Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆ. 3 ರಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಘಟಿಕೋತ್ಸವ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ. 1 : ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 57ನೇ ಘಟಿಕೋತ್ಸವ-2023 ಆ. 3 ರಂದು ಗುರುವಾರ ಬೆಳಿಗ್ಗೆ 11 ಘಂಟೆಗೆ ಜಿ.ಕೆ.ವಿ.ಕೆ. ಆವರಣದಲ್ಲಿರುವ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ಜರುಗಲಿದೆ ಎಂದು ಕುಲಪತಿಗಳಾದ ಡಾ. ಎಸ್.ವಿ.ಸುರೇಶ ಅವರು ತಿಳಿಸಿದರು.

ಜಿಕೆವಿಕೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೈಕ್ಷಣಿಕ ವರ್ಷ 2021-22 ರಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 57ನೇ ಘಟಿಕೋತ್ಸವದಲ್ಲಿ ಒಟ್ಟಾರೆ 1295 ವಿದ್ಯಾರ್ಥಿಗಳಿಗೆ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಪ್ರದಾನ ಮಾಡಲಾಗುತ್ತಿದೆ. ಅದರಲ್ಲಿ, 891 ವಿದ್ಯಾರ್ಥಿಗಳು ವಿವಿಧ ಸ್ನಾತಕ ಪದವಿಗಳನ್ನು, 299 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಹಾಗೂ 105 ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿಗಳನ್ನು ಪಡೆಯಲಿದ್ದಾರೆ.

ಇದೇ ಸಮಾರಂಭದಂದು, ಡಾಕ್ಟರ್ ಆಫ್ ಫಿಲಾಸೊಫಿ ಪದವಿಯಲ್ಲಿ ಒಟ್ಟು 29 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಅದರಲ್ಲಿ 14 ವಿದ್ಯಾರ್ಥಿನಿಯರು ಹಾಗೂ 02 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯದ 15 ಚಿನ್ನದ ಪದಕಗಳನ್ನು, 10 ದಾನಿಗಳ ಚಿನ್ನದ ಪದಕಗಳು ಹಾಗೂ 04 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ.

ಮಾಸ್ಟರ್ ಪದವಿಯಲ್ಲಿ ಒಟ್ಟು 74 ಚಿನ್ನದ ಪದಕಗಳನ್ನು ಪ್ರದಾನÀ ಮಾಡಲಿದ್ದು, ಅದರಲ್ಲಿ 21 ವಿದ್ಯಾರ್ಥಿನಿಯರು ಹಾಗೂ 10 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯ ನೀಡುವ 23 ಚಿನ್ನದ ಪದಕಗಳು ಹಾಗೂ 05 ಆವರಣದ ಚಿನ್ನದ ಪದಕಗಳನ್ನು, 38 ದಾನಿಗಳ ಚಿನ್ನದ ಪದಕಗಳು ಹಾಗೂ 08 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ.

ಸ್ನಾತಕ ಪದವಿಯಲ್ಲಿ ಒಟ್ಟು 57 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಅದರಲ್ಲಿ 14 ವಿದ್ಯಾರ್ಥಿನಿಯರು ಹಾಗೂ 05 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯ ನೀಡುವ 06 ಚಿನ್ನದ ಪದಕಗಳು, 04 ಆವರಣದ ಚಿನ್ನದ ಪದಕಗಳು, 01 ಕೃವಿವಿಯ ಕ್ರೀಡಾ ಚಿನ್ನದ ಪದಕ, 38 ದಾನಿಗಳ ಚಿನ್ನದ ಪದಕಗಳು ಹಾಗೂ 08 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ.

57ನೇ ಘಟಿಕೋತ್ಸವ ಸಮಾರಂಭದಲ್ಲಿ ಒಟ್ಟಾರೆ 160 ಚಿನ್ನದ ಪದಕ ಹಾಗೂ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿದ್ಯಾರ್ಥಿಗಳು ಪಡೆಯಲಿದ್ದು ಅದರಲ್ಲಿ 49 ವಿಧ್ಯಾರ್ಥಿನಿಯರಿಗೆ ವಿಶ್ವವಿದ್ಯಾನಿಲಯದ 42 ಚಿನ್ನದ ಪದಕ, 56 ದಾನಿಗಳ ಚಿನ್ನದ ಪದಕ ಹಾಗೂ 11 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಅದರಂತೆ 17 ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ 12 ಚಿನ್ನದ ಪದಕ, 30 ದಾನಿಗಳ ಚಿನ್ನದ ಪದಕ ಹಾಗೂ 09 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು.

ಒಟ್ಟು 66 ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ 54 ಚಿನ್ನದ ಪದಕಗಳನ್ನು, 86 ದಾನಿಗಳ ಚಿನ್ನದ ಪದಕಗಳನ್ನು ಹಾಗೂ 20 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು.

ಪತ್ರಿಕಾ ಗೋಷ್ಠಿಯಲ್ಲಿ ಡಾ. ಕೆ.ಸಿ. ನಾರಾಯಣಸ್ವಾಮಿ, ಶಿಕ್ಷಣ ನಿರ್ದೇಶಕರು, ಡಾ. ಬಸವೇಗೌಡ, ಕುಲಸಚಿವರು, ಡಾ. ವಿ.ಎಲ್. ಮಧುಪ್ರಸಾದ್, ವಿಸ್ತರಣಾ ನಿರ್ದೇಶಕರು, ಡಾ. ಕೆ. ಶಿವರಾಮು, ಹಿರಿಯ ವಾರ್ತಾತಜ್ಞರು ಮತ್ತು ಮುಖ್ಯಸ್ಥರು ಹಾಗೂ ಡಾ. ಸಿದ್ದಯ್ಯ, ಪ್ರಾಧ್ಯಾಪಕರು, ಮುಖ್ಯ ವಿಜ್ಞಾನ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ