Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರಿನ ವರುಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಬಸವರಾಜ ಬೊಮ್ಮಾಯಿ‌

ಸುದ್ದಿಮೂಲ ವಾರ್ತೆ

ಮೈಸೂರು,ಮೇ.5: ( ಟಿ‌. ನರಸೀಪುರ) ವರುಣ ಮತ್ತು ಟಿ.‌ನರಸಿಪುರದಲ್ಲಿನ ಜಿಡ್ಡುಗಟ್ಟಿದ ಆಡಳಿತ ಬದಲಾವಣೆ ಆಗಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೈಸೂರಿನ‌ ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಹಾಗೂ ಟಿ. ನರಸಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರೇವಣ್ಣ ಪರವಾಗಿ ರೋಡ್ ಶೋ ನಡೆಸಿದ ಬಳಿಕ ಮಾತನಾಡಿದರು.

ವರುಣ ಕ್ಷೇತ್ರ ವರ್ಣಮಯ ಆಗಿದೆ. ರೈತರು, ಯುವಕರು, ಮಹಿಳೆಯರು ಎಲ್ಲರೂ ಸೇರಿ ಸೋಮಣ್ಣ ಅವರನ್ನು ಗೆಲ್ಲಿಸಿಕೊಂಡು ಬರಲು ಒಟ್ಟಾಗಿರುವುದರಿಂದ ಈ ಕ್ಷೇತ್ರ ವರ್ಣಮಯ ಆಗಿದೆ ಎಂದರು.

ಸೋಮಣ್ಣ ಬೆಳಿಗ್ಗೆ ಐದು ಗಂಟೆಗೆ ಎದ್ದು ಸೇವೆ ಆರಂಭಿಸುತ್ತಾರೆ. ಐದು ಗಂಟೆಗೆ ಎದ್ದು ಸೇವೆ ಮಾಡುವ ಸೋಮಣ್ಣ ಬೇಕಾ? ಬೇಡ್ವಾ, ಈ ಕ್ಷೇತ್ರದಲ್ಲಿ ಬದಲಾವಣೆ ಆಗಬೇಕಿದೆ. ಚಾಮರಾಜನಗರ, ಮೈಸೂರು ಅಭಿವೃದ್ಧಿ ಮಾಡಲು ಸೋಮಣ್ಣ ಬಂದಿದ್ದಾರೆ ಎಂದರು.

ಒಂದು ಕ್ಷೇತ್ರಕ್ಕೆ ತಾಲ್ಲೂಕು ಕೇಂದ್ರ ಇಲ್ಲ. ಈ ಜಿಡ್ಡುಗಟ್ಟಿದ‌ ಆಡಳಿತ ಎಷ್ಟು ದಿನ ಸಹಿಸಿಕೊಳ್ಳುತ್ತಿರಿ. ಯಾವ ನಾಯಕರು ಇಷ್ಟು ವರ್ಷ ಸೇವೆ ಮಾಡಿದ್ದಾರೆ. ಯಾವ ನಾಯಕ ಎಲ್ಲ ಜನರನ್ನು ತೆಗೆದುಕೊಂಡು ಹೋಗುವ ಶಕ್ತಿ ಇದೆ, ಆ ನಾಯಕರನ್ನು ನಾವು ಇಲ್ಲಿ ತಂದು ನಿಲ್ಲಿಸಿದ್ದೇವೆ ಎಂದರು.

ಟಿ. ನರಸಿಪುರ ಕ್ಷೇತ್ರದ ಅಭ್ಯರ್ಥಿ ಡಾ. ರೇವಣ್ಣ ಅವರು ಡಾಕ್ಟರ್. ವೃತ್ತಿ ಮಾಡಿ ಜನರ ಸೇವೆ ಮಾಡುವ ವೈದ್ಯರು ಬೇಕಾ? ಮನೆಯಲ್ಲಿಯೇ ಕುಳಿತು ಆದೇಶ ಮಾಡುವ ಶಾಸಕರು ಬೇಕಾ? ನೀವು ಯಾವಾಗ ಕರೆದರೂ ನಿಮ್ಮ ಸೇವೆಗೆ ಬರುತ್ತಾರೆ. ಎಲ್ಲ ಕಾರ್ಯಕರ್ತರು ಕನಿಷ್ಟ 10 ಮತಗಳನ್ನು ಹಾಕಿಸಿದರೆ, ರೇವಣ್ಣ 10 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದರು.

ವಿ. ಸೋಮಣ್ಣ ಅಂದರೆ ವಿಕ್ಟರಿ ಸೋಮಣ್ಣ ಅಂತ. ಇಲ್ಲಿ ಆಡಳಿತ ನಡೆಸಿದವರು ಜಿಡ್ಡುಗಟ್ಟಿದ ಆಡಳಿತ ನೀಡಿದ್ದಾರೆ‌. ನೀವು ಸೋಮಣ್ಣ ಅವರನ್ನು ಗೆಲ್ಲಿಸಿದರೆ, ಸಮೃದ್ದಿಯ ಸುಭೀಕ್ಷ ಸರ್ಕಾರ ಬರಲಿದೆ. ನಿಮ್ಮೆಲ್ಲೆರ ಆಶೀರ್ವಾದ ಇರಲಿ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ