Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ ನೇಮಕ

ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 30: ರಾಜ್ಯದಲ್ಲಿ ನೂತನ ಕಾಂಗ್ರೆಸ್ ಜಾರಿಯಾದ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನೂ ಸಹ ಬದಲಾವಣೆ ಮಾಡಲಾಗಿದೆ.  ಹಿರಿಯ ಪೊಲೀಸ್‌ ಅಧಿಕಾರಿ ಬಿ. ದಯಾನಂದ ಅವರನ್ನು ಬೆಂಗಳೂರು ಪೊಲೀಸ್‌ ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

1994ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ದಯಾನಂದ ಅವರು ಸದ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದಾರೆ. ಬೆಂಗಳೂರು ಪೊಲೀಸ್‌ ಆಯುಕ್ತರಾಗಿದ್ದ ಸಿ.ಎಚ್‌. ಪ್ರತಾಪ್‌ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಜಿಪಿಯನ್ನಾಗಿ ನೇಮಿಸಲಾಗಿದೆ.

ಬೆಂಗಳೂರು ಸಂಚಾರ ದಟ್ಟಣೆಯನ್ನು ಸುಧಾರಿಸುವ ಸಲುವಾಗಿ ಎಡಿಜಿಪಿ ಮಟ್ಟದ ಅಧಿಕಾರಿಯಾದ ಡಾ. ಎಂ.ಎ. ಸಲೀಂ ಅವರಿಗೆ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗಿದೆ. ಸಂಚಾರ ವಿಭಾಗ ಎಡಿಜಿಪಿ ಆಗಿದ್ದ ಎಂ.ಎ. ಸಲೀಂ ಅವರನ್ನು ಡಿಜಿಪಿಯಾಗಿ ಪದೋನ್ನತಿ ನೀಡಲಾಗಿದೆ. ಹಾಗೂ ಅವರನ್ನು ಅಪರಾಧ ತನಿಖಾ ಘಟಕ, ವಿಶೇಷ ಘಟಕಗಳು ಹಾಗೂ ಆರ್ಥಿಕ ಅಪರಾಧ ವಿಭಾಗದ ಡಿಜಿಪಿಯಾಗಿ ನೇಮಿಸಲಾಗಿದೆ. ಈ ಸ್ಥಾನದಲ್ಲಿದ್ದ ಕೆ. ವಿ. ಶರತ್‌ ಚಂದ್ರ ಅವರನ್ನು ಬಿ.ದಯಾನಂದ ಅವರು ನಿರ್ವಹಣೆ ಮಾಡುತ್ತಿದ್ದ ಗುಪ್ತಚರ ಇಲಾಖೆ ಎಡಿಜಿಪಿಯಾಗಿ ನೇಮಕ ಮಾಡಲಾಗಿದೆ.

ಬಿ. ದಯಾನಂದ ಅವರು ಈ ಹಿಂದೆ ಅನೇಕ ಹುದ್ದೆಗಳನ್ನು ನಿಭಾಯಿಸಿದ್ದು, ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಮೂರೂ ಪಕ್ಷದ ಆಡಳಿತದಲ್ಲೂ ಉತ್ತಮ ಸ್ಥಾನಗಳನ್ನು ನೀಡಲಾಗಿತ್ತು. ಎಲ್ಲರಿಗೂ ನಂಬಿಕರ್ಹ, ದಕ್ಷ ಅಧಿಕಾರಿ ಎನ್ನಿಸಿಕೊಂಡಿದ್ದಾರೆ. ಗೃಹ ಇಲಾಖೆಗೆ ಸೇರಿದ್ದರೂ ಗುಪ್ತ ಚರ ಇಲಾಖೆಯನ್ನು ಮುಖ್ಯಮಂತ್ರಿ ತಾವೇ ಇಟ್ಟುಕೊಳ್ಳುತ್ತಾರೆ. ಈ ಇಲಾಖೆಗೆ ತಮ್ಮ ಅತ್ಯಂತ ನಂಬಿಕರ್ಹ ಅಧಿಕಾರಿಯನ್ನಷ್ಟೆ ನೇಮಿಸಿಕೊಳ್ಳಲಾಗುತ್ತದೆ. ಸಿದ್ದರಾಮಯ್ಯ, ಬಿ.ಎಸ್‌. ಯಡಿಯೂರಪ್ಪ ಹಾಗೂ ಎಚ್‌.ಡಿ. ಕುಮಾರಸ್ವಾಮಿಯವರ ಅವಧಿಯಲ್ಲಿ ಮೂವರು ಸಿಎಂಗಳಿಗೂ ಗುಪ್ತಚರ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಯನ್ನು ದಯಾನಂದ ಹೊಂದಿದ್ದಾರೆ.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ