Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಸಂಪೂರ್ಣ ಕಡೆಗಣನೆ :ಅಶ್ವತ್ಥನಾರಾಯಣ್ 

ಸುದ್ದಿಮೂಲ ವಾರ್ತೆ

ಬೆಂಗಳೂರು,ಆ.23: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ಕಡೆಗಣಿಸಿದೆ. ತಮಿಳುನಾಡಿಗೆ ನೀರು ಬಿಟ್ಟ ಬಳಿಕ ಇದೀಗ ತರಾತುರಿಯಲ್ಲಿ ಸರ್ವಪಕ್ಷ ಸಭೆ ಕರೆದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಅವರು ಆಕ್ಷೇಪಿಸಿದ್ದಾರೆ.

“ಊರು ಕೊಳ್ಳೆ ಹೋದ ಮೇಲೆ ಡಿಡ್ಡಿ ಬಾಗಿಲು ಹಾಕಿದಂತೆ” ಎಂಬಂತೆ ರಾಜ್ಯ ಸರ್ಕಾರದ ವರ್ತನೆ ಇದೆ ಎಂದು ಅವರು ಟೀಕಿಸಿದ್ದಾರೆ. ಇಂದಿನ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ಮುಖಂಡರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ, ಮತ್ತಿತರ ಪ್ರಮುಖರು ಭಾಗವಹಿಸಿ ಪಕ್ಷದ ನಿಲುವನ್ನು ಸಮರ್ಥವಾಗಿ ಮಂಡಿಸಿದ್ದಾರೆ ಎಂದು ಅವರು ವಿವರ ನೀಡಿದ್ದಾರೆ.

ಸರ್ವಪಕ್ಷ ಸಭೆಗೆ ವಿಳಂಬ - ಬಿ.ಎಸ್. ಯಡಿಯೂರಪ್ಪ ಆಕ್ಷೇಪ

ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ತಮಿಳುನಾಡಿಗೆ ನೀರನ್ನು ಬಿಟ್ಟು ಇದೀಗ ಸರ್ವ ಪಕ್ಷ ಸಭೆ ಕರೆದಿರುವುದು ಸರಿಯಲ್ಲ. 26ನೇ ತಾರೀಕು ಸುಪ್ರೀಂ ಕೋರ್ಟ್‍ನಲ್ಲಿ ಸಮರ್ಥವಾಗಿ ರಾಜ್ಯದ ಪರವಾಗಿ ವಾದ ಮಂಡನೆ ಮಾಡಬೇಕು. ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲವೆಂದು ಮನದಟ್ಟು ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಮೇಕೆದಾಟು ಕಾನೂನು ತೊಡಕು ನಿವಾರಿಸಿ - ಡಿವಿಎಸ್

ಡಿ.ವಿ. ಸದಾನಂದಗೌಡ ಅವರು ಮಾತನಾಡಿ, ನೀರು ಬಿಟ್ಟ ಬಳಿಕ ಸರ್ವಪಕ್ಷ ಸಭೆ ಕರೆದಿರುವುದು ಸರಿಯಲ್ಲ. ಮೇಕೆದಾಟು ಯೋಜನೆ ಬಗ್ಗೆ ಕಾನೂನು ತೊಡಕುಗಳನ್ನು ನಿವಾರಿಸಿಕೊಂಡು ಮುಂದೆ ಸಾಗಬೇಕಿದೆ ತಮಿಳುನಾಡಿನಲ್ಲಿ ಇರುವ ಡ್ಯಾಮ್‍ಗಳ ನೀರಿನ ವಿವರ, ಅಲ್ಲಿನ ರೈತರ ಬೆಳೆ ಪದ್ಧತಿ, ಮೂರು ಬೆಳೆಯನ್ನ ಬೆಳೆಯುತ್ತಿರುವುದರ ಬಗ್ಗೆ ಅವರು ತಿಳಿಸಿದರು. ನಮ್ಮ ರೈತರು ಕೇವಲ ಎರಡು ಬೆಳೆ ಮಾತ್ರ ಬೆಳೆಯುತ್ತಿರುವುದರ ಬಗ್ಗೆ ಸುಪ್ರೀಂ ಕೋರ್ಟಿಗೆ ಮನದಟ್ಟು ಮಾಡಿಕೊಟ್ಟು ಮೇಕೆದಾಟು ಯೋಜನೆ ಬಗ್ಗೆ ಅನುಮತಿ ಪಡೆಯಬೇಕು ಎಂದು ಅವರು ಸಲಹೆ ನೀಡಿದರು.

ಐಸಿಸಿ ಸಭೆ ಕರೆದಿಲ್ಲವೇಕೆ? - ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನೀರಾವರಿ ಸಭೆಯನ್ನೇ ಕರೆದಿಲ್ಲ. ಐಸಿಸಿ ಸಭೆಯಲ್ಲಿ ಕರ್ನಾಟಕದ ರೈತರಿಗೆ ರಾಗಿ ಬೆಳೆಯಿರಿ, ಹುರುಳಿ ಬೆಳೆಯಿರಿ ಎಂದು ಹೇಳಿ ತಮಿಳುನಾಡು ರೈತರಿಗೆ ನೀರು ಕೊಟ್ಟಿದ್ದೀರಾ ಎಂದು ಆಕ್ಷೇಪಿಸಿದರು. ಜೂನ್, ಜುಲೈ, ಆಗಸ್ಟ್ ತಿಂಗಳಿನಲ್ಲಿ ತಮಿಳುನಾಡಿಗೆ ಕೊಡಬೇಕಾಗಿರುವ ನೀರಿಗಿಂತಲೂ ಕಡಿಮೆ ನೀರನ್ನು ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಆದರೆ, ಕರ್ನಾಟಕದ ರೈತರಿಗೆ ಬಿಟ್ಟಿರುವ ನೀರು ಎಷ್ಟು ಎಂದು ಹೇಳುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇಕೆದಾಟು ಮತ್ತು ಮಹದಾಯಿ ಯೋಜನೆ ಬಗ್ಗೆ ಸರ್ವಪಕ್ಷದ ನಿಯೋಗವನ್ನು ಪ್ರಧಾನಮಂತ್ರಿ ಬಳಿಗೆ ಕೊಂಡೊಯ್ಯಲು ಸಲಹೆ ನೀಡಿದರು. ಆಗ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಎರಡು ಎರಡು ವಿಚಾರಗಳು ಸುಪ್ರೀಂ ಕೋರ್ಟ್‍ನಲ್ಲಿ ಇವೆ. ಗೋವಾ ಸರ್ಕಾರ ಮಹದಾಯಿ ವಿಚಾರವಾಗಿ ಅರಣ್ಯಾಧಿಕಾರಿ ಮೂಲಕ ಆಕ್ಷೇಪಣ ಪತ್ರವನ್ನು ನೀಡಿದೆ ಎಂದರು. ರಾಜ್ಯದ ರೈತರ ಹಿತವನ್ನು ಕಾಪಾಡಲು ಬಿಜೆಪಿ ಬದ್ಧವಾಗಿದೆ ಆದ್ದರಿಂದ ರೈತರ ಪರವಾಗಿ ನಾವು ಸಹಕಾರ ಕೊಡುತ್ತೇವೆ ರೈತರ ಹಿತ ಕಾಪಾಡಲು ಬಿಜೆಪಿ ತನ್ನ ಬದ್ಧತೆಯನ್ನು ಪ್ರದರ್ಶಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ