Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬೇಡ್ಕರ್ ಪುತ್ಥಳಿಗೆ ಬೆಂಕಿ ಹಾಕಿದ ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯ

ಸುದ್ದಿಮೂಲ ವಾರ್ತೆ

ಸೂಲಿಬೆಲೆ, ಮೇ 20: ಹೋಬಳಿಯ ಯನಗುಂಟೆ ಗ್ರಾಮದ ದಲಿತ ಕಾಲೋನಿಯಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಾಕಿರುವ ಘಟನೆಯನ್ನು ಶೀಘ್ರವಾಗಿ ತನಿಖೆ ಮಾಡಿ ಕಿಡಿಗೇಡಿಗಳನ್ನು

ಬಂಧಿಸುವಂತೆ ಭೀಮ್ ಸೇವಾ ಸಮಿತಿ ರಾಜ್ಯಾಧ್ಯಕ್ಷ ಶ್ರೀಕಾಂತ್‌ ರಾವಣ್ ಒತ್ತಾಯಿಸಿದ್ದಾರೆ. ಸೂಲಿಬೆಲೆ ಪೋಲಿಸ್ ಠಾಣೆಯಲ್ಲಿ ಮನವಿ ಪತ್ರ ಸಲ್ಲಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಂಬೇಡ್ಕರ್

ಪುತ್ಥಳಿಗೆ ಅವಮಾನ ಮಾಡುವುದು ದಲಿತ ಕಾಲೋನಿಗಳಲ್ಲಿ ದೌರ್ಜನ್ಯ ಎಸಗುವುದು ಹೆಚ್ಚಾಗುತ್ತಿರುವುದು ವಿಷಾಧನೀಯ ಸಂಗತಿ. ಈ ಹಿನ್ನಲೆಯಲ್ಲಿ ಪೋಲಿಸರು ದಲಿತ ಕಾಲೋನಿಗಳ ಜನತೆಗೆ ಹೆಚ್ಚಿನ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದರು.

ಘಟನೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂದಿಸಿ ಗಡಿಪಾಡು ಮಾಡಬೇಕಾಗಿ ಒತ್ತಾಯ ಮಾಡಿದ್ದಾರೆ.

ಹೊಸಕೋಟೆ ಡಿವೈಎಸ್ಪಿ ಪಾಟೀಲ್, ಸೂಲಿಬೆಲೆ ಠಾಣಾ ಇನ್ಸ್ಪೆಕ್ಟರ್ ರವಿ ಬೀಮ್ ಸೇವಾ ಸಮಿತಿಯ  ಮನವಿಪತ್ರವನ್ನು ಸ್ವೀಕರಿಸಿ ಘಟನೆಯ ತನಿಖೆ ಚುರುಕುಗೊಳಿಸಿ ಕಿಡಿಗೇಡಿಗಳನ್ನು ಶೀಘ್ರವಾಗಿ ಬಂಧಿಸಲಾಗುವುದು ಎಂದು ತಿಳಿಸಿದರು.

ಸಮಿತಿಯ ರಾಜ್ಯ ಕಾರ್ಯದರ್ಶಿ ನರಸಿಂಹಮೂರ್ತಿ, ಗ್ರಾಮಾಂತರ ಜಿಲ್ಲಾಧ್ಯಕ್ಷ ಮುನಿರಾಜು, ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಮಧುಚಕ್ರವರ್ತಿ, ಕಾರ್ಮಿಕ ಘಟಕ ಉಪಾಧ್ಯಕ್ಷ ಸುಮನ್, ಹೊಸಕೋಟೆ ತಾ.ಯುವ ಘಟಕ ಅಧ್ಯಕ್ಷ ಜೊಯಲ್, ಯುವ ಘಟಕ ಉಪಾಧ್ಯಕ್ಷ ಜಯರಾಜ್ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ