Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬೆಂಗಳೂರಿಗರ ಸಮಯ ರಸ್ತೆಯಲ್ಲಿ ವ್ಯರ್ಥವಾಗಲು ಬಿಡಲ್ಲ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.7: ವಾರದಲ್ಲಿ ಮೂರು ದಿನ ಬೆಂಗಳೂರಿನಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುತ್ತಿದ್ದು, ಇದನ್ನು ಸುಧಾರಿಸಲು ಮೆಟ್ರೋ ಇನ್ನಿತರೆ ಸಾರಿಗೆ ವ್ಯವಸ್ಥೆಗಳ ಸಂಪರ್ಕಕೊಂಡಿ ಯೋಜನೆ ಅಗತ್ಯವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಹೊರ ವರ್ತುಲ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಹೊರವರ್ತುಲ ರಸ್ತೆ ಕಂಪನಿಗಳ ಸಂಘದ (ಓಆರ್‌ಆರ್‌ಸಿಎ) ಸದಸ್ಯರೊಂದಿಗೆ ಕಾಡುಬೀಸನಹಳ್ಳಿಯಲ್ಲಿ ನಡೆದ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.

ಬೆಂಗಳೂರಿಗರ ಸಮಯ ರಸ್ತೆಗಳಲ್ಲಿ ವ್ಯರ್ಥವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಬೆಂಗಳೂರಿನ ಐದನೇ ಒಂದು ಭಾಗದಷ್ಟು ಆದಾಯ ಹೊರ ವರ್ತುಲ ರಸ್ತೆಯ ಉದ್ದಿಮೆಗಳಿಂದಲೇ ಬರುತ್ತಿದೆ. ನಮಗೆ ಬೆಂಗಳೂರಿನ ಹಾಗೂ ಹೊರ ವರ್ತುಲ ರಸ್ತೆಯ ಉದ್ದಿಮೆಗಳ ಮಹತ್ವ ಮತ್ತಿತರ ವಿಚಾರಗಳ ಬಗ್ಗೆ ಅರಿವಿದೆ. ನಿಮಗೆ ಹಾಗೂ ನಿಮ್ಮ ನೌಕರರರಿಗೆ, ಆ ಭಾಗದ ನಿವಾಸಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಸಮಸ್ಯೆ ನಿವಾರಿಸುವುದೇ ನಮ್ಮ ಆದ್ಯತೆ ಎಂದರು.

ಹೆಚ್ಚು ಸಂಚಾರ ದಟ್ಟಣೆ ಉಂಟಾಗುವ 6 ರಿಂದ 8 ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಸಂಚಾರ ದಟ್ಟಣೆಗೆ ಇರುವ ಸಮಸ್ಯೆಗಳನ್ನು ಮೊದಲು ನಿವಾರಿಸಲಾಗುವುದು. ಮುಂದಿನ ಮೂರು ತಿಂಗಳಲ್ಲಿ ರಸ್ತೆ ಗುಂಡಿ ಸಮಸ್ಯೆ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗಿರುವ ಅನಧಿಕೃತ ಅಂಗಡಿ- ಮುಂಗಟ್ಟುಗಳನ್ನು ಗುರುತಿಸಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ತೆರವುಗೊಳಿಸಲಾಗುವುದು.

ಬೆಂಗಳೂರು ಯೋಜಿತ ನಗರವಲ್ಲ. ಕಳೆದ 30 ವರ್ಷಗಳಲ್ಲಿ ಹೆಚ್ಚು ಬೆಳವಣಿಗೆ ಕಂಡಿದೆ. ಇಲ್ಲಿ ಸಂಚಾರ ದಟ್ಟಣೆಯೊಂದೆ ಸಮಸ್ಯೆಯಲ್ಲ, ಘನತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು, ವಸತಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ಈ ನಗರ ಹೊಂದಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಸವಾಲು ನಮ್ಮ ಮುಂದಿದೆ. ಬೆಂಗಳೂರಿನ ಪೊಲೀಸ್, ಬಿಬಿಎಂಪಿ, ಬಿಡಿಎ, ಮೆಟ್ರೋ ಕಮಿಷನರ್‌ಗಳಿಗೆ ಸಂಚಾರ ದಟ್ಟಣೆ ಬಗ್ಗೆ ಅರಿವಿದೆ, ಅವರುಗಳು ಸಹ ಸರ್ಕಾರದ ಒತ್ತಾಸೆಯಂತೆ ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.

ಬೆಂಗಳೂರಿನ ತೆರಿಗೆ ಸಂಗ್ರಹದಲ್ಲಿ ಕೊರತೆ:

ಬೆಂಗಳೂರಿನ ಸಾಮರ್ಥ್ಯಕ್ಕೆ ಅನುಗುಣವಾಗಿ ತೆರಿಗೆ ಹಣ ಸಂಗ್ರಹವಾಗುತ್ತಿಲ್ಲ. ಈ ಬಗ್ಗೆ ನನಗೆ ಅಸಮಧಾನವಿದೆ. ಜನರು ಹಾಗೂ ಉದ್ದಿಮೆಗಳು ತಮ್ಮ ಆಸ್ತಿಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕು. ಬೆಂಗಳೂರಿನ ಐಟಿ ಕಂಪೆನಿಗಳು ಸೇರಿದಂತೆ ಇತರೇ ಉದ್ದಿಮೆಗಳ ಮಾಲೀಕರು ತಮ್ಮ ಸಿಎಸ್ಆರ್ ಹಣವನ್ನು ಗ್ರಾಮೀಣ ಭಾಗದ ಶಿಕ್ಷಣಕ್ಕೆ ಖರ್ಚು ಮಾಡಬೇಕು. ನಗರ ಭಾಗದ ಮಕ್ಕಳಿಗೆ ದೊರೆಯುತ್ತಿರುವ ಉತ್ತಮ ಗುಣಮಟ್ಟದ ಶಿಕ್ಷಣ ಗ್ರಾಮೀಣ ಭಾಗದ ಮಕ್ಕಳಿಗೂ ದೊರೆಯಬೇಕು ಎನ್ನುವ ಸರ್ಕಾರದ ಕನಸಿಗೆ ನೀವೆಲ್ಲಾ ಕೈಜೋಡಿಸಬೇಕು.

45 ಮೀಟರ್ ರಸ್ತೆ ಯೋಜನೆ ಪರಿಶೀಲನೆ:

ಮಹದೇವಪುರ ವಲಯ ಹೊರ ವರ್ತುಲ ರಸ್ತೆಯಿಂದ ಭೋಗನಹಳ್ಳಿ, ಗುಂಜೂರು ಹಾಗೂ ವರ್ತೂರು ಮುಖಾಂತರ ಹೊಸ ಪಿ.ಆರ್.ಆರ್ ರಸ್ತೆಗೆ ಸಂಪರ್ಕ ಕಲ್ಪಿಸಲು 5.6 ಕಿ.ಮೀ ಉದ್ದದ 45 ಮೀಟರ್ ಅಗಲದ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಪೈಕಿ 4 ಕಿ.ಮೀ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ 1.6 ಕಿ.ಮೀ ರಸ್ತೆ ಕಾಮಗಾರಿ ಬಾಕಿಯಿದೆ. ಬಾಕಿ ರಸ್ತೆ ಕಾಮಗಾರಿಯಲ್ಲಿ ರೈಲ್ವೆ ಮೇಲು ಸೇತುವೆ ಕಾಮಗಾರಿ ಹಾಗೂ ಅರಣ್ಯ ಇಲಾಖೆಯಿಂದ ಜಾಗ ಪಡೆಯಬೇಕಿದ್ದು, ಅಗತ್ಯ ಕ್ರಮಗಳನ್ನು ಕೈಗೊಂಡು ಬಾಕಿ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ