Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಕಬಡ್ಡಿ ಪಂದ್ಯಾವಳಿ

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ ಜು, 22 : ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ದೈಹಿಕ ನಿರ್ದೇಶನಾಲಯ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪುರುಷರ ಕಬ್ಬಡಿ ಪಂದ್ಯಾವಳಿಗಳು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆ. ಆರ್.ಪುರ ಕಾಲೇಜು ಮೈದಾನದಲ್ಲಿ ನಡೆದವು. ಎರಡು ದಿನದ ಕ್ರೀಡಾಕೂಟದಲ್ಲಿ 60 ತಂಡಗಳು ಭಾಗವಹಿಸಿದ್ದವು.

ಶಾಸಕ ಬೈರತಿ ಬಸವರಾಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವ್ಯಾಯಾಮ ಎಲ್ಲರಿಗೂ ಬೇಕಾಗಿದೆ. ಆದ್ದರಿಂದ ವಿದ್ಯಾರ್ಥಿ ಜೀವನದಲ್ಲಿ ಕ್ರೀಡಾಕೂಟ ಆಯೋಜಿಸಿರುವುದು ತುಂಬಾ ಸಂತೋಷದ ವಿಷಯ ಹೀಗಾಗಿ, ಎಲ್ಲಾ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬಹುದು ಎಂದರು.

ನಂತರ ಮಾತನಾಡಿದ ಕಾಲೇಜು ಪ್ರಾಂಶುಪಾಲರಾದ ಪ್ರತಿಭಾ ಪಾರ್ಶ್ವನಾಥ್, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದಕ್ಕೆ ಇದು ಸುವರ್ಣ ಅವಕಾಶ. ಹೀಗಾಗಿ, ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳು ಇಲ್ಲಿಗೆ ಬಂದು ಭಾಗವಹಿಸಿರುವುದು ಸಂತೋಷದ ವಿಷಯ ಎಂದು ತಿಳಿಸಿದರು.

ಎರಡು ದಿನಗಳು ನಡೆದ ಕಬ್ಬಡ್ಡಿ ಪಂದ್ಯಾವಳಿಗಳಲ್ಲಿ ಭಾಗವಹಿಸಿ ದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಬಹುಮಾನಗಳನ್ನು ಸಹ ವಿತರಿಸಲಾಯಿತು. ಕಾಲೇಜು ದೈಹಿಕ ಶಿಕ್ಷಣದ ವಿಭಾಗದ ಮುಖ್ಯಸ್ಥರಾದ ಸಣ್ಣ ಚಿಕ್ಕಯ್ಯ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ