Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಿಯುವ ನೀರಿನ ಬಗ್ಗೆ ಮುನ್ನೆಚ್ಚರಿಕೆ ವಹಿಸಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.24: ರಾಜ್ಯದ ಯಾವ ಗ್ರಾಮಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸುವಹಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದರು.

ಬರಗಾಲ ನಿರ್ವಹಣೆ ಮತ್ತು ಕುಡಿಯುವ ನೀರು, ಮೇವಿನ ಬಗ್ಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್ ಅವರ ಜೊತೆ ಶುಕ್ರವಾರ ಸಭೆ ನಡೆಸಿದರು.

ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಕುಡಿಯುವ ನೀರಿನ ಸಮಸ್ಯೆಗಳಿರುವ ಗ್ರಾಮಗಳನ್ನು ಜಿಲ್ಲಾಧಿಕಾರಿಗಳು ಮೊದಲು ಗುರುತಿಸಬೇಕು. ಇಂತಹ ಗ್ರಾಮಗಳಲ್ಲಿ ಖಾಸಗಿ ಬೋರ್ ವೆಲ್ ಖರೀದಿಸಿ ಎಲ್ಲೇ ನೀರಿನ ಸಮಸ್ಯೆ ಕಂಡುಬಂದರೂ 24 ಗಂಟೆಯಲ್ಲಿ ನೀರನ್ನು ಪೂರೈಸಬೇಕು ಎಂದು ಸೂಚಿಸಿದರು.

ಬೋರ್ ವೆಲ್ ಖರೀದಿಗೆ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ದರ ನಿಗದಿಗೊಳಿಸಬೇಕು. ಟ್ಯಾಂಕರ್ ಮೂಲಕ ನೀರನ್ನು ಪೂರೈಸುವುದಾದರೆ, ಟೆಂಡರ್ ಕರೆಯಿಸಿ. 15 ದಿನಗಳ ಒಳಗಾಗಿ ಬಿಲ್ ಪಾವತಿ ಮಾಡಿ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತಿಗಳು ತಮ್ಮ ಖಾತೆಯಲ್ಲಿರುವ ಹಣವನ್ನು ಬಳಸಿಕೊಳ್ಳಬಹುದು. ಕುಡಿಯುವ ನೀರಿಗಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲೂ ಹಣ ಇದ್ದು ಇದನ್ನು ಬಳಸಿಕೊಳ್ಳಬಹುದು ಎಂದರು.

ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಈ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಬೇಕು. ಅಲ್ಲದೆ, ಮೇವಿಗೂ ಕೊರತೆಯಾಗದಂತೆ ಜಾಗೃತವಹಿಸಬೇಕು. ಈಗಾಗಲೇ ನೀರಿನ ಲಭ್ಯತೆ ಇರುವ ರೈತರಿಗೆ ಉಚಿತ ಮೇವಿನ ಕಿಟ್ ನೀಡಲಾಗಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಮೇವಿನ ಕೊರತೆ ಇಲ್ಲ. ಆದರೆ, ರಾಜ್ಯದ ಮೇವು ಪಕ್ಕದ ರಾಜ್ಯಕ್ಕೆ ಕಳ್ಳಸಾಗಾಣೆಯಾಗದಂತೆ ನೋಡಿಕೊಳ್ಳಿ ಎಂದು ಅವರು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ