Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣೆ  ಪ್ರತಿಷ್ಠೆಯಾಗಿ ತೆಗೆದುಕೊಂಡು ಕಾರ್ಯನಿರ್ವಹಿಸಿ: ಬೈರತಿ ಬಸವರಾಜ

ಸುದ್ದಿಮೂಲ ವಾರ್ತೆ
ಕೆ.ಆರ್.ಪುರ ಏ14: ಯಾವೊಬ್ಬರನ್ನು ಕಡೆಗಣಿಸದೇ ಎಲ್ಲರನ್ನೂ ಗಣನೆಗೆ ತೆಗೆದುಕೊಂಡು ಕ್ಷೇತ್ರದಾದ್ಯಂತ ಕೆಲಸ ಮಾಡುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.

ಕ್ಷೇತ್ರದ ಭಟ್ಟರಹಳ್ಳಿಯ ಶ್ರೀಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮುಖಾಂತರ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಚುನಾವಣೆಯನ್ನು ಲಘುವಾಗಿ ತೆಗೆದುಕೊಳಬೇಡಿ, ಪ್ರತಿಷ್ಠೆಯಾಗಿ ತೆಗೆದುಕೊಂಡು ಕಾರ್ಯ ನಿರ್ವಹಿಸಿ. ಎದುರಾಳಿಗಳು ಬಲಾಡ್ಯರೋ ಇಲ್ಲವೋ ಎಂಬುದರ ಬಗ್ಗೆ ತಲೆಕೆಡಿಸಿಕೊಳ್ಳದೇ ಜವಾಬ್ದಾರಿಯಿಂದ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಾರ್ಯ ನಡೆಸಬೇಕು. ಪ್ರತಿಯೊಬ್ಬರನ್ನು ಗಣನೆಗೆ ತೆಗೆದು ಕೊಂಡು ಎದುರಾಳಿಗಳನ್ನು ಸೋಲಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಪ್ರತಿಯೊಬ್ಬ ಕಾರ್ಯಕರ್ತರು ಮತದಾರರ ಮನೆ ಬಾಗಿಲಿಗೆ ತೆರಳಿ   ಕೇಂದ್ರ ಮತ್ತು  ಸರ್ಕಾರದ ಸಾಧನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಮುಖಾಂತರ ಮತಗಳನ್ನು ಕೇಳಿ, ದೇಶ,ರಾಜ್ಯ ಹಾಗೂ ಕ್ಷೇತ್ರದಲ್ಲಿ  ಆಗಿರುವ ಅಭಿವೃದ್ಧಿ ಕಾರ್ಯಗಳೇ ನಮಗೆ ಶ್ರೀರಕ್ಷೆಯಾಗಿದ್ದು ಗೆಲುವಿಗೆ ಪೂರಕವಾಗಲಿವೆ. ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮುಖಾಂತರ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕಿದೆ ಎಂದು ತಿಳಿಸಿದರು.


ಏ.18ರಂದು ನಾಮಪತ್ರ ಸಲ್ಲಿಸಲಿದ್ದು ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯರಾದ ಜಯಪ್ರಕಾಶ್, ಎಸ್.ಜಿ.ನಾಗರಾಜ್, ವಿ.ಸುರೇಶ್, ಅಂತೋಣಿಸ್ವಾಮಿ, ಶ್ರೀಕಾಂತ್ ,ಸಿದ್ದಲಿಂಗಯ್ಯ, ಮುಖಂಡರಾದ ಮುನೇಗೌಡ,ನಾಗೇನಹಳ್ಳಿ ಲೋಕೇಶ್,ಮಾರ್ಕೆಟ್‌ ರಮೇಶ್,ಮೇಡಹಳ್ಳಿ ಕೃಷ್ಣಮೂರ್ತಿ, ಶಾಂತಾಕೃಷ್ಣಮೂರ್ತಿ,ಗಂಗಾಧರ, ಶಿವಪ್ಪ, ಇಟಾಚಿ ಮಂಜುನಾಥ್ ಇದ್ದರು.



Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ