Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸರ್ಕಾರ ಆರೋಪಿಗಳನ್ನು ರಕ್ಷಿಸುವ ಅನುಮಾನ ಮೂಡುತ್ತಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಾಮ ಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಪ್ರತಿಭಟನಾ ಧರಣಿ ನಡೆಸಿದರು.

ಜೈನ ಮುನಿ ಹತ್ಯೆ ಪ್ರಕರಣದ ಕುರಿತು ಶೂನ್ಯ ವೇಳೆಯಲ್ಲಿ ನಡೆದ ಚರ್ಚೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ ನೀಡಿದ ಉತ್ತರ ಖಂಡಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು.

ಧರಣಿಗೂ ಮೊದಲು ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜೈನ ಮುನಿ ಕೊಲೆಗೂ ಬೇರೆ ಕೊಲೆಗೂ ಹೋಲಿಕೆ ಮಾಡುವುದು ಸರಿಯಲ್ಲ. ಯಾರಿಗೂ ಹಿಂಸೆ ಬಯಸದ ಜೈನ ಮುನಿಗಳನ್ನು ಕರೆಂಟ್ ಶಾಕ್ ಕೊಟ್ಟು ಹತ್ತೆ ಮಾಡಿರಬೇಕೆಂದರೆ ಇದರ ಹಿಂದೆ ಷಡ್ಯಂತರ ಇದೆ‌. ಈ ಪ್ರಕರಣದಲ್ಲಿ ಅವರು ಕೊಂದು ಇಷ್ಟೊಂದು ತುಂಡು ಮಾಡಿ ಕೊಳವೆ ಬಾವಿಯಲ್ಲಿ ಹಾಕುವಷ್ಟು ಸಮಯ ಇದ್ದರೆ ಅವರು ಎಷ್ಟು ಪೂರ್ವ ನಿಯೋಜಿತ ಯೋಜನೆ ರೂಪಿಸಿದ್ದರು ಎನ್ನುವುದಕ್ಕೆ ಸಾಕ್ಷಿ ಎಂದು ಹೇಳಿದರು.

ಈ ಪ್ರಕರಣದಲ್ಲಿ ಯಾರನ್ನೋ ರಕ್ಷಣೆ ಮಾಡುವ ಪ್ರಯತ್ನ‌ ನಡೆಸಿದ್ದೀರಿ ಎನ್ನುವ ಅನುಮಾನ ಮೂಡುತ್ತಿದೆ. ಪ್ರಕರಣವನ್ನು ಸಿಬಿಐಗೆ ಕೊಡುವುದರಿಂದ ರಾಜ್ಯ ಪೊಲಿಸರ ಘನತೆ ಏನು ಕಡಿಮೆ ಆಗುವುದಿಲ್ಲ. ಅನೇಕ ಪ್ರಕರಣಗಳನ್ನು ಹಿಂದೆ ಸಿಬಿಐಗೆ ಕೊಟ್ಟಿದ್ದಾರೆ. ಈ ಪ್ರಕರಣ ಸಿಬಿಐಗೆ ಕೊಡುವುದರಿಂದ ಏನು ಕಳೆದುಕೊಳ್ಳುವುದಿದೆ. ಸಿಬಿಐಗೆ ಕೊಡದಿದ್ದರೆ ಅನುಮಾನ ಹುಟ್ಟುತ್ತದೆ. ನೀವು ಸಿಪಿಐ, ಇನ್ಸ್ ಪೆಕ್ಟರ್ ನಿಂದ ತನಿಖೆ ಮಾಡಿಸಲು ಬಯಸುತ್ತಿದ್ದೀರಿ ಇದರ ವಿರುದ್ದ ಪ್ರತಿಭಟನೆ ನಡೆಸುತ್ತೇವೆ ಎಂದು ಸದನದ ಬಾವಿಗಿಳಿದು ಧರಣಿ ನಡೆಸಿದರು.

ಆರೋಪಿಗಳ ಮೇಲೆ ಕ್ರಮಣಕ್ಕೆ ಆಗ್ರಹ:

ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ವೇಣುಗೋಪಾಲ ಎನ್ನುವ ವ್ಯಕ್ತಿಯನ್ನು ಬರ್ಬರ ಹತ್ಯೆ ಮಾಡಲಾಗಿದೆ ಹಂತರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಹನುಮ ಜಯಂತಿ ಕಾರ್ಯಕ್ರಮದಲ್ಲಿ ಅವಕಾಶ ನೀಡಲಿಲ್ಲಿ

ದೇವರ ಫೋಟೊ ಜಾಗದಲ್ಲಿ ಪುನಿತ್ ರಾಜಕುಮಾರ್ ಫೋಟೊ ಇಡುವ ಕುರಿತು ಮಣಿಕಂಠ, ವೇಣುಗೋಪಾಲ ನಡುವೆ ಗಲಾಟೆಯಾಯಿತು.

ಮಾರನೇ ದಿನ ಮಾತುಕತೆ ಮಾಡಲು ಕರೆಯಿಸಿಕೊಂಡು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಅವರನ್ನು ಆಸ್ಪತ್ರೆಗೆ ತೆಗೆದುಕೊಂಡು ಹೊಗುವಾಗ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.

ಇಷ್ಟು ಸಣ್ಣ ವಿಚಾರಕ್ಕೆ ಕೊಲೆಯಾಗಿದ್ದರೆ ಇದು ಆಘಾತಕಾರಿ , ಧಾರ್ಮಿಕ ಆಚರಣೆಗಳು ನಿರಂತರ ನಡೆಯುತ್ತವೆ. ಈ ರೀತಿಯ ಕೊಲೆಗಳು ಸಮಾಜದ ಮೇಲೆ ಪರಿಣಾಮ ಬೀರುತ್ತವೆ. ಇದರಲ್ಲಿ ಯಾರೇ ಇದ್ದರೂ ಅವರ ವಿರುದ್ದ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಈ ರೀತಿಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಪೊಲಿಸರು ಇನ್ನೂ ಯಾರನ್ನೂ ಬಂಧಿಸಿಲ್ಲ. ಆದರೆ ಮೆಲಧಿಕಾರಿಗಳು ಆರೋಪಿಗಳ ಹೆಸರುಗಳನ್ನು ಹೇಳಿ ದಾರಿ ತಪ್ಪಿಸುತ್ತಿದ್ದಾರೆ. ಸಕಲೇಶಪುರ, ಕಲಬುರ್ಗಿ, ನಂಜನಗೂಡಿನಲ್ಲಿ ಹಲವು ಪ್ರಕರಣಗಳು ನಡೆದಿವೆ. ಇಂತಹ ಪ್ರಕರಣಗಳನ್ನು ಸರ್ಕಾರ ಗಂಭಿರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಹೇಳಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ