Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣಪತಿ ಸಚ್ಛಿದಾನಂದ ಸ್ವಾಮೀಜಿಗೆ ಗೌರವ ಡಾಕ್ಟಾರೇಟ್ ಪ್ರದಾನ 

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.31: ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ವತಿಯಿಂದ 6ನೇ ಘಟಿಕೋತ್ಸವದ ಅಂಗವಾಗಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಗೆ ನೀಡಲಾಗಿರುವ ಗೌರವ ಡಾಕ್ಟಾರೇಟ್ ಅನ್ನು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು.

ಬಳಿಕ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯು ಜ್ಞಾನ, ವಿಜ್ಞಾನ, ಕಲೆ ಮತ್ತು ಸಂಗೀತದ ಅಮೂಲ್ಯ ಪರಂಪರೆಯನ್ನು ಒಳಗೊಂಡಿದೆ. ಹೆಸರಾಂತ ಶಾಸ್ತ್ರೀಯ ಸಂಗೀತ ಗಾಯಕಿ, ಗೌರವಾನ್ವಿತ ಗಂಗೂಬಾಯಿ ಹಾನಗಲ್ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಈ ವಿಶ್ವವಿದ್ಯಾಲಯವು ಸಂಸ್ಕೃತಿ, ಕಲೆ ಮತ್ತು ಸಂಗೀತದ ಅಮೂಲ್ಯ ಪರಂಪರೆಯನ್ನು ಮುನ್ನಡೆಸುವಲ್ಲಿ ಶ್ಲಾಘನೀಯ ಕೆಲಸ ಮಾಡುತ್ತಿದೆ ಎಂದರು.

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಶಿಕ್ಷಣ, ಕಲೆ, ಸಂಗೀತ ಮತ್ತು ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೆಲಸ ಮಾಡಿದ ಮಹನೀಯರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಅದರಂತೆ ಈ ದಿನ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿರುವುದು ಧನ್ಯತಾ ಭಾವವನ್ನು ತುಂಬಿದೆ ಎಂದರು.

ಭಾರತದ 'ಉಕ್ಕಿನ ಮನುಷ್ಯ', ದೇಶದ ಮೊದಲ ಗೃಹ ಸಚಿವ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಜನ್ಮದಿನದ ಅಂಗವಾಗಿ ಅವರಿಗೆ ನಮನ ಸಲ್ಲಿಸುತ್ತಾ, ರಾಷ್ಟ್ರೀಯ ಏಕತಾ ದಿನದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯ ತಿಳಿಸಿದರು. ಸರ್ದಾರ್ ಪಟೇಲ್ ಅವರ ದೇಶಕ್ಕೆ ಸಮರ್ಪಿತ ಜೀವನ ಮತ್ತು ದೇಶದ ಮೊದಲ ಗೃಹ ಸಚಿವರಾಗಿ ಅವರ ರಾಷ್ಟ್ರ ನಿರ್ಮಾಣ ಕಾರ್ಯವು ನಮಗೆ ಯಾವಾಗಲೂ ಸ್ಫೂರ್ತಿ ನೀಡುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕುಲಪತಿ, ಪ್ರಾಧ್ಯಾಪಕ ನಾಗೇಶ್ ವಿ.ಬೆಟ್ಟಕೋಟೆ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ