Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಯೋಧ್ಯೆಯ ನರಸಿಂಹ ದೇವಸ್ಥಾನದ ಅರ್ಚಕ ಆತ್ಮಹತ್ಯೆ

ಸುದ್ದಿಮೂಲ ವಾರ್ತೆ
ಅಯೋಧ್ಯೆ, ಮೇ.2: ದೇವಲಾಯಗಳ ನಗರಿ ಎಂದೇ ಕರೆಯಲ್ಪಡುವ ಅಯೋಧ್ಯೆಯಲ್ಲಿ ದೇವಲಾಯದ ಅರ್ಚಕ ರಾಮ್ ಶಂಕರ್ ದಾಸ ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಅಯೋಧ್ಯೆಯಲ್ಲಿ ನಡೆದಿದೆ.

ಅಯೋಧ್ಯೆಯ ನರಸಿಂಹ ದೇವಸ್ಥಾನದ ಅರ್ಚಕರಾಗಿದ್ದು, ತಮ್ಮ ಕೋಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹ ಸೋಮವಾರ ಮಧ್ಯಾಹ್ನ ದೇವಸ್ಥಾನದ ಅವರ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿಯೇ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

28 ವರ್ಷದ ಅರ್ಚಕರ ಆತ್ಮಹತ್ಯೆಗೆ ಪೊಲೀಸರೇ ಕಾರಣದೂತರಾಗಿದ್ದಾರೆ ಎಂದು ಅರ್ಚಕರು ಆತ್ಮಹತ್ಯೆಗೂ ಮುನ್ನ ಮಾಡಿದ್ದ ವಿಡಿಯೋ ಒಂದರ ಮೂಲಕ ತಿಳಿಯಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ಆ ವಿಡಿಯೋದಲ್ಲಿ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ ಎಂದು ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಈ ಆರೋಪವನ್ನು ಕುರಿತು ಅಯೋಧ್ಯೆಯ ಇನ್‌ಸ್ಪೆಕ್ಟರ್ ಕೊತ್ವಾಲಿ ಮನೋಜ್ ಶರ್ಮಾ ಅರ್ಚಕ ರಾಮ್ ಶಂಕರ್ ದಾಸ್ ಮಾದಕ ವ್ಯಸನಿಯಾಗಿದ್ದರು, ಮಾದಕ ವ್ಯಸನದ ಅಮಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಈ ಮೊದಲೇ ಅವರು ಪೊಲೀಸರ ಮೇಲು ಕೂಡ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ