Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರೆಂಟಿ ಜಾರಿಗೊಳಿಸದೇ ಸರ್ಕಾರ ದೋಖಾ ಮಾಡಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಹೊಸ ಕಾಂಗ್ರೆಸ್ ಸರ್ಕಾರ ಮೊದಲ ದಿನವೇ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿದೆ. ಜನರಿಗೆ ಯಾವ ಗ್ಯಾರೆಂಟಿ ಹೇಳಿದ್ದರೊ ಅದನ್ನು ಅನುಷ್ಠಾನ ಮಾಡುವಲ್ಲಿ ಮೋಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಮನೆಯಲ್ಲಿ ಯಾರು ಯಜಮಾನಿ ಅಂತ ಹೇಳಿ ಮನೆಗಳಲ್ಲಿ ಗಲಾಟೆ ಶುರುವಾಗುವಂತೆ ಮಾಡಿದ್ದಾರೆ. ಗೃಹ ಜ್ಯೋತಿ ಯೋಜನೆ ಘೋಷಿಸಿ ಮೂರು ಪಟ್ಟು ಬಿಲ್ ಏರಿಸಿ ಜನರಿಗೆ ಭಾರ ಮಾಡಿದ್ದಾರೆ. ಬಸ್ ಗಳಲ್ಲಿ ಗೊಂದಲ ಹೆಚ್ಚಾಗಿದೆ. ಶಾಲಾ ಮಕ್ಕಳಿಗೆ ಬಸ್ ಇಲ್ಲ. ಕಿಟಕಿಯಲ್ಲಿ ಬಸ್ ಹತ್ತುವಂತಾಗಿದೆ.

ಯುವ ನಿಧಿ ಏನಾಗಿದೆ ಗೊತ್ತಿಲ್ಲ. ಅಕ್ಕಿಯಲ್ಲಿ ದೊಡ್ಡ ಗೊಲ್ ಮಾಲ್ ನಡೆಯುತ್ತಿದೆ. ಎಷ್ಟು ಅಕ್ಕಿ ಕೊಡುತ್ತಾರೆ ಗೊತ್ತಿಲ್ಲ. ಈ ಸರ್ಕಾರದ ಮುಖವಾಡ ಬಯಲಾಗಿದೆ. ಇವರ ಬಣ್ಣ ಬಯಲಾಗಿದೆ ಎಂದು ವಾಗ್ದಾಳಿ ‌ನಡೆಸಿದರು.
ಗ್ಯಾರೆಂಟಿ ಯೋಜನೆಗಳ ಗೊಂದಲಗಳ ಕುರಿತು ಚರ್ಚಿಸಲು ನಾವು ಅವಕಾಶ ಕೇಳಿದ್ದೇವೆ.

ಅದಕ್ಕೆ ಅವಾಕಶ ಕೊಡದೇ ಸರ್ಕಾರ ಹಠಮಾರಿತನ, ಮೊಂಡತನ ಮಾಡುತ್ತಿದೆ. ಸಭಾಧ್ಯಕ್ಷರ ಮೇಲೆ ಒತ್ತಡ ತಂದು ಅವಕಾಶ ಕೊಡದಂತೆ ತಡೆಯುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಬರ ಬಂದಿದೆ. ಕುಡಿಯುವ ನೀರಿನ ಸಮಸ್ಯೆ ಇದೆ.‌ ಇದೆಲ್ಲದರ ಬಗ್ಗೆ ಚರ್ಚೆ ಮಾಡಬೇಕಿದೆ. ಸರ್ಕಾರ ಮೊದಲ ದಿನವೇ ವಿರೋಧ ಪಕ್ಷವನ್ನು ಬಾವಿಗೆ ತಳ್ಳುವ ಕೆಲಸ ಮಾಡಿದೆ.

ಸರ್ಕಾರ ದೊಖಾ ಮಾಡಿದೆ. ನಮ್ಮ ಬೇಡಿಕೆ ಇಷ್ಟೆ ನೀವು ಕೊಟ್ಟ ಭರವಸೆ ಈಡೇರಿಸಿ ಎಂದು ಆಗ್ರಹಿಸಿದ್ದೇವೆ ಎಂದರು.

ಈ ಸರ್ಕಾರ ಮುಂದಿನ ಕಲಾಪದ ಬಗ್ಗೆ ಚರ್ಚೆ ಮಾಡುವ ಕುರಿತು ಕಲಾಪ ಸಲಹಾ ಸಮಿತಿ ಸಭೆ ಕರೆದಿದೆ. ಈಗಿನ ಗೊಂದಲ ಬಗೆ ಹರಿಸದೇ ಮುಂದಿನ ಕಲಾಪದ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ. ಹೀಗಾಗಿ ನಾವು ಬಿಎಸ್ ಸಿ ಬಹಿಷ್ಕಾರ ಮಾಡಿದ್ದೇವೆ. ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಹೇಳಿದರು.

ಇನ್ನು ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುವ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜನಪರ ಕಾನೂನುಗಳನ್ನು ಜಾರಿಗೆ ತಂದಿದ್ದೇವೆ ಅವು ಕಾಂಗ್ರೆಸ್ ನವರಿಗೆ ಬೇಡವಾಗಿರಬಹುದು. ಜನ ಬಯಸಿದ್ದನ್ನು ನಾವು ಮಾಡಿದ್ದೇವು ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ