Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುತ್ತಿಗೆ - ಹೊರಗುತ್ತಿಗೆ ಕಾರ್ಮಿಕರ ‘ಬೆಳಗಾವಿ ಚಲೋ’

 ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.08:
ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಕರ್ನಾಟಕ ಘಟಕದ ನೇತೃತ್ವದಲ್ಲಿ ಗುತ್ತಿಿಗೆ-ಹೊರಗುತ್ತಿಿಗೆ ಕಾರ್ಮಿಕರ ಬೆಳಗಾವಿ ಚಲೋ ಹೋರಾಟ ಡಿಸೆಂಬರ್ 9 ರ ಮಂಗಳವಾರ ನಡೆಯಲಿದೆ.
ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್‌ನ ಎ.ದೇವದಾಸ್ ಮತ್ತು ಡಾ.ಪ್ರಮೋದ್.ಎನ್ ಅವರು ಸುದ್ದಿಗಾರರಿಗೆ ಸೋಮವಾರ ಈ ಮಾಹಿತಿ ನೀಡಿದರು.
ಕರ್ನಾಟಕ ಸರ್ಕಾರದ 43 ಇಲಾಖೆ ಹಾಗೂ ನಿಗಮ ಮಂಡಳಿಗಳಲ್ಲಿ 25 ರಿಂದ 30 ವರ್ಷಗಳಿಂದ ಗುತ್ತಿಿಗೆ - ಹೊರಗುತ್ತಿಿಗೆ ಅಡಿಯಲ್ಲಿ ಸೇವೆ ಸಲ್ಲಿಸುತ್ತಿಿರುವ 3 ಲಕ್ಷಕ್ಕೂ ಅಧಿಕ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಲು ಒತ್ತಾಾಯಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ನೇತೃತ್ವದಲ್ಲಿ ಡಿಸೆಂಬರ್ 9ರ ಮಂಗಳವಾರ ಬೆಳಗಾವಿ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದರು.
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವಾರು ವರ್ಷಗಳಿಂದ ಸೇವೆಯಲ್ಲಿರುವ ಗುತ್ತಿಿಗೆ ಹೊರಗುತ್ತಿಿಗೆ ಕಾರ್ಮಿಕರು ಮತ್ತು ನೌಕರರನ್ನು ಅವರು ಸೇವೆ ಸಲ್ಲಿಸುತ್ತಿಿರುವ ಹುದ್ದೆೆಗಳಲ್ಲೇ ಖಾಯಂಗೊಳಿಸಬೇಕು. ಗುತ್ತಿಿಗೆ ಹೊರ ಗುತ್ತಿಿಗೆ ಕಾರ್ಮಿಕರು ಮತ್ತು ನೌಕರರ ಸೇವೆ ಖಾಯಂ ಮಾಡುವವರೆಗೆ ಅವರನ್ನು ಒಳಗುತ್ತಿಿಗೆ ಅಥವಾ ಸಹಕಾರ ಸಂಘದ ಮೂಲಕ ಅದೇ ಹುದ್ದೆೆಗಳಲ್ಲಿ ಮುಂದುವರೆಸಬೇಕು ಎಂದು ಅವರು ಆಗ್ರಹಿಸಿದರು.
ಸಮಾನ ಕೆಲಸಕ್ಕೆೆ ಸಮಾನ ವೇತನ ಖಾತ್ರಿಿಪಡಿಸಬೇಕು. ಕಳೆದ ಹಲವು ದಶಕಗಳಿಂದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈಗಲೂ ಸೇವೆ ಸಲ್ಲಿಸುತ್ತಿಿರುವ ಎಲ್ಲಾಾ ಗುತ್ತಿಿಗೆ, ಹೊರ ಗುತ್ತಿಿಗೆ ಕಾರ್ಮಿಕರು ಮತ್ತು ನೌಕರರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾಗೊಳಿಸಬಾರದು. ಈಗಾಗಲೇ ಕನಿಷ್ಟ ವೇತನ ಸಲಹಾ ಮಂಡಳಿಯಲ್ಲಿ ಅಂತಿಮಗೊಂಡಿರುವ ವಿವಿಧ ಉದ್ದಿಮೆಗಳ ಕಾರ್ಮಿಕರ ಪರಿಷ್ಕೃತ ಕನಿಷ್ಠ ವೇತನ 2022 ರಿಂದ ಪೂರ್ವಾನ್ವಯಗೊಳಿಸಿ ಈ ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ