Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವೀರಶೈವ ಲಿಂಗಾಯತ ಸಂಪ್ರದಾಯದಂತೆ ಕುಟುಂಬಸ್ಥರಿಂದ ಅಂತ್ಯಸಂಸ್ಕಾಾರ, ಸಿಎಂ ಸೇರಿ ಗಣ್ಯರು ಭಾಗಿ ಸರ್ಕಾರಿ ಗೌರವದೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ

 ಸುದ್ದಿಮೂಲ ವಾರ್ತೆ ದಾವಣಗೆರೆ, ಡಿ.15:
ವಯೋಸಹಜ ಅನಾರೋಗ್ಯದಿಂದ ಭಾನುವಾರ ರಾತ್ರಿಿ ನಿಧನರಾದ ಕಾಂಗ್ರೆೆಸ್ ಹಿರಿಯ ಶಾಸಕ, ರಾಜಕೀಯ ಮುತ್ಸದ್ದಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಿಯೆ ಕಲ್ಲೇಶ್ವರ ಮಿಲ್‌ನ ಆವರಣದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಸೋಮವಾರ ಸಂಜೆ ನೆರವೇರಿತು.
ವೀರಶೈವ ಲಿಂಗಾಯತ ಸಂಪ್ರದಾಯದಂತೆ ಕುಟುಂಬಸ್ಥರು, ಗಣ್ಯರು, ಸಾರ್ವಜನಿಕರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು. ಕ್ರಿಿಯಾ ಸಮಾಧಿ ಮಾಡಿ ಐಕ್ಯ ಮಂಟಪದಲ್ಲಿ ವಿಭೂತಿ ಗಟ್ಟಿಿಗಳೊಂದಿಗೆ ಅವರ ಅಂತ್ಯ ಸಂಸ್ಕಾಾರ ನಡೆಯಿತು.
ಸಿರಿಗೆರೆ ಶ್ರೀಗಳು, ವಚನಾನಂದ ಸ್ವಾಾಮೀಜಿ, ಪಂಚಪೀಠದ ಜಗದ್ಗುರುಗಳು ಸೇರಿದಂತೆ ಹಲವು ಮಠಾಧೀಶರ ಸಮ್ಮುಖದಲ್ಲಿ ಈ ಅಂತ್ಯ ಸಂಸ್ಕಾಾರ ನಡೆಯಿತು. ಶಾಮನೂರು ಶಿವಶಂಕರಪ್ಪ ಅವರ ಹಿರಿಯ ಪುತ್ರ ಬಕ್ಕೇಶ್ ಅವರು ಅಂತ್ಯಸಂಸ್ಕಾಾರದ ವಿಧಿವಿಧಾನ ಪೂರೈಸಿದರು. ಪೂಜೆ ವೇಳೆ ಸಹೋದರನಿಗೆ ಕಿರಿಯ ಸಹೋದರರಾದ ಎಸ್ ಎಸ್ ಮಲ್ಲಿಕಾರ್ಜುನ್, ಎಸ್ ಎಸ್ ಗಣೇಶ್ ಕೈಜೋಡಿಸಿದರು.
ಸೊಸೆಯಂದಿರು, ಪುತ್ರಿಿಯರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಭಾವುಕರಾದರು. ತಾತನ ಅಂತ್ಯಸಂಸ್ಕಾಾರದ ಸ್ಥಳದಲ್ಲೇ ನಿಂತು ವಿಭೂತಿ ಅರ್ಪಿಸಿ ಪೂಜೆ ಮಾಡಿ ಮೊಮ್ಮಕ್ಕಳು ಕಳುಹಿಸಿ ಕೊಟ್ಟರು. ಅರ್ಚಕರು ವಿಧಿವಿಧಾನ ನೆರವೇರಿಸಿದರು. ಕುಣಿಯಲ್ಲಿ ಇಳಿದು ಪುತ್ರರು ಹಾಗೂ ಕುಟುಂಬಸ್ಥರು, ಬಂಧುಮಿತ್ರರು ವಿಧಿವಿಧಾನ ನೆರವೇರಿಸಿದರು. ಇವರೆಲ್ಲರ ಸಮ್ಮುಖದಲ್ಲೇ ಅಂತ್ಯಸಂಸ್ಕಾಾರ ಮಾಡಲಾಯಿತು.
ಇದಕ್ಕೂ ಮುನ್ನ ರಂಭಾಪುರಿ ಜಗದ್ಗುರುಗಳು ಶಾಮನೂರು ಶಿವಶಂಕರಪ್ಪನವರ ಬಗ್ಗೆೆ ಹಿತವಚನ ನೆರವೇರಿಸಿದರು. ಈ ವೇಳೆ ಶಾಮನೂರು ಶಿವಶಂಕರಪ್ಪನವರ ಪಾರ್ಥಿವ ಶರೀರಕ್ಕೆೆ ಚರ್ಚ್ ಾಧರ್‌ಗಳು ಪುಷ್ಪ ಮಾಲೆ ಅರ್ಪಿಸಿದರು. ಧರ್ಮಾತೀತವಾಗಿ ಗೌರವ ಸೂಚಿಸಿದ ಬಳಿಕ ಅಂತಿಮ ದರ್ಶನಕ್ಕೆೆ ಕಲ್ಪಿಿಸಲಾಯಿತು. ಅಂತ್ಯಸಂಸ್ಕಾಾರದ ಸ್ಥಳಕ್ಕೆೆ ಆಗಮಿಸಿದ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮ ದರ್ಶನ ಪಡೆದರು. ಪತ್ನಿಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಸಮಾಧಿ ನಿರ್ಮಿಸಲಾಗಿದೆ.
ನೂಕು ನುಗ್ಗಲು: ಶಾಮನೂರು ಶಿವಶಂಕರಪ್ಪ ಅವರಿಗೆ ಸರ್ಕಾರಿ ಗೌರವ ಹಾನರ್ ನೀಡಲು ಕೂಡ ಸಾಧ್ಯವಾಗದ ರೀತಿ ಜನ-ಅಭಿಮಾನಿಗಳ ಮಧ್ಯೆೆ ನೂಕು ನುಗ್ಗಲು ಏರ್ಪಟ್ಟಿಿತ್ತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಏಕಾಕಾಲಕ್ಕೆೆ ಬರುತ್ತಿಿದ್ದಂತೆ ನೂಕು ನುಗ್ಗಲು ಹೆಚ್ಚಾಾಯಿತು. ಗಣ್ಯರು ಆಗಮಿದ ಬಳಿಕ ಶಾಮನೂರು ಶಿವಶಂಕರಪ್ಪ ಪಾರ್ಥಿವ ಶರೀರಕ್ಕೆೆ ತ್ರಿಿವರ್ಣ ಧ್ವಜ ಹೊದಿಸಿ ಪೊಲೀಸರು ಗೌರವ ಸೂಚಿಸಿ ಮೂರು ಸುತ್ತು ಗುಂಡು ಹಾರಿಸಿ ಸಕಲ ಸರ್ಕಾರಿ ಗೌರವ ಸಲ್ಲಿಸಿದರು.
ಸಚಿವರಾದ ಕೆಜೆ ಜಾರ್ಜ್, ಎಂಬಿ ಪಾಟೀಲ್, ಆರ್. ವಿ .ದೇಶಪಾಂಡೆ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಾಮಿ, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ ಸೇರಿದಂತೆ ಅನೇಕ ಗಣ್ಯರು, ಕುಟುಂಬದ ಮಿತ್ರರು ಆಗಮಿಸಿ ಅಂತಿಮ ದರ್ಶನ ಪಡೆದು. ಸಚಿವ ಎಸ್‌ಎಸ್ ಮಲ್ಲಿಕಾರ್ಜುನ ಅವರಿಗೆ ಧೈರ್ಯ ತುಂಬಿದರು. ಸಚಿವ ಎಂ.ಬಿ ಪಾಟೀಲ್, ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕರು ಶಾಮನೂರು ಶಿವಶಂಕರಪ್ಪ ಅವರು ಅಂತ್ಯಕ್ರಿಿಯೆ ಕೊನೆವರೆಗೂ ಇದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ