Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಗರ್ ಹುಕುಂ ತಂತ್ರಾಂಶ ಶೀಘ್ರ ಕಾರ್ಯಯೋಜನೆಗೊಳಿಸಿ: ಕೃಷ್ಣ ಬೈರೇಗೌಡ ಸೂಚನೆ

ಸುದ್ದಿಮೂಲ ವಾರ್ತೆ

ಬೆಂಗಳೂರು ಅ.4: ನಮೂನೆ 50, 53, 57 ಅರ್ಜಿಗಳ ನ್ಯಾಯಯುತ ವಿಲೇವಾರಿ ಹಾಗೂ ಅನಧಿಕೃತ ಸಾಗುವಳಿ ಭೂಮಿಯನ್ನು ಬಗರ್ ಹುಕುಂ ತಂತ್ರಾಶದ ಮೂಲಕ ಸಕ್ರಮಗೊಳಿಸುವ ಪ್ರಕ್ರಿಯೆಯನ್ನು ಶೀಘ್ರ ಮುಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಬುಧವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಬಗರ್ ಹುಕುಂ ತಂತ್ರಾಶದ ಬಳಕೆಯ ಕುರಿತು ಸಚಿವರಿಗೆ ಪ್ರಾತ್ಯಕ್ಷಿಕೆ ತೋರಿಸಲಾಯಿತು. ಈ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, "ರಾಜ್ಯಾದ್ಯಂತ ನಮೂನೆ 50, 53, 57 ಅರ್ಜಿಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ.

ಅನಧಿಕೃತವಾಗಿ ಸಾಗುವಳಿದಾರರು ಕೃಷಿಯಲ್ಲಿ ತೊಡಗಿದರೆ, ಅಕ್ರಮ-ಸಕ್ರಮ ಅಡಿಯಲ್ಲಿ ಸಾಗುವಳಿ ಚೀಟಿ ನೀಡಲು ಇಲಾಖೆ ಬದ್ದವಾಗಿದೆ. ಆದರೆ, ಸಾವಿರಾರು ಎಕರೆ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದೆ. ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸಾಧ್ಯವಿಲ್ಲ.

ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಲಿದೆ. ಅಲ್ಲದೆ, ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ, ಜನರಿಗೂ ಈ ಮ‌ೂಲಕ ಸುಲಭ ಆಡಳಿತ ಸಿಗಲಿದೆ ಎಂದರು.

ಮುಂದುವರೆದು, ಈ ಆ್ಯಪ್ ನಲ್ಲಿ ಯಾವುದೇ ಲೋಪದೋಷಗಳು ಇಲ್ಲದಂತೆ ಶೀಘ್ರದಲ್ಲೇ ಅಭಿವೃದ್ಧಿಪಡಿಸಿ ಕಾರ್ಯಯೋಜನೆಗೆ ತರುವಂತೆಯೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಇಲಾಖೆ ಆಯುಕ್ತರಾದ ಸುನೀಲ್ ಕುಮಾರ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ