Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರ್ಕಾವತಿ ನದಿ ನೀರು ಕಲುಷಿತ : 2 ದಿನಗಳ ಕಾಲ ನೀರು ಸ್ಥಗಿತ

ಸುದ್ದಿಮೂಲ ವಾರ್ತೆ

ರಾಮನಗರ, ಜು 6 : ಜಿಲ್ಲಾ ಕೇಂದ್ರ ರಾಮನಗರದ ಮೂಲಕ ಹರಿಯುತ್ತಿರುವ ಅರ್ಕಾವತಿ ನದಿ ನೀರು ರಾಸಾಯನಿಕಗಳಿಂದ ಕಲುಷಿತಗೊಂಡಿರುವ ಹಿನ್ನೆಲೆಯಲ್ಲಿ ಜುಲೈ 6 ರಿಂದ 2 ದಿನಗಳ ಕಾಲ ಅರ್ಕಾವತಿ ನದಿ ನೀರು ಸರಬರಾಜು ಸ್ಥಗಿತಗೊಳಿಸಿರುವುದಾಗಿ ಜಲಮಂಡಳಿ ಪ್ರಕಟಿಸಿದೆ.

ನದಿ ನೀರು ಕಲುಷಿತಗೊಳ್ಳಲು ಕಾರಣವಾದ ಕೋಳಿ ಸಾಗಾಣಿಕ ಘಟಕದ ವಿರುದ್ದ ಜಲಮಂಡಳಿ ಅಧಿಕಾರಿಗಳು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ನಗರಸಭಾ ವ್ಯಾಪ್ತಿಯಲ್ಲಿ 1 ರಿಂದ 10ನೇ ವಾರ್ಡುಗಳಿಗೆ ಅರ್ಕಾವತಿ ನದಿ ನೀರು ಸರಬರಾಜು ಆಗುತ್ತಿದ್ದು, ಈ ವಾರ್ಡುಗಳಲ್ಲಿ ನೀರು ಸರಬರಾಜು ವ್ಯತ್ಯಯವಾಗಲಿದೆ. ಅರ್ಕಾವತಿ ನದಿ ಮೂಲದಿಂದ ಶುದ್ಧೀಕೃತ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಆದರೆ, ಅರ್ಕಾವತಿ ನದಿಯಲ್ಲಿ ಕಲುಷಿತ ನೀರು ಹರಿಯುತ್ತಿರುವುದರಿಂದ ಮುನ್ನೆಚ್ಚರಿಕೆಯಾಗಿ ಜು.5 ರಿಂದ ದ್ಯಾವರಸೇಗೌಡನದೊಡ್ಡಿ ಪಂಪ್ ಹೌಸ್‌ನಿಂದ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಕಾವತಿ ನದಿ ಮೇಲ್ಬಾಗದ ಸುಮಾರು 2 ಕಿ.ಮೀ ಆಚೆ ಖಾಸಗಿ ಕೋಳಿ ಸಾಕಾಣಿಕೆ ಘಟಕದಿಂದ (ತಿಬ್ಬೇಗೌಡನದೊಡ್ಡಿ ಗೇಟ್‌ನಿಂದ ಮುಂದೆ ಶ್ರೀ ಮುನೇಶ್ವರ ದೇವಸ್ಥಾನದ ಬಳಿ ಇರುವ ನದಿ ದಂಡೆಯಲ್ಲಿ) ರಾಸಾಯನಿಕ ಹಾಗೂ ಇತರ ತ್ಯಾಜ್ಯ ಪದಾರ್ಥಗಳನ್ನು ನದಿ ಪಾತ್ರಕ್ಕೆ ಬಿಟ್ಟಿರುವುದರಿಂದ ನೀರು ಕಲುಷಿತಗೊಂಡಿದೆ. ಹೀಗಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರಿಗೆ ದೂರು

ನದಿ ನೀರನ್ನು ಕಲುಷಿತಗೊಳಿಸಿರುವ ಹಿನ್ನೆಲೆಯಲ್ಲಿ ಜಲಮಂಡಳಿಯ ಚನ್ನಪಟ್ಟಣ ಉಪವಿಬಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಗ್ರಾಮಾಂತರ ಆರಕ್ಷಕ ಠಾಣೆಗೆ ದೂರನ್ನು ಸಹ ದಾಖಲಿಸಿದ್ದು ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ