Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿಗಳನ್ನು ಕೊಟ್ಟೇ ಕೊಡುತ್ತೇವೆ: ಬಿ. ನಾಗೇಂದ್ರ

ಸುದ್ದಿಮೂಲ ವಾರ್ತೆ
ಬೆಂಗಳೂರು, ಜೂ.1: ಐದು ಗ್ಯಾರಂಟಿ ಯೋಜನೆಗಳನ್ನು ಗ್ಯಾರಂಟಿಯಾಗಿ ಕೊಟ್ಟೆ ಕೊಡುತ್ತೇವೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ‌ ಕಲ್ಯಾಣ ಸಚಿವ ಬಿ.ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದ ಮೂರನೇ ಮಹಡಿಯಲ್ಲಿರುವ 343 ಮತ್ತು 343 ಎ  ಕೊಠಡಿಯಲ್ಲಿ ಇಂದು  ಪೂಜೆ ಮಾಡಿಸಿ ಪ್ರವೇಶ ಪಡೆದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ನಿನ್ನೆ ನಡೆದ ಸಭೆಯಲ್ಲಿ ಸಿಎಂ ಉತ್ತರ ಕೊಡುತ್ತೇವೆಂದು  ಹೇಳಿದ್ದಾರೆ. ಗ್ಯಾರಂಟಿಗಳನ್ನು   ಗ್ಯಾರಂಟಿಯಾಗಿ ಕೊಟ್ಟೆ ಕೊಡ್ತಿವಿ. ಹಣವನ್ನು ಯಾವ ರೀತಿ ಒದಗಿಸಬೇಕೆಂದು ಇಲಾಖೆಯ ಅಧಿಕಾರಿಗಳ ಜೊತೆ ಸಿಎಂ ಸಭೆ ಮಾಡಿದ್ದಾರೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು,  ನನ್ನ ಜಿಲ್ಲೆಯಲ್ಲಿ ನಾನು ಒಬ್ಬನೇ ಮಂತ್ರಿ ಇದ್ದೇನೆ.  ನನಗೆ ಕೊಡ್ತಾರೆ ಎಂಬ ನಂಬಿಕೆ ಇದೆ. ಉಸ್ತುವಾರಿ ಕೊಡುವುದು ಸಿಎಂ ವಿವೇಚನೆಗೆ ಬಿಟ್ಟಿದ್ದು. ಯಾವ ಅಧಿಕಾರ ಕೊಟ್ಟರು ನಿಷ್ಟೆಯಿಂದ ಕೆಲಸ ಮಾಡುತ್ತೇನೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್  ಇಬ್ಬರು ಸೇರಿ ಜವಾಬ್ದಾರಿ ಕೊಟ್ಟಿದ್ದಾರೆ. ಪರಿಶಿಷ್ಟ ಪಂಗಡ ಕಲ್ಯಾಣ , ಯುವಜನ ಕ್ರೀಡಾ ಸಚಿವನಾಗಿ ರಾಜ್ಯದಲ್ಲಿ ಸೇವೆಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.

ಕ್ರೀಡೆಯಲ್ಲಿ ಅದ್ಭುತ ಅವಕಾಶಗಳಿವೆ.  ಈ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಕೆಲಸಗಳನ್ನು ಹಾಗೂ ಯುವ ಜನತೆಗೆ ಅಸಕ್ತಿ ಹೊಂದಿರುವ ಕ್ರೀಡೆಯಲ್ಲಿ ಒಳ್ಳೆಯ ಅವಕಾಶ ರಾಜ್ಯ ಸರ್ಕಾರ ಕಲ್ಪಿಸಿಕೊಡುತ್ತದೆ ಎಂದು ಹೇಳಿದರು.

ಅಧಿಕಾರ ವರ್ಗ ನಾನು ಸೇರಿ ಜೋಡೆತ್ತುಗಳ ರೀತಿಯಲ್ಲಿ  ಎರಡು ಇಲಾಖೆಯನ್ನು ನಡೆಸಿಕೊಂಡು ಹೋಗುತ್ತೇವೆ.  ಸಿಎಂ ಅವರು ಇಟ್ಟಿರುವ ನಂಬಿಕೆಯನ್ನು ಶಕ್ತಿಮೀರಿ ಉಳಿಸಿಕೊಳ್ಳುತ್ತೇನೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ