Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಕ್ತಚಂದನ ಸಾಗಿಸುತ್ತಿದ್ದ ಆರೋಪಿಗಳ ಬಂಧನ

ಸುದ್ದಿಮೂಲ ವಾರ್ತೆ

ಗುಂಡ್ಲುಪೇಟೆ, ಸೆ. 9 : ತರಕಾರಿ ವಾಹನದಲ್ಲಿ ರಕ್ತಚಂದನ ಮರದ ತುಂಡು ಗಳನ್ನು ಸಾಗಿಸುತ್ತಿದ್ದ 5 ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ, ನ್ಯಾಯಾಂಗ ಬಂಧ ನಕ್ಕೆ ಒಪ್ಪಿಸಿದ್ದಾರೆ.

ಬೆಂಗಳೂರಿನ ಶಂಕರನಗರದ ಗೋವಿಂದರಾಜು, ಚಾಮರಾಜನಗರ ತಾಲೂಕಿನ ಸರಗೂರುಮೋಳೆ ಗ್ರಾಮದ ಗೋವಿಂದರಾಜು, ಆನಂದ್, ನಾಗವಳ್ಳಿ ಗ್ರಾಮದ ಮಹೇಂದ್ರ, ಚಾಮರಾಜನಗರದ ಅಸ್ಗರ್ ಪಾಷ ಬಂಧಿತ ಆರೋಪಿಗಳು.

ತರಕಾರಿ ಸಾಗಿಸುವ ವಾಹನದಲ್ಲಿ ಮರದ ತುಂಡುಗಳನ್ನು ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಬಂಡೀಪುರ ಹುಲಿಯೋಜನೆಯ ನಿರ್ದೇಶಕ ಡಾ.ಪಿ.ರಮೇಶ್‌ ಶರ್ಮಾ ಅವರ ನಿರ್ದೇಶನದಂತೆ

ವಿಶೇಷ ಹುಲಿ ಸಂರಕ್ಷಣಾ ದಳದ ಎಸಿಎಫ್ ಗಳಾದ ಜಿ.ರವೀಂದ್ರ ಹಾಗೂ ಕೆ.ಪರಮೇಶ್ ಅವರ ಮಾರ್ಗದರ್ಶನದಲ್ಲಿ ಆ.ಎಫ್.ಒ.ಎನ್.ಪಿ ನವೀನ್ ಕುಮಾರ್ ಅವರ ನೇತೃತ್ವದಲ್ಲಿ 3 ತಂಡಗಳಾಗಿ ದಾಳಿ ನಡೆಸಿ, ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ ಬಳಿ ಮಹೇಂದ್ರ ಬೊಲೇರೋ ಪಿಕಪ್ ವಾಹನವನ್ನು ಪರಿಶೀಲಿಸಿದ ವೇಳೆ ತರಕಾರಿ ಚೀಲದ ಕೆಳಭಾಗದಲ್ಲಿ ಎರಡು ರಕ್ತಚಂದನ ಮರದ ತುಂಡುಗಳು ಪತ್ತೆಯಾಗಿದೆ.

ವಾಹನದಲ್ಲಿ ಪತ್ತೆಯಾದ ಸುಮಾರು 50 ಕೆಜಿ ತೂಕದ ಎರಡು ಮರದ ತುಂಡುಗಳನ್ನು ವಶಪಡಿಸಿ ಕೊಂಡು ಐದು ಜನರನ್ನು ಬಂಧಿಸಿ, ಬೊಲೆರೋ ವಾಹನ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಬಫರ್ ಜೋನ್ ವಲಯದಲ್ಲಿ ಪ್ರಕರಣ ದಾಖಲು ಮಾಡಿ, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ