Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ನೇಹಿತರೊಂದಿಗೆ ಬಕ್ರೀದ್ ಪಾರ್ಟಿ, ಓರ್ವನ ಕೊಲೆ

ಬಳ್ಳಾರಿ, ಜೂನ್, 30;ಗುರುವಾರ ಸಂಜೆಯ ಬಕ್ರೀದ್ ಹಬ್ಬದ ಸಂಭ್ರಮಾಚರಣೆಯ ಪಾರ್ಟಿ ಮಾಡುವಾಗ ಸ್ನೇಹಿತರು ಪರಸ್ಪರಲ್ಲಿ ನಡೆದ ಜಗಳ ಓರ್ವನ ಕೊಲೆಯಲ್ಲಿ ಮುಕ್ತಾಯಗೊಂಡಿದೆ.

ಕೊಲೆಯಾದ ಯುವಕ ಕಲಬುರಗಿಯಲ್ಲಿ ಅರೇಬಿಕ್ ವಿದ್ಯಾಭ್ಯಾಸ ಮಾಡುತ್ತಿದ್ದ, ಬಳ್ಳಾರಿಯ ನೇತಾಜಿ ನಗರದ ನಿವಾಸಿ ಲಿಯಾಖತ್ ರೋಷನ್ (24).

ಕಲಬುರ್ಗಿಯಿಂದ ಬಕ್ರೀದ್ ಆಚರಣೆಗಾಗಿ ಸ್ವಂತ ಊರಾದ ಬಳ್ಳಾರಿಗೆ ಬುಧವಾರ ಬಂದಿದ್ದ ಲಿಯಾಖತ್ ರೋಷನ್, ಗುರುವಾರದ ಸಾಮೂಹಿಕ ಪ್ರಾರ್ಥನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಂಜೆವೇಳೆ ಸೂರಿ ಕಾಲೊನಿಯಲ್ಲಿ ನಡೆದ ಸ್ನೇಹಿತರಗೊಂದಿಗಿನ ಪಾರ್ಟಿಯಲ್ಲಿದ್ದ.

ಪಾರ್ಟಿಯ ವೇಳೆ ಸ್ನೇಹಿತರಲ್ಲಿ ಮಾತಿಗೆ ಮಾತು ಬೆಳೆದು, ಜಗಳವಾಗಿ ಮಾರಾಕಾಸ್ತ್ರಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಆಗ, ಸ್ನೇಹಿತರ ಗುಂಪು ಲಿಯಾಖತ್ ರೋಷನನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಶಂಕಿತರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ