Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಚ.ಆರ್. ಶ್ರೀನಾಥ್ ನಿವಾಸಕ್ಕೆ ಭೇಟಿ ನೀಡಿದ ಬಸವರಾಜ್‌ ದಡೇಸೂಗೂರು

ಸುದ್ದಿಮೂಲವಾರ್ತೆ

ಕನಕಗಿರಿ,ಏ.೮- ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ವಂಚಿತ ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಆರ್.ಶ್ರೀನಾಥ್ ಅವರ ನಿವಾಸಕ್ಕೆ ಕನಕಗಿರಿ ಬಿಜೆಪಿ ಶಾಸಕ ಬಸವರಾಜ ದಢೇಸೂಗೂರು ಭಾನುವಾರ ಗುಪ್ತವಾಗಿ ಭೇಟಿ ನೀಡಿ ಶ್ರೀನಾಥರನ್ನು ಬಿಜೆಪಿ ಸೇರ್ಪಡೆಗೆ ಆಹ್ವಾನಿಸಿದ್ದಾರೆಂದು ತಿಳಿದಿದೆ.
ಪ್ರಸಕ್ತ ಚುನಾವಣೆ ಕುರಿತು ಬಸವರಾಜ ಮತ್ತು ಶ್ರೀನಾಥರು ರಹಸ್ಯವಾಗಿ ಸುರ್ಧೀರ್ಘವಾಗಿ ಮಾತುಕತೆ ನಡೆಸಿ ಬಿಜೆಪಿ ಪಕ್ಷಕ್ಕೆ ತಾವು ಸೇರುವುದಾದರೆ ಕೂಡೇ ನಮ್ಮ ಪಕ್ಷದ ಜಿಲ್ಲಾ ಮತ್ತು ರಾಜ್ಯ ಮಟ್ಟದ ನಾಯಕರ ಗಮನಕ್ಕೆ ತರುವೆ. ಬಿಜೆಪಿ ಸೇರದಿದ್ದರೂ ಪ್ರಸಕ್ತ ಚುನಾವಣೆಯಲ್ಲಿ ತಮಗೆ ತಾವು ಮತ್ತು ತಮ್ಮ ಬೆಂಬಲಿಗರನ್ನು ಬೆಂಬಲಿಸುವಂತೆ ಬಸವರಾಜ ದಢೇಸೂಗೂರು ಮನವಿ ಮಾಡಿದ್ದಾರೆಂದು ಅಲ್ಲಿದ್ದ ಪ್ರತ್ಯಕ್ಷದರ್ಶಿಗಳಿಂದ ತಿಳಿದಿದೆ.

ಗಂಗಾವತಿ ಕಾಂಗ್ರೆಸ್ ಟಿಕೆಟ್‌ನಿಂದ ವಂಚಿರಾಗಿದ್ದರಿಂದ ಹೆಚ್. ಆರ್. ಶ್ರೀನಾಥ್ ಈಗಾಗಲೇ ತಮ್ಮ ಪಕ್ಷದ ರಾಜ್ಯ ಮತ್ತು ಕೇಂದ್ರ ವರಿಷ್ಠರ ಹಾಗೂ ಜಿಲ್ಲಾ ಮಟ್ಟದ ನಾಯಕರ ವಿರುದ್ಧ ತಮ್ಮ ಅಸಮಧಾನ ಹೊರ ಹಾಕುವುದರೊಂದಿಗೆ ಮುಂದಿನ ನಿಲುವಿನ ಬಗ್ಗೆ ಇದೆ ತಿಂಗಳ ೧೯ರ ನಂತರ ಪ್ರಕಟಿಸುವುದಾಗಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ನೀಡಿದ ಮರು ದಿನವೇ ಬಿಜೆಪಿ ಶಾಸಕ ಬಸವರಾಜ ದಢೇಸೂಗೂರು ಶ್ರೀನಾಥರ ನಿವಾಸಕ್ಕೆ ಭೇಟಿ ನೀಡಿದ್ದು, ಗಂಗಾವತಿ-ಕನಕಗಿರಿ ವಿಧಾನ ಸಭಾ ಕ್ಷೇತ್ರಗಳ ರಾಜಕೀಯ ಕ್ಷೇತ್ರದ ವಲಯದಲ್ಲಿ ಅಚ್ಚರಿ ಮೂಡಿಸಿದೆ.

ಈ ಈರ್ವ ನಾಯಕರ ರಹಸ್ಯ ಭೇಟಿ ಸಹಜವಾಗಿ ರಾಜಕೀಯ ವಲಯದಲ್ಲಿ ಮಾತ್ರ ಸಂಚಲನ ಸೃಷ್ಠಿಸಿದ್ದಲ್ಲದೇ ಶಾಸಕ ಬಸವರಾಜ ದಢೇಸೂಗೂರು ಮತ್ತು ಹೆಚ್. ಆರ್. ಶ್ರೀನಾಥ್‌ರ ರಾಜಕೀಯ ವಿರೋಧಿಗಳನ್ನೂ ನಿದ್ರೆಗೆಡಿಸಿದೆ.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ