Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಮಗಾರಿಗಳ ಭ್ರಷ್ಟಾಚಾರ ಕುರಿತು ತನಿಖೆ : ಆಯೋಗ ನೇಮಕ

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.13 :ರಾಜ್ಯದಲ್ಲಿ ಪ್ರಮುಖ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಲ್ಲಿ ನಡೆಯುತ್ತಿರುವ ಪ್ಯಾಕೇಜ್ ಪದ್ಧತಿ, ಬಾಕಿ ಮೊತ್ತ ಬಿಡುಗಡೆ ಮತ್ತು ಟೆಂಡರ್ ಪ್ರಕ್ರಿಯೆಗಳಲ್ಲಿ ಶೇ. 40 ಕ್ಕಿಂತಲೂ ಹೆಚ್ಚಿನ ಪ್ರಮಾಣದ ಲಂಚಗುಳಿತನ, ಭ್ರಷ್ಟಾಚಾರ ನಡೆದಿರುವ ಹಿನ್ನಲೆಯಲ್ಲಿತನಿಖೆಗಾಗಿ ನ್ಯಾ. ಹೆಚ್.ಎನ್. ನಾಗಮೋಹನ್‍ದಾಸ್ ರವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಲಾಗಿದೆ.

ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್ ಸಲ್ಲಿಸಿರುವ ಮನವಿಯಲ್ಲಿನ ಆರೋಪಗಳ ಕುರಿತು ತನಿಖೆಯನ್ನು ನಡೆಸಲು ಅನುವಾಗುವಂತೆ ಆಯೋಗವು ಪ್ರಥಮವಾಗಿ ಈ ವಿಚಾರಣೆಯನ್ನು 2019ರ ಜು. 26 ರಿಂದ 2023 ರ ಮಾರ್ಚ್‌ 31ರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ತನಿಖಾ ಆಯೋಗದ ವ್ಯಾಪ್ತಿಗೆ ವಹಿಸಲಾಗಿದೆ.

ಹೆಚ್ಚಿನ ಪ್ರಮಾಣದಲ್ಲಿ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಾದ ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆಗಳಲ್ಲಿ ಟೆಂಡರ್ ಪ್ರಕ್ರಿಯೆ, ಪ್ಯಾಕೇಜ್ ಪದ್ದತಿ, ಪುನರ್‍ಅಂದಾಜು ಬಾಕಿ ಮೊತ್ತ ಬಿಡುಗಡೆಗೆ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ಸ್ಥಳ ಹಾಗು ದಾಖಲಾತಿಗಳ ಪರಿಶೀಲನೆಯೊಂದಿಗೆ ವಿವರವಾದ ತನಿಖೆಯನ್ನು ನಡೆಸಿ ಲೋಪ ದೋಷಗಳ ಮಾಹಿತಿ ಹಾಗೂ ತತ್ಸಂಬಂಧಿತ ಆರೋಪಿತರ ಸ್ಪಷ್ಟ ಗುರುತಿಸುವಿಕೆಯ ಸಹಿತ ಪರಿಪೂರ್ಣ ತನಿಖೆಯನ್ನು ನಡೆಸಲಾಗುವುದು.

ಈ ಹಿನ್ನಲೆಯಲ್ಲಿ ಸಾರ್ವಜನಿಕರು ಯಾವುದೇ ರೀತಿಯ ಸಲಹೆ, ಆಕ್ಷೇಪಣೆ, ಅಹವಾಲು, ದಾಖಲೆಗಳು, ಹೇಳಿಕೆಗಳು ಇದ್ದಲ್ಲಿ ನ. 10 ರ ಒಳಗೆ ಕಚೇರಿ ವೇಳೆಯಲ್ಲಿ ವಿಚಾರಣಾ ಆಯೋಗ, 3ನೇ ಮಹಡಿ, ಲೋಕೋಪಯೋಗಿ ಇಲಾಖೆ ಮುಖ್ಯಕಟ್ಟಡ, ಕೆ.ಆರ್.ವೃತ್ತ, ಬೆಂಗಳೂರು ಇಲ್ಲಿಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಅಥವಾ ಇ-ಮೇಲ್ [email protected] ಗೆ ಸಲ್ಲಿಸುವಂತೆ ನ್ಯಾ. ಹೆಚ್.ಎನ್.ನಾಗಮೋಹನ್‍ದಾಸ್, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ