Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಬೆಹತರ್‌ ಭಾರತ್‌ ಬುನಿಯಾದಿ” ಸಮಾವೇಶ

ಸುದ್ದಿಮೂಲ ವಾರ್ತೆ

ಬೆಂಗಳೂರು,ಜೂ.30; ರಾಷ್ಟ್ರೀಯ ಯುವ ಕಾಂಗ್ರೆಸ್‌ ನಿಂದ ಮುಂದಿನ ತಿಂಗಳು ನಡೆಯಲಿರುವ “ಬೆಹತರ್‌ ಭಾರತ್‌ ಬುನಿಯಾದಿ” ರಾಷ್ಟ್ರೀಯ ಕಾರ್ಯಕ್ರಮ ಉದ್ಘಾಟಿಸುವಂತೆ ಯುವ ಕಾಂಗ್ರೆಸ್‌ ನಿಯೋಗ ಮುಖ್ಯಮಂತ್ರಿ ಸಿದ್ದರಾಮುಯ್ಯ ಅವರಿಗೆ ಆಹ್ವಾನ ನೀಡಿದೆ.

ಏಐಸಿಸಿ ಜಂಟಿ ಕಾರ್ಯದರ್ಶಿ ಯುವ ಕಾಂಗ್ರೆಸನ ಉತ್ಸವಾರಿ ಕೃಷ್ಣ ಅಳವಾರು, ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ, ಏಐಸಿಸಿ ಸದಸ್ಯರಾದ ಎಂ.ಎಸ್.‌ ರಕ್ಷಾ ರಾಮಯ್ಯ ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

“ಬೆಹತರ್‌ ಭಾರತ್‌ ಬುನಿಯಾದಿ” ಸಮಾವೇಶವನ್ನು ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆಸುತ್ತಿದ್ದು, ಯುವ ಸಮೂಹದ ಮೂಲಕ ದೇಶದಲ್ಲಿ ಯುವ ಶಕ್ತಿಯನ್ನು ಸೂಕ್ತ ದಿಕ್ಕಿನತ್ತ ಕೊಂಡೊಯ್ಯುವ ಉದ್ದೇಶ ಹೊಂದಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಅತಿ ದೊಡ್ಡ ಯುವ ಸಮಾವೇಶ ಇದಾಗಿದ್ದು, ಮೂರು ದಿನಗಳ ಪಕ್ಷದ ಹಿರಿಯ ಮುಖಂಡರು, ತಜ್ಞರು ವಿವಿಧ ವಿಷಯಗಳ ಬಗ್ಗೆ ಯುವ ಸಮೂಹಕ್ಕೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ರಕ್ಷಾ ರಾಮಯ್ಯ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ