Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಕೀಲರ ಮೇಲೆ ಹಲ್ಲೆ ಕೋರ್ಟ್ ಕಲಾಪ ಬಹಿಷ್ಕಾರ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಆ. 18 : ಸಮಾಜಘಾತುಕ ಶಕ್ತಿಗಳ ಕಡಿವಾಣಕ್ಕೆ ಪೊಲೀಸರು ಮುಂದಾಗಬೇಕು. ಪದೇ ಪದೇ ವಕೀಲರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಲೇ ಇದ್ದು, ಸರಕಾರ ವಕೀಲರ ರಕ್ಷಣಾ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ದೇವನಹಳ್ಳಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಜೊನ್ನಹಳ್ಳಿ ಮುನಿರಾಜ್ ತಿಳಿಸಿದರು.

ದೇವನಹಳ್ಳಿ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ವಕೀಲರ ಸಂಘದ ವತಿಯಿಂದ ಗುರುವಾರ ಸಂಘದ ಸದಸ್ಯ ವಕೀಲ ಮಹೇಶ್ ಅವರ ಮೇಲೆ ಹೊಸವುಡ್ಯ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಕ್ಷುಲ್ಲಕ ಕಾರಣಕ್ಕಾಗಿ ಮಾರಾಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕ್ಷುಲ್ಲಕ ಕಾರಣಕ್ಕಾಗಿ ಅವರ ಸ್ವಗ್ರಾಮದಲ್ಲಿ ವಕೀಲ ಮಹೇಶ್ ಅವರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಲಾಗಿದೆ. ತಲೆಗೆ ಪೆಟ್ಟು ಬಿದ್ದಿದ್ದು, ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಈಗಾಗಲೇ 7 ಕಿಡಿಗೇಡಿಗಳ ಪೈಕಿ 3 ಆರೋಪಿಗಳನ್ನು ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಬೇಕು. ಇಂದು ನ್ಯಾಯಾಲಯದ ಕಾರ್ಯಕಲಾಪಗಳನ್ನು ಕೈಬಿಡಲಾಗಿದ್ದು, ಆರೋಪಿಗಳ ಪರವಾಗಿ ಯಾವುದೇ ವಕೀಲರು ವಕಾಲತ್ತು ಸಲ್ಲಿಸಬಾರದೆಂದು ಮನವಿ ಮಾಡಲಾಗಿದೆ ಎಂದರು.

ವಕೀಲರ ಮೇಲಿನ ಹಲ್ಲೆಗಳನ್ನು ತಡೆಗಟ್ಟಲು ಸರಕಾರ ರಕ್ಷಣಾ ಕಾಯ್ದೆಯನ್ನು ಜಾರಿ ಮಾಡಿ ಆದೇಶ ಹೊರಡಿಸಬೇಕು. ಕಕ್ಷಿದಾರರ ಪರವಾಗಿ ವಾದ-ವಿವಾದಗಳನ್ನು ಮಾಡುವ ವಕೀಲರ ವೃತ್ತಿಗೆ ರಕ್ಷಣೆ ಬೇಕಿದೆ. ಸಂಘದ ಸದಸ್ಯ ಮಹೇಶ್ ಅವರ ಮೇಲೆ ನಡೆದಂತಹ ಹೀನಾಯ ಕೃತ್ಯ ಖಂಡನೀಯ. ಮುಂದೆ ಈ ರೀತಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು. ಪೊಲೀಸರು ಆರೋಪಿಗಳನ್ನು ಬಂಧಿಸಬೇಕು ಎಂದು ವಕೀಲ ಭೈರೇಗೌಡ ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ವಕೀಲ ಭೈರೇಗೌಡ, ವಕೀಲರ ಸಂಘದ ಉಪಾಧ್ಯಕ್ಷ ಕೇಶವಮೂರ್ತಿ, ಪ್ರಧಾನಕಾರ್ಯದರ್ಶಿ ಕೃಷ್ಣೋಜಿರಾವ್, ಜಂಟಿ ಕಾರ್ಯದರ್ಶಿ ಮುನೇಗೌಡ, ಖಜಾಂಚಿ ಮಾರೇಗೌಡ, ಯುವ ವಕೀಲರಾದ ಶ್ರೀನಾಥ್, ಅನಿಲ್, ಉಷಾ, ಸಂಘದ ಸದಸ್ಯರು, ಸಹಪಾಟಿವಕೀಲರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ