Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆನಡಾದಲ್ಲಿ ಕನ್ನಡಿಗನ ಬರ್ಬರ ಹತ್ಯೆ

ಸುದ್ದಿಮೂಲ ವಾರ್ತೆ ಬೆಂಗಳೂರು, ೆ.09:
ಕೆನಡಾದಲ್ಲಿ ಬೆಂಗಳೂರು ಮೂಲದ ಟೆಕಿಯೊಬ್ಬರನ್ನು ಗುಂಡಿಟ್ಟು ಬರ್ಬರವಾಗಿ ಹತ್ಯೆೆ ಮಾಡಲಾಗಿದೆ.
ನೆಲಮಂಗಲ ತಾಲೂಕಿನ ತ್ಯಾಾಮಗೊಂಡ್ಲು ಗ್ರಾಾಮದ ನಿವಾಸಿ ಚಂದನ್ ಕುಮಾರ್ (37) ಮೃತಪಟ್ಟವರೆಂದು ಗುರುತಿಸಲಾಗಿದೆ. ಮಗನ ಹತ್ಯೆೆ ಸುದ್ದಿ ಕೇಳಿ ಬೆಂಗಳೂರಿನಲ್ಲಿ ನೆಲೆಸಿರುವ ಇಡೀ ಕುಟುಂಬವು ಆಘಾತಗೊಂಡಿದೆ.
ಕೆನಡಾದ ವುಡ್ ಬೈನ್ ಶಾಪಿಂಗ್ ಮಾಲ್‌ನ ಪಾರ್ಕಿಂಗ್‌ನಲ್ಲಿ ೆ.7ರ ಮಧ್ಯಾಾಹ್ನ ಗುಂಡಿನ ದಾಳಿ ನಡೆದಿದೆ. ಈ ವೇಳೆ ಕಾರಿನಲ್ಲಿದ್ದ ಚಂದನ್ ಕುಮಾರ್ ಅವರ ಮೇಲೂ ಗುಂಡು ಹಾರಿಸಿದ್ದರು. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆೆಗೆ ಸಾಗಿಸುವ ಮಾರ್ಗ ಮಧ್ಯೆೆದಲ್ಲಿಯೇ ಮೃತಪಟ್ಟಿಿದ್ದಾರೆ ಎಂದು ಟೊರೆಂಟೋ ಪೊಲೀಸರು ತಿಳಿಸಿದ್ದಾರೆ. ಆದರೆ, ಹತ್ಯೆೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ನೆಲಮಂಗಲ ತಾಲೂಕಿನ ತ್ಯಾಾಮಗೊಂಡ್ಲು ಗ್ರಾಾಮದ ನಿವೃತ್ತ ಶಿಕ್ಷಕ ನಂದಕುಮಾರ್ ಪುತ್ರ ಚಂದನ್ ಕುಮಾರ್ ಅವರು ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಿಯಾಗಿ ಕಳೆದ 7 ವರ್ಷಗಳಿಂದ ಕೆಲಸ ಮಾಡುತ್ತಿಿದ್ದರು.
ಚಂದನ್ ಕುಮಾರ್ ಹತ್ಯೆೆಯಾಗಿರುವ ಬಗ್ಗೆೆ ಕುಟುಂಬಸ್ಥರಿಗೆ ಭಾನುವಾರ ರಾತ್ರಿಿ 10 ಗಂಟೆಗೆ ಕೆನಡಾ ಪೊಲೀಸರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿಿದೆ. ಇದ್ದ ಒಬ್ಬನೇ ಮಗನನ್ನ ಕಳೆದುಕೊಂಡ ಪೋಷಕರು ಕಣ್ಣೀರು ಹಾಕಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಮೃತ ಚಂದನ್ ಕುರ್ಮಾ ಪೋಷಕರು, ನನ್ನ ಮಗ ಅಮೆರಿಕಾದಲ್ಲಿ ಕೆಲಸ ಮಾಡಬೇಕು ಎಂದು ಬಯಸಿದ್ದು. ಆದರೆ, ಅಲ್ಲಿ ಕೆಲಸ ಸಿಗದಿರುವುದರಿಂದ ಕೆನಡಾಕ್ಕೆೆ ಹೋಗಿದ್ದ. ಮದುವೆ ಮಾಡಿಕೊಳ್ಳುವಂತೆ ಹಲವು ಸಲ ಹೇಳಿದ್ದೆವು. ಮದುವೆ ಮಾಡಿಕೊಂಡಿದ್ದರೆ ಆತ ಭಾರತದಲ್ಲಿಯೇ ಇರುತ್ತಿಿದ್ದ. ಆತನ ಸಾವು ದಿಗ್ಭ್ರಮೆ ಮೂಡಿಸಿದೆ. ಮಗನ ಪ್ರಾಾರ್ಥಿವ ಶರೀರವನ್ನು ಭಾರತಕ್ಕೆೆ ಕಳುಹಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆೆ ಮನವಿ ಮಾಡಿದ್ದೇವೆ, ಆತನ ಜನ್ಮಭೂಮಿಯಲ್ಲಿ ಅಂತ್ಯಸಂಸ್ಕಾಾರ ಮಾಡಬೇಕು ಎಂದು ಅಳಲು ತೋಡಿಕೊಂಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ