Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಮತದಾರರ ಪುಷ್ಪವೃಷ್ಟಿಯ ನಡುವೆ ಅಶ್ವತ್ಥನಾರಾಯಣ ಮತಯಾಚನೆ

ಸುದ್ದಿಮೂಲ ವಾರ್ತೆ

ಬೆಂಗಳೂರು,(ಮತ್ತೀಕೆರೆ)ಏ.25: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಮತ್ತೀಕೆರೆಯ ಸಂಜೀವಪ್ಪ ಕಾಲೋನಿ ಮತ್ತು ಜಯರಾಂ ಕಾಲೋನಿಗಳಲ್ಲಿ ಮಂಗಳವಾರ ಪಾದಯಾತ್ರೆ ಮಾಡಿ, ಪಕ್ಷಕ್ಕೆ ಸ್ಪಷ್ಟ ಜನಾದೇಶ ನೀಡುವಂತೆ ಮತದಾರರನ್ನು ಕೋರಿದರು.



ಬೆಳಿಗ್ಗೆ ಬಿಸಿಲೇರುವ ಮೊದಲೇ ನೂರಾರು ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸ್ಥಳೀಯ ಮುಖಂಡರ ಜತೆ ಕಾಲೋನಿಯ ಬೀದಿಗಳಲ್ಲಿ ಪ್ರತ್ಯಕ್ಷರಾದ ಅವರನ್ನು ನೋಡಲು, ಇಕ್ಕೆಲಗಳಲ್ಲೂ ಜನರು ಸಾಲುಗಟ್ಟಿ ನಿಂತಿದ್ದರು. ಜತೆಗೆ ವಂದೇ ಮಾತರಂ, ಭಾರತ್‌ ಮಾತಾ ಕೀ ಜೈ, ಬಿಜೆಪಿಗೆ ಜಯವಾಗಲಿ ಎನ್ನುವ ಘೋಷಗಳನ್ನು ಮೊಳಗಿಸುತ್ತ, ಅಶ್ವತ್ಥನಾರಾಯಣ ಅವರಿಗೆ ಅಭಿಮಾನದಿಂದ ಹೂಮಳೆಗರೆದು, ಆರತಿ ಎತ್ತಿ, ಹರಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಶ್ವತ್ಥನಾರಾಯಣ ಅವರು, "ಸಂಜೀವಪ್ಪ ಮತ್ತು ಜಯರಾಂ ಕಾಲೋನಿಗಳಲ್ಲಿ ವಸತಿ ಸೌಲಭ್ಯ, ಶಾಲೆ, ರಸ್ತೆ, ಪಿಂಚಣಿ, ಪಡಿತರ ಚೀಟಿ, ಗುಣಮಟ್ಟದ ಆಸ್ಪತ್ರೆ ಎಲ್ಲವನ್ನೂ ಒದಗಿಸಿ ಕೊಡಲಾಗಿದೆ. ಈ ಮೂಲಕ ದುರ್ಬಲ ವರ್ಗಗಳ ಮತ್ತು ಆರ್ಥಿಕವಾಗಿ ಹಿಂದುಳಿದವರ ಸಬಲೀಕರಣವನ್ನು ಸಾಧಿಸಲಾಗಿದೆ. ಮುಂಬರುವ ಚುನಾವಣೆಯಲ್ಲೂ ಇಲ್ಲಿನ ಮತದಾರರು ಬಿಜೆಪಿಗೆ ಬೆಂಬಲ ನೀಡಬೇಕು" ಎಂದು ಮನವಿ ಮಾಡಿಕೊಂಡರು.

ಮಲ್ಲೇಶ್ವರಂ ಕ್ಷೇತ್ರದಲ್ಲಿ ಈಗಾಗಲೇ ಶೇಕಡ 95ರಷ್ಟು ಅಭಿವೃದ್ಧಿಯನ್ನು ಸಾಧಿಸಲಾಗಿದೆ. ಈ ಮೂಲಕ ಕ್ಷೇತ್ರವು ಮಾದರಿಯಾಗಿ ಹೊರಹೊಮ್ಮಿದೆ. ಉಳಿದಿರುವ ಸಣ್ಣಪುಟ್ಟ ಕೆಲಸಗಳನ್ನು ಕೂಡ ಮುಂಬರುವ ದಿನಗಳಲ್ಲಿ ಮಾಡಲಾಗುವುದು. ಸಂಜೀವಪ್ಪ ಕಾಲೋನಿ ಮತ್ತು ಜಯರಾಂ ಕಾಲೋನಿಗಳು ಕಿರಿದಾದ ಪ್ರದೇಶಗಳಾಗಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಇಲ್ಲಿನ ಜನರ ಸಂಪೂರ್ಣ ಸಹಕಾರ ಅಗತ್ಯವಾಗಿದೆ ಎಂದು ಅವರು ವಿವರಿಸಿದರು.

ಸಂಜೀವಪ್ಪ ಕಾಲೋನಿಯ ಜನರಿಗೆ ಸಮೀಪದ ನೇತಾಜಿ ವೃತ್ತದಲ್ಲಿ ನಮ್ಮ ಕ್ಲಿನಿಕ್‌ ಮೂಲಕ ಉಚಿತವಾದ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ದೊರಕುವಂತೆ ಮಾಡಲಾಗಿದೆ. ಇಲ್ಲಿನ ಶಾಲೆಯನ್ನು ಕೂಡ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು. ಈ ಕಾಲೋನಿಗಳಲ್ಲಿ ಇಂತಹ ಅಭಿವೃದ್ಧಿ ಕಳೆದ ಐವತ್ತು ವರ್ಷಗಳಲ್ಲಿ ಎಂದೂ ಆಗಿರಲಿಲ್ಲ ಎಂದು ಅವರು ನುಡಿದರು.

ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಕೂಡ ಉತ್ಸಾಹದಿಂದ ಹೆಜ್ಜೆ ಹಾಕಿದರು. ಅಶ್ವತ್ಥನಾರಾಯಣ ಅವರು ಅಲ್ಲಲ್ಲಿ ನಿಂತುಕೊಂಡು, ಮತದಾರರ ಅಭಿಪ್ರಾಯಗಳನ್ನು ಆಲಿಸಿದ್ದು ಗಮನಾರ್ಹವಾಗಿತ್ತು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ