Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಂಡಕ್ಟರ್ ವಸಂತಮ್ಮ ಕಾರ್ಯಕ್ಕೆ ಶ್ಲಾಘನೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿಯೇ ಗರ್ಭಿಣಿಗೆ ಹೆರಿಗೆ



ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 15: ಬಸ್ಸಿನಲ್ಲಿ‌ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಮಾರ್ಗಮಧ್ಯದಲ್ಲಿಯೇ ಬಸ್ಸಿನ ಮಹಿಳಾ‌ ನಿರ್ವಾಹಕಿಯೇ ಹೆರಿಗೆ ಮಾಡಿಸಿದ ಪ್ರಸಂಗ ಚಿಕ್ಕಮಗಳೂರಿನಲ್ಲಿ ನಡೆದಿದೆ.ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು ಘಟಕದ ವಾಹನ ಸಂಖ್ಯೆ ಕೆ.ಎ-18,ಎಫ್-0865ರಲ್ಲಿ ಬೆಂಗಳೂರು- ಚಿಕ್ಕಮಗಳೂರು ಮಾರ್ಗ ಕಾರ್ಯಾಚರಣೆಯ ವೇಳೆ ಉದಯಪುರ ಸಮೀಪವಿರುವ ಕೃಷಿ ಕಾಲೇಜು ಹತ್ತಿರ,  ಸಮಯ ಸುಮಾರು 13-25 ರ ವೇಳೆ ನಿಗಮದ ವಾಹನದಲ್ಲಿ  ಒಟ್ಟು 45 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.ಈ ಪೈಕಿ ಬೆಂಗಳೂರಿನಿಂದ ಬೇಲೂರಿಗೆ ಪ್ರಯಾಣಿಸುತ್ತಿದ್ದ ಓರ್ವ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹತ್ತಿರ ಯಾವುದೇ ಆಸ್ಪತ್ರೆ ಇರಲಿಲ್ಲ. ಅವರಿಗೆ ಸಹಾಯದ ಅಗತ್ಯವಿರುತ್ತದೆ ಎಂದು ಮನಗಂಡು ತಕ್ಷಣ  ಬಸ್ಸಿನಲ್ಲಿದ್ದ ಮಹಿಳಾ ನಿರ್ವಾಹಕರು ವಾಹನವನ್ನು ನಿಲ್ಲಿಸಿ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರನ್ನು  ಕೆಳಗೆ ಇಳಿಸಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ನಿರ್ವಾಹಕಿಯಾದ  ಎಸ್ ವಸಂತಮ್ಮ ಬಸ್ಸಿನಲ್ಲಿಯೇ ಹೆರಿಗೆಯನ್ನು ಮಾಡಿಸಿರುತ್ತಾರೆ. ಮಗು ಮತ್ತು‌ ಮಹಿಳೆ ಆರೋಗ್ಯವಾಗಿರುತ್ತಾರೆ.

ಗರ್ಭಿಣಿ ಮಹಿಳೆ ಆರ್ಥಿಕವಾಗಿ ದುರ್ಬಲಳಾಗಿದ್ದ ಕಾರಣ ನಿಗಮದ ಚಾಲನಾ ಸಿಬ್ಬಂದಿಗಳು  ಮಹಿಳೆಯ ತುರ್ತು ಖರ್ಚಿಗಾಗಿ ಎಲ್ಲಾ ಪ್ರಯಾಣಿಕರಿಂದ ಒಟ್ಟು 1500ರೂ.ಗಳನ್ನು ಸಂಗ್ರಹಿಸಿ ಮಹಿಳೆಗೆ ನೀಡಿರುತ್ತಾರೆ.
ನಂತರ ಸದರಿ ಮಹಿಳೆಯನ್ನು ಆಂಬುಲೆನ್ಸ್ ಮುಖೇನ ಶಾಂತಿಗ್ರಾಮ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ದೊರೆಯುವಂತೆ ಮಾಡಲಾಗಿದೆ.

ಸಕಾಲದಲ್ಲಿ ಮಹಿಳಾ ಪ್ರಯಾಣಿಕರಿಗೆ ಸ್ಪಂದಿಸಿ ಮಗು‌ ಮತ್ತು ತಾಯಿಯನ್ನು‌ ಉಳಿಸಿ ಮಾನವೀಯ ನೆರವನ್ನು ನೀಡಿದ ನಿರ್ವಾಹಕಿಯವರ ಕಾರ್ಯವು ನಿಜಕ್ಕೂ ಶ್ಲಾಘನೀಯವಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ ತಿಳಿಸಿದ್ದಾರೆ.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ