರಶಸ್ತಿಗಳಿಗೆ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಫ್.ಬಿ. 05, 1ನೇ ಮಹಡಿ, ನೂತನ ಜಿಲ್ಲಾಡಳಿತ ಭವನ, ಶಿಡ್ಲಘಟ್ಟ ರಸ್ತೆ, ಚಿಕ್ಕಬಳ್ಳಾಪುರ ಇಲ್ಲಿ ಪಡೆದು ಸೆ. 15, 2023 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08156-277111, 9964868674 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಶ್ವತ್ಥಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಗ್ರಾಹಕರ ಸಂವಾದ ಸಭೆ

ಚಿಕ್ಕಬಳ್ಳಾಪುರ ವಿಭಾಗ ವ್ಯಾಪ್ತಿಯ ಚಿಕ್ಕಬಳ್ಳಾಪುರ ನಗರ, ಗ್ರಾಮೀಣ, ಗೌರಿಬಿದನೂರು, ಗುಡಿಬಂಡೆ ಮತ್ತು ಬಾಗೇಪಲ್ಲಿ ಬೆ.ವಿ.ಕಂ ಉಪ ವಿಭಾಗ ಕಚೇರಿಗಳಲ್ಲಿ ಕಾರ್ಯ ನಿರ್ವಾಹಕ ಇಂಜಿನಿಯರ್ ಹಾಗೂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರವರ ಅಧ್ಯಕ್ಷತೆಯಲ್ಲಿ ಆ. 19 ರಂದು ಮಧ್ಯಾಹ್ನ 3 ಗಂಟೆಗೆ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ.

ಆಯಾ ಉಪ ವಿಭಾಗ ವ್ಯಾಪ್ತಿಗೆ ಒಳಪಡುವ ಗ್ರಾಹಕರು ಸಭೆಗೆ ಹಾಜರಾಗಿ, ವಿದ್ಯುತ್ ಸರಬರಾಜಿಗೆ ಸಂಬಂಧಪಟ್ಟಂತೆ ಏನಾದರೂ ಕುಂದುಕೊರತೆಗಳು ಇದ್ದಲ್ಲಿ ಕಾನೂನಾತ್ಮಕವಾಗಿ ಪರಿಹರಿಸಿಕೊಳ್ಳಬಹುದೆಂದು ಚಿಕ್ಕಬಳ್ಳಾಪುರ ಬೆವಿಕಂ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ಆನಂದ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2022ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಜಿಲ್ಲೆಯ ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಗಳನ್ನು ಹಾಗೂ ಮಾರ್ಗಸೂಚಿಯನ್ನು ಜಿಲ್ಲಾ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 9 ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿಯಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿಗೆ ಅಥವಾ ದೂರವಾಣಿ ಸಂಖ್ಯೆ: 08156-270054 ಗೆ ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗ, ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಅಧಾರಿತ ಪರೀಕ್ಷೆಯನ್ನು ನಡೆಸುತ್ತಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆ. 23 ಕೊನೆಯ ದಿನ ಆಗಿದ್ದು, ವೆಬ್‌ಸೈಟ್ www.ssckkr.kar.nic.in ಮತ್ತು https://ssc.nic.in ನಲ್ಲಿ ಲಭ್ಯವಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಗಳಾದ 080-25502520, 9483862020, 8310004823 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಎಂ.ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ