Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡು ದಿನಗಳಲ್ಲಿ ಗೊಂದಲ ಬಗೆಹರಿಯಲಿದೆ: ಬಸವರಾಜ ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಹುಬ್ಬಳ್ಳಿ,ಏ.15: ಎರಡು ದಿನಗಳಲ್ಲಿ ಭಿನ್ನಮತದ ಸಮಸ್ಯೆ ಬಗೆಹರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಾಸಕ ನೆಹರೂ ಓಲೇಕಾರ್ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿ ಅವರು ಆರೋಪಗಳಿಗೆ ದಾಖಲೆ ಕೊಡಲಿ‌. ನೆಹರೂ ಒಲೆಕಾರ್ ಅವರಿಗೆ ಪ್ರಕರಣವೊಂದರಲ್ಲಿ ಅಪರಾಧ ಸಾಬೀತಾಗಿದೆ ಎಂದರು.

ಇಂದು ಇಡೀ ದಿನ ಕ್ಷೇತ್ರದಲ್ಲಿ ಇರುವುದಾಗಿ ತಿಳಿಸಿದ ಅವರು, ರಾಜ್ಯದಲ್ಲಿ ಚುನಾಚಣೆ ಕಣ ಸಿದ್ದವಾಗಿದೆ. ಸಂಪೂರ್ಣ ಬಹುಮತ ದೊರೆಯಲಿದೆ ಎಂಬ ಆತ್ಮವಿಶ್ವಾಸ ನಮಗಿದೆ ಎಂದರು. ಉಳಿದ ಕ್ಷೇತ್ರಗಳಿಗೆ ಇನ್ನೆರಡು ದಿನಗಳಲ್ಲಿ ಕೇಂದ್ರ ಚುನಾವಣೆ ಸಮಿತಿ ತೀರ್ಮಾನ ಮಾಡಲಿದ್ದು, ಹನ್ನೆರಡು ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ ಎಂದರು.

ಜಗದೀಶ ಶೆಟ್ಟರ್ ಅವರ ಮನವೊಲಿಕೆಗೆ ಇಂದಿಗೂ ಪ್ರಯತ್ನ ನಡೆಯುತ್ತಿದ್ದು, ನಿನ್ನೆ ಧರ್ಮೇಂದ್ರ ಪ್ರಧಾನ ಅವರ ಬಳಿ ಚರ್ಚೆ ಮಾಡಲಾಗಿದೆ ಎಂದರು.

ಜಗದೀಶ್ ಶೆಟ್ಟರ್ ಅವರನ್ನು ಉಳಿಸಿಕೊಳ್ಳುವ ವಿಶ್ವಾಸ ಜಗದೀಶ್ ಶೆಟ್ಟರ್ ಅವರದ್ದು, ಜನಸಂಘ ಕಾಲದ ಮನೆತನ. ಬಿಜೆಪಿಗೆ ಅವರು ಅತ್ಯಂತ ನಿಷ್ಠರು.

ಉತ್ತರ ಕರ್ನಾಟಕ ಭಾಗಕ್ಕೆ ಅತ್ಯಂತ ಅವಶ್ಯಕವಾಗಿದ್ದಾರೆ. ಅತ್ಯಂತ ಅವಶ್ಯ ಇರೋ ನಾಯಕ.ಅವರನ್ನು ಉಳಿಸಿಕೊಳ್ಳಬೇಕೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಮಾತನಾಡಿದ್ದು, ಅವರನ್ನು ಉಳಿಸಿಕೊಳ್ಳುವ ವಿಶ್ವಾಸ ಇದೆ ಎಂದರು.

ಶೆಟ್ಟರ್ ಅವರಿಗೆ ಟಿಕೆಟ್ ತಪ್ಪಲು ಸಿಎಂ ಅವರೇ ಕಾರಣ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ

ನೀಡಿದ ಮುಖ್ಯಮಂತ್ರಿಗಳು ಇದು ಸುಳ್ಳು ವದಂತಿ. ಯಾರೂ ಅದನ್ನು ಹೇಳಬಾರದು ಅತ್ಯಂತ ಪ್ರಾಮಾಣಿಕವಾಗಿ ಶೆಟ್ಟರ್ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದೇವೆ. ಹೇಳುವವರು ನೂರಾರು ಹೇಳುತ್ತಾರೆ. ಶೆಟ್ಟರ್ ಮತ್ತು ನಾವು ಆತ್ಮೀಯರು ಎಂದರು.

ಚುನಾವಣೆ ಒಂದು ಸವಾಲು ಕಾಂಗ್ರೆಸ್ ಗೆ ಚುನಾವಣೆ ಗೆಲ್ಲುವ ಶಕ್ತಿ ಇಲ್ಲ. ಚುನಾವಣೆ ಅಂದರೆ ಒಂದು ಸವಾಲು ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ