Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.ಕೆ.ಶಿವಕುಮಾರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು:ಶೋಭಾ ಕರಂದ್ಲಾಜೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.26: ಪತ್ರಕರ್ತರ ಸಂಬಂಧ ಗೂಂಡಾಗಿರಿಯ ವರ್ತನೆ ತೋರಿದ ಕಾಂಗ್ರೆಸ್‍ನ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮನವಿ ಮಾಡಿದ್ದಾರೆ.

ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಅವರು ಈ ಸಂಬಂಧ ಮನವಿಯೊಂದನ್ನು ಇಂದು ನೀಡಿದರು. ಡಿಕೆಶಿವಕುಮಾರ್ ಅವರು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದರು. ಅದೇ ದಿನ ದೇಶದ ಗೃಹಸಚಿವ ಅಮಿತ್ ಶಾ ಹುಬ್ಬಳ್ಳಿಯಲ್ಲಿ ಇದ್ದರು. ಕೆಲ ಪತ್ರಕರ್ತರು ಡಿಕೆಶಿ ಸುದ್ದಿಗೋಷ್ಠಿಗೆ ಬಂದಿಲ್ಲ, ಬಾರದವರ ಹೆಸರು ಬರೆದುಕೊಳ್ಳಿ. ಅವರ ಮ್ಯಾನೇಜ್ಮೆಂಟ್ ಜೊತೆ ಮಾತಾಡ್ತೀನಿ ಎಂದು ತಿಳಿಸಿದ ಶಿವಕುಮಾರ್, ಪತ್ರಕರ್ತರು ಚುನಾವಣಾ ಸಂದರ್ಭದಲ್ಲಿ ಒತ್ತಡದಲ್ಲಿ ಕೆಲಸ ಮಾಡುವುದನ್ನು ಮರೆತು ನಾನು ಪತ್ರಕರ್ತರನ್ನ ಕೊಂಡುಕೊಳ್ಳಬಲ್ಲೆ ಎಂದಿದ್ದಾರೆ.



ಅವರ ಮ್ಯಾನೇಜ್ಮೆಂಟ್ ಹೇಳಿ ಕೆಲಸದಿಂದ ತೆಗೆಸುತ್ತೀನಿ ಅಂತ ಹೇಳಿದ್ದಾರೆ. ಅಲ್ಲದೆ ಗೂಂಡಾಗಿರಿ ವರ್ತನೆ ತೋರಿದ್ದಾರೆ ಎಂದು ತಿಳಿಸಲಾಗಿದೆ.

ಪತ್ರಕರ್ತರ ಜೊತೆ ನಾವಿದ್ದೇವೆ. ಪತ್ರಕರ್ತರನ್ನು ಹೆದರಿಸಿದ ಡಿಕೆಶಿ ವಿರುದ್ಧ ಕ್ರಮಕೈಗೊಳ್ಳಬೇಕು. ಕೂಡಲೇ ಡಿಕೆಶಿಗೆ ನೋಟೀಸ್ ಹೊರಡಿಸಬೇಕು ಅಂತ ಮನವಿ ಮಾಡಿದ್ದೇವೆ ಎಂದು ಶೋಭಾ ಕರಂದ್ಲಾಜೆ ಅವರು ತಿಳಿಸಿದರು.

ಎರಡನೇ ದೂರು: ಕಾಂಗ್ರೆಸ್ ಸೋಶಿಯಲ್ ಮೀಡಿಯಾ ದುರ್ಬಳಕೆ ಮೂಲಕ ಚುನಾವಣೆ ಗೆಲ್ಲಲು ಹೊರಟಿದೆ. ಸೋಶಿಯಲ್ ಮೀಡಿಯಾ ಕೆಟ್ಟದಾಗಿ ಬಳಸಿಕೊಂಡಿದ್ದಾರೆ. ತೆಲಂಗಾಣದ ವೀಡಿಯೋ ಬಳಸಿ, ಬಿಜೆಪಿಯ ಮೀಡಿಯಾ ವ್ಯಾನ್‍ಗೆ ಕಲ್ಲು ಹೊಡೆದಿದ್ದಾರೆ ಅಂತ ಬಿಂಬಿಸಿದ್ದಾರೆ ಎಂದು ಇನ್ನೊಂದು ದೂರಿನಲ್ಲಿ ತಿಳಿಸಲಾಗಿದೆ.

ಸೋಶಿಯಲ್ ಮೀಡಿಯಾ ಟೀಮ್ ಫೆÇೀರ್ಜರಿ ಮಾಡಿದ್ದಲ್ಲದೆ, ಸಮಾಜಕ್ಕೆ ತಪ್ಪು ಸಂದೇಶ ನೀಡುವ ಕೆಲಸ ಮಾಡಿದೆ. ಕಾಂಗ್ರೆಸ್ ಸೋಶಿಯಲ್ ಮೀಡಿಯಾವನ್ನ ಬ್ಯಾನ್ ಮಾಡಬೇಕು ಎಂದು ಮನವಿ ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ