Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಬೆಂಗಳೂರು ಹಬ್ಬ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮಾ.24: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರು ಹಬ್ಬದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮೇಳಗಳನ್ನು ಮಾರ್ಚ್ 25ರಂದು ಬೆಳಗ್ಗೆ 9.30 ರಿಂದ ಸಂಜೆ 6 ರವರೆಗೆ ಕಬ್ಬನ್ ಪಾರ್ಕ್ ಆವರಣದ ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗಿದೆ.

ರಾಜ್ಯದ ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆಗಳನ್ನು ಬೆಂಗಳೂರಿನಲ್ಲಿ ನೆಲೆಸಿರುವ ಇತರೆ ಭಾಷಿಕರನ್ನು ಒಳಗೊಂಡಂತೆ, ನಾಡಿನ ಜನರಿಗೆ ಪರಿಚಯಿಸುವ ದೃಷ್ಟಿಯಿಂದ ಬೆಂಗಳೂರು ಹಬ್ಬ ಆಚರಿಸಲಾಗಿದೆ.

ವಿಧಾನಸೌಧದ ಮೆಟ್ಟಿಲುಗಳ ಮುಂಭಾಗದ ವೇದಿಕೆಯಲ್ಲಿ ಸಂಜೆ 6.30 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ನಂತರ ಹೆಸರಾಂತ ಸಂಗೀತಗಾರರಿಂದ ಗಾಯನ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಲಿದ್ದು, ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ.ಸುನಿಲ್‍ಕುಮಾರ್, ಇತರೆ ಸಚಿವರು ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಮಾರ್ಚ್ 26 ರಂದು ಸಂಜೆ 5.00 ಗಂಟೆಗೆ ವಿಧಾನಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಹಾಗೂ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿದ ನಂತರ, ನಾಡಿನ ಪ್ರಸಿದ್ಧ ಸಂಗೀತಗಾರರು ಹಾಗೂ ನೃತ್ಯ ಪಟುಗಳಿಂದ ಗಾಯನ ಹಾಗೂ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ