Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರು: ಆಯೋಗದಿಂದ 7 ಮಂದಿ ಚುನಾವಣಾ ವೆಚ್ಚ ವೀಕ್ಷಕರ ನೇಮಕ

ಸುದ್ದಿಮೂಲ ವಾರ್ತೆ
ತುಮಕೂರು, ಏ.10: ಭಾರತ ಚುನಾವಣಾ ಆಯೋಗವು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ 7 ಮಂದಿ ಚುನಾವಣಾ ವೆಚ್ಚ ವೀಕ್ಷಕರನ್ನು ನೇಮಕ ಮಾಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.

ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ತ್ಶರಿಂಗ್ ಜೋರ್ಡನ್ ಭೂಟಿಯಾ, ತಿಪಟೂರಿಗೆ ರೆಡ್ನಮ್ ವೆಂಕ ಪ್ರಧಾಮೇಶ್ ಭಾನು, ತುರುವೇಕೆರೆ ಹಾಗೂ ಗುಬ್ಬಿ ಕ್ಷೇತ್ರಕ್ಕೆ ನವಾಬ್ ಸಿಂಗ್, ಕುಣಿಗಲ್ ಕ್ಷೇತ್ರಕ್ಕೆ ಮಯಂಕ್ ಶರ್ಮ, ತುಮಕೂರು ನಗರ ಹಾಗೂ ಗ್ರಾಮೀಣ ಕ್ಷೇತ್ರಕ್ಕೆ ಎಫ್.ಎ.ಯಸ್ಸರ್ ಹರಾಫತ್, ಕೊರಟಗೆರೆ ಹಾಗೂ ಮಧುಗಿರಿ ಕ್ಷೇತ್ರಕ್ಕೆ ಎಂ.ಸ್ವಾಮಿನಾಥನ್, ಶಿರಾ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರಕ್ಕೆ ಸತೇಂದ್ರ ಸಿಂಗ್ ಮೆಹ್ರಾ ಅವರನ್ನುಆಯೋಗದಿಂದ ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ನೇಮಿಸಲಾಗಿದೆ.

ನೇಮಕವಾದ ವೆಚ್ಚ ವೀಕ್ಷಕರು ಆಯಾ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 12,13 ರಂದು ಆಗಮಿಸಲಿದ್ದು, ಚುನಾವಣಾ ವೆಚ್ಚ ವೀಕ್ಷಕರ ವಾಸ್ತವ್ಯಕ್ಕಾಗಿ ಆಯಾ ಪ್ರವಾಸಿ ಮಂದಿರದಲ್ಲಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅವರು ಸೂಚನೆ ನೀಡಿದರು.

ಪ್ರತಿ ಚುನಾವಣಾ ವೆಚ್ಚ ವೀಕ್ಷಕರಿಗೆ ಒಬ್ಬ ಲೈಸನ್ ಅಧಿಕಾರಿ, ಡೇಟಾ ಎಂಟ್ರಿ ಆಪರೇಟರ್, ಗನ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ. ವೆಚ್ಚ ವೀಕ್ಷಕರ ಚುನಾವಣಾ ಕೆಲಸ-ಕಾರ್ಯಗಳಿಗಾಗಿ ಕಂಪ್ಯೂಟರ್, ಲ್ಯಾಪ್‌ಟಾಪ್,
ಪ್ರಿಂಟರ್, ಇಂಟರ್‌ನೆಟ್ ವ್ಯವಸ್ಥೆ, ಲೇಖನ ಸಾಮಗ್ರಿಗಳ ವ್ಯವಸ್ಥೆ ಮಾಡಬೇಕೆಂದು ಎಲ್ಲಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾದ್ಯಂತ ಇಂದು ನಡೆಯುವ ಪಿಆರ್‌ಓ ಹಾಗೂ ಎಪಿಆರ್‌ಓಗಳ ತರಬೇತಿ ಮುಗಿದ ಕೂಡಲೇ ಜಿಲ್ಲಾ ಚುನಾಣಾಧಿಕಾರಿಗಳಿಗೆ ಕಡ್ಡಾಯವಾಗಿ ಹಾಜರಾತಿ ಮಾಹಿತಿ ಸಲ್ಲಿಸಬೇಕು. ಚುನಾವಣಾ ಕರ್ತವ್ಯದ ಆದೇಶ ಪ್ರತಿ ಜಾರಿಯಾಗಿ ಗೈರು ಹಾಜರಾದ ಅಧಿಕಾರಿ/ ನೌಕರರ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರ ಮೇಲೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದರು.

ಸಭೆಯಲ್ಲಿ ಪಾಲಿಕೆ ಆಯುಕ್ತ ಎಚ್.ವಿ. ದರ್ಶನ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹೀದಾ ಜಂಜಾ, ತುಮಕೂರು ಉಪವಿಭಾಗಾಧಿಕಾರಿ ಎಚ್.ಶಿವಪ್ಪ, ತಹಶೀಲ್ದಾರ್ ಸಿದ್ದೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಸುಜಯ್ ಕುಮಾರ್, ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ