Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಅಗತ್ಯ

 

ಸುದ್ದಿಮೂಲ ವಾರ್ತೆ

ತುಮಕೂರು, ಆ.18 : ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಫೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಲುವಾಗಿ ನಾಮಫಲಕಗಳನ್ನು ಅಳವಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ತುಮಕೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಮಿಷನ್ ವಾತ್ಸಲ್ಯ ಯೋಜನೆಯಡಿ ಜಿಲ್ಲಾ ಮಟ್ಟದ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಏಪ್ರಿಲ್ ನಿಂದ ಜುಲೈ ತಿಂಗಳ ಅಂತ್ಯಕ್ಕೆ ಹೊಸದಾಗಿ ಪೊಕ್ಸೊ ಕಾಯ್ದೆಯಡಿ 47 ಪ್ರಕರಣಗಳು ದಾಖಲಾಗಿವೆ. ಹೆಚ್ಚಾಗಿ ಕೊರಟಗೆರೆ, ಮಧುಗಿರಿ, ಗುಬ್ಬಿ ಕುಣಿಗಲ್ ತಾಲ್ಲೂಕುಗಳಲ್ಲಿ ಪ್ರಕರಣಗಳು ದಾಖಲಾಗುತ್ತಿವೆ. ಹಿಂದಿನ ಸಾಲಿನ ಬಾಕಿ ಪ್ರಕರಣಗಳು 127 ಸೇರಿದಂತೆ ಒಟ್ಟು 174 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಭಿಕ್ಷಾಟನೆ ಮಾಡುವವರ ಸಂಖ್ಯೆ ಹೆಚ್ಚಾಗಿರುವ ಕಾರಣ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಅವರನ್ನು ನಿರಾಶ್ರಿತರ ಕೇಂದ್ರಗಳಿಗೆ ಬಿಡುವಂತೆ ಕ್ರಮವಹಿಸಬೇಕು. ಪ್ರತಿ ಶಾಲೆಗಳಲ್ಲಿ ಮೀನಾ ತಂಡವನ್ನು ರಚನೆ ಮಾಡಲಾಗಿದೆ. ಇದರ ಮೂಲಕ ವಿದ್ಯಾರ್ಥಿಗಳಿಗೆ ಪೋಕ್ಸೋ ಹಾಗೂ ಬಾಲ್ಯವಿವಾಹ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಸಭೆಗೆ ಡಿಡಿಪಿಐ ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲಾ ಶಾಲೆಗಳ ಶಿಕ್ಷಕರಿಗೆ ತಾಲ್ಲೂಕು ಮಟ್ಟದಲ್ಲಿ ಪೊಕ್ಸೊ

ಕಾಯ್ದೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಬೇಕು. ಜಿಲ್ಲೆಯ ಎಲ್ಲಾ ವಸತಿ ನಿಲಯಗಳ ಸಿಬ್ಬಂದಿ, ವಾರ್ಡನ್, ವಿದ್ಯಾರ್ಥಿಗಳಿಗೆ ಪೊಕ್ಸೊ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಪ್ರಸ್ತುತ ದಿನಗಳಲ್ಲಿ ಶಾಲೆ ಹಾಗೂ ಕಾಲೇಜು ಹಂತದಲ್ಲಿ ಈ ರೀತಿಯ ಪ್ರಕರಣಗಳು ನಡೆಯುತ್ತಿವೆ. ಪೊಕ್ಸೊ ಕುರಿತು ಮಕ್ಕಳಿಗೆ ಅರಿವು ಮೂಡಿಸುವುದರ ಜೊತೆಗೆ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆಯೂ ತಿಳಿಸಬೇಕು ಎಂದರು.

ಸಭೆಯಲ್ಲಿ ಡಿವೈಎಸ್ಪಿ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಡಿಹೆಚ್‌ಓ ಡಾ: ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನುಷಾ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಗಂಗಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ