Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸಭಾ ಚುನಾವಣೆ: ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮೇ 11: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಲೋಕಸಭಾ ಚುನಾವಣೆ 2019ರಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ, ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿವುದರ ಜೊತೆಗೆ, ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ನಿಮಿತ್ತರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪುಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು / ಹವ್ಯಾಸಿ ಛಾಯಾಗ್ರಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಪತ್ರಿಕಾ ಮಾನ್ಯತಾ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಹಾಗೂ ಮನ ವಿಳಾಸ, ಮೋಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ : [email protected] ಸಲ್ಲಿಸುವುದು. ಸಲ್ಲಿಕೆಗಳನ್ನು ದಿನಾಂಕ: 20-05-2023 ರಂದು ಶನಿವಾರ ಸಂಜೆ 5 ಗಂಟೆಯೊಳಗೆ ಇ-ಮೇಲ್ ಮೂಲಕ ಸಲ್ಲಿಸಲು ಈ ಮೂಲಕ ತಿಳಿಸಲಾಗಿದೆ.

ಆಯ್ಕೆಯಾಗುವ ಛಾಯಾಚಿತ್ರಗಳಿಗೆ ಪಥಮ ಬಹುಮಾನ ರೂ. 25,000/- ದ್ವಿತೀಯ ಬಹುಮಾನ 15,000/- ತೃತೀಯ ಬಹುಮಾನ 10,000/- ಹಾಗೂ ಸಮಾಧಾನಕರ ಬಹುಮಾನ 6,000/- ಮತ್ತು ವಿಶೇಷ ಬಹುಮಾನ 5,000/- ಒಟ್ಟು ಬಹುಮಾನದ ಮೊತ್ತ - 61,000/- ಒಳಗೊಂಡಿರುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತರ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ