Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರಿನಲ್ಲಿ ಏಷ್ಯಾ ಖಂಡದ ಅತಿ ದೊಡ್ಡ ಕೈಗಾರಿಕಾ ಹಬ್ : ಸಚಿವ ಡಾ. ಜಿ. ಪರಮೇಶ್ವರ್‌

ಸುದ್ದಿಮೂಲ ವಾರ್ತೆ

ತುಮಕೂರು, ಆ.24 : ಜಿಲ್ಲೆಯನ್ನು ಗ್ರೇಟರ್ ಬೆಂಗಳೂರನ್ನಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಮುಂದಿನ ದಿನಗಳಲ್ಲಿ ಏಷ್ಯಾ ಖಂಡದ ಅತಿ ದೊಡ್ಡ ಕೈಗಾರಿಕಾ ಹಬ್ ಆಗಿ ತುಮಕೂರು ಜಿಲ್ಲೆ ಹೊರಹೊಮ್ಮಲಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ಕಾರ್ಪೋರೇಟ್ ಸೋಷಿಯಲ್ ರೆಸ್ಪಾನ್ಸಿಬಲಿಟಿ ನಿಧಿಯಡಿ ಕೈಗೊಳ್ಳಬಹುದಾದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಕೈಗಾರಿಕೋದ್ಯಮಿಗಳೊಂದಿಗೆ ನಡೆಸಲಾದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಹೂಡಿಕೆ ಮಾಡಲು ದೊಡ್ಡ ದೊಡ್ಡ ಕಂಪನಿಗಳಿಗೆ ಮೂಲಸೌಕರ್ಯಗಳೊಂದಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಜಿಲ್ಲೆಯ ವಸಂತನರಸಾಪುರ, ಹಿರೇಹಳ್ಳಿ ಮತ್ತು ಅಂತರಸನಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಹೂಡಿಕೆ ಮಾಡಿ ಕಾರ್ಯನಿರ್ವಹಿಸುತ್ತಿರುವ ಕಂಪನಿ, ಕೈಗಾರಿಕೆಗಳು ಕಾರ್ಪೊರೇಟ್ ಸಿ.ಎಸ್.ಆರ್ ನಿಧಿಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್  ಮುಖ್ಯಕಾರ್ಯನಿರ್ವಹಣಾಧಿಕಾರಿ ಅವರ ವಿವೇಚನೆ ಮೇರೆಗೆ ಶಿಕ್ಷಣ, ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಏಳಿಗೆಗಾಗಿ ವ್ಯಯಿಸಲು ಹೆಚ್ಚಿನ ಒತ್ತನ್ನು ನೀಡಬೇಕೆಂದು ಕೈಗಾರಿಕೋದ್ಯಮಿಗಳಿಗೆ ಕರೆ ನೀಡಿದರು.

ಈಗಾಗಲೇ ಜಿಲ್ಲೆಯಲ್ಲಿ ಹೆಚ್.ಎ.ಎಲ್. ವತಿಯಿಂದ ಹೆಲಿಕಾಪ್ಟರ್ ಉತ್ಪಾದನಾ ಘಟಕವನ್ನು ಸ್ಥಾಪಿಸುವುದರ ಮೂಲಕ ಇಲ್ಲಿನ ಜನರಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿ ಕೊಡಲಾಗಿದ್ದು, ಇಡೀ ವಿಶ್ವದಲ್ಲೇ ಅತಿ ದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಘಟಕವಾಗಿ ಹೆಚ್‌ಎಎಲ್ ಹೊರಹೊಮ್ಮಲಿದೆ ಎಂದರು.

ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಕೇಬಲ್ ಕಾಮಗಾರಿಯು ಪ್ರಗತಿಯಲ್ಲಿದ್ದು, ಅಕ್ಟೋಬರ್ ತಿಂಗಳೊಳಗೆ ಪೂರ್ಣಗೊಳ್ಳಲಿದೆ. ನಂತರ ವಿದ್ಯುತ್ ಸಮಸ್ಯೆ ಇರುವುದಿಲ್ಲ. ತ್ರೀಸ್ಟಾರ್ ಹೋಟೆಲ್‌ಗಳು ಸೇರಿದಂತೆ ಹೋಟೆಲ್‌ಗಳ ಸಂಖ್ಯೆ ಹೆಚ್ಚಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕೈಗಾರಿಕಾ ಪ್ರದೇಶದಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪಿಸಲಾಗುವುದು. ಕೈಗಾರಿಕಾ ವಲಯದ ಕಾರ್ಮಿಕರು ಎರಡನೇ ಪಾಳಿಯಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳುವ ಸಂದರ್ಭದಲ್ಲಿ ಅವರಿಗೆ ಆಗುವ ಸಮಸ್ಯೆಗಳನ್ನು ತಪ್ಪಿಸಲು ರಾತ್ರಿ ಪಾಳಿಯಲ್ಲಿ ಹೆಚ್ಚಾಗಿ ಪೊಲೀಸ್ ಪೇದೆಗಳನ್ನು ಕರ್ತವ್ಯಕ್ಕೆ ನೇಮಿಸಿ ಎಂದು ಪೊಲೀಸ್ ವರಿಷ್ಠಾಧಿಕಾರಿಗೆ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಮಾತನಾಡಿ, ಕೈಗಾರಿಕಾ ಪ್ರದೇಶಗಳಲ್ಲಿ ದುರಸ್ತಿಗೆ ಒಳಪಟ್ಟಿರುವ ರಸ್ತೆಗಳನ್ನು ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳಿಂದ ಅಭಿವೃದ್ಧಿಪಡಿಸಲಾಗುವುದು. ಕೈಗಾರಿಕಾ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯಲ್ಲಿರುವ 4200 ಶಾಲೆಗಳಲ್ಲಿ 2.5ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಗಳಿಗೆ

ಪ್ರಮುಖವಾಗಿ ಮೂಲಭೂತ ಸೌಲಭ್ಯಗಳಾದ ಕೊಠಡಿ, ಶೌಚಾಲಯ, ಆಟದ ಮೈದಾನವನ್ನು ಸಿಎಸ್‌ಆರ್ ಅನುದಾನದಲ್ಲಿ ಅಭಿವೃದ್ಧಿಪಡಿಸಬೇಕು ಹಾಗೂ ಗುಣಮಟ್ಟದ ಶಿಕ್ಷಣವು ಎಲ್ಲರಿಗೂ ದೊರೆಯುವಂತೆ ಆಗಬೇಕು. ಈ ನಿಟ್ಟಿನಲ್ಲಿ ಅನುದಾನವನ್ನು ಬಳಕೆ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಾಪೂರ್‌ವಾಡ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಅತೀಕ್ ಪಾಷಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ